ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ: ಸುರಳ್ಕರ್ ವಿಕಾಸ್ ಕಿಶೋರ್

Date:

Advertisements

“ಬೆಂಗಳೂರು ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಬಿಬಿಎಂಪಿ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.

ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಮೇ 1ರಂದು ಪೂರ್ವ ವಲಯದ ರಾಮಸ್ವಾಮಿ ಪಾಳ್ಯದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, “ಡೆಂಘೀ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಸೊಳ್ಳೆ ನಿಯಂತ್ರಣ ಕುರಿತು ಅರಿವು ಮೂಡಿಸುವ ಹಾಗೂ ಔಷಧಿ ಸಿಂಪಡಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ” ಎಂದು ಹೇಳಿದರು.

“ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಹೆಚ್ಚಾಗಲಿದ್ದು, ಅದನ್ನು ಫಾಗಿಂಗ್ ಮತ್ತು ಔಷಧಿ ಸಿಫಡಿಸುವ ಮೂಲಕ ತಡೆಯಬೇಕು. ಹೂವಿನ ಕುಂಡ, ಬೀಸಾಕಿದ ಟೈರ್, ನೀರು ಸಂಗ್ರಹಿಸುವ ತೊಟ್ಟಿ, ನೀರಿನ ಬಾಟಲ್ ಸೇರಿದಂತೆ ಇನ್ನಿತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಈ ಸಂಬಂಧ ಅಂತಹ ಜಾಗದಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

Advertisements

“ಆಯಾ ವಲಯದ ವಾರ್ಡ್ ಮಟ್ಟದಲ್ಲಿ ಒಂದು ವಾರ್ಡ್‌ಗೆ 4 ಔಷಧಿ ಸಿಂಪಡೆಣೆ ಮಾಡುವ ತಂಡಗಳನ್ನು ನಿಯೋಜನೆ ಮಾಡಿದ್ದು, ತಾತ್ಕಾಲಿಕವಾಗಿ ನೀರು ನಿಲ್ಲುವ ಸ್ಥಳ ಹಾಗೂ ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಫಾಗಿಂಗ್ ಮತ್ತು ಔಷಧಿ ಸಿಂಪಡಣೆ ಮಾಡಲಾಗುತ್ತದೆ” ಎಂದು ಹೇಳಿದರು.

ಲಾರ್ವಾ ಸಮೀಕ್ಷೆ ಪ್ರಾರಂಭ

ಈಡೀಸ್, ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಘೀ ರೋಗ ಹರಡುತ್ತದೆ. ಆ ಸೊಳ್ಳೆಗಳು ತೆರೆಡಿಟ್ಟ ನೀರಿನ ತೊಟ್ಟಿಗಳು, ಏರ್ ಕೂಲರ್ ಗಳು, ಹೂವಿನ ಕುಂಡದ ತಟ್ಟೆಗಳು, ಬಕೆಟ್‌ಗಳು, ಸೀಮೆಂಟ್ ತೊಟ್ಟಿಗಳು, ತೆಂಗಿನ ಚಿಪ್ಪುಗಳು, ಒಡೆದ ಟೈರ್‌ಗಳಲ್ಲಿ ಉತ್ಪತ್ತಿಯಾಗುತ್ತವೆ. ಈ ಸಂಬಂಧ ಪ್ರಾರಂಭಿಕ ಹಂತದಲ್ಲೇ ಸೊಳ್ಳೆ ನಿಯಂತ್ರಣ ಮಾಡಲು ಲಾರ್ವಾ ಉತ್ಪಿತ್ತಿಯಾಗುವ ತಾಣಗಳನ್ನು‌ ಗುರಿತಿಸಿ ನಾಶಪಡಿಸಲಾಗುತ್ತದೆ.

ಕೊಳಚೆ ಹಾಗೂ ಇನ್ನಿತರೆ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಮ್ಮ ಕ್ಲಿನಿಕ್ ವೈದ್ಯರ ತಂಡ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗಳ ತಂಡಗಳನ್ನು ರಚಿಸಿಕೊಂಡು ಮನೆ-ಮನೆ ಭೇಟಿ ನೀಡಿ ಡೆಂಘೀ ಪ್ರಕರಣಗಳ ಪತ್ತೆ ಹಚ್ಚುವ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಸಾಮಾಜಿಕ ಜಾಲತಾಣ, ಜಾಥಾ ಹಾಗೂ ಧ್ವನಿವರ್ಧಕಗಳ ಮೂಲಕ ಡೆಂಘೀ ಜಾಗೃತಿ ಅಭಿಯಾನ

ನಗರದಲ್ಲಿ ಡೆಂಘೀ ನಿಯಂತ್ರಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ಆಯಾ ವಲಯಗಳ ವಾರ್ಡ್ ಮಟ್ಟದಲ್ಲಿ ಜಾಗೃತಿ ಜಾಥಾ ಹಾಗೂ ಪಾಲಿಕೆಯ ಕಸದ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಡೆಂಘೀ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿಸಲಾಗುತ್ತಿದೆ. ಜತೆಗೆ ಮನೆ ಮನೆಗೆ ಡೆಂಘೀ ನಿಯಂತ್ರಣದ ಕುರಿತು ಬಿತ್ತಿಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಅಂತಾರಾಷ್ಟ್ರೀಯ ಸಸ್ಯ ಆರೋಗ್ಯ ದಿನಾಚರಣೆ

ಈ ವೇಳೆ ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಮದನಿ, ಪೂರ್ವ ವಲಯ ಆರೊಗ್ಯಾಧಿಕಾರಿಯಾದ ಡಾ. ಭಾಗ್ಯಲಕ್ಷ್ಮಿ, ಡೆಂಗೀ ನೋಡಲ್ ಅಧಿಕಾರಿಯಾದ ಸುಜಾತಾ, ಆರೋಗ್ಯ ವೈದ್ಯಾಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಮೇ 1 ರಿಂದ 13ನೇ ವರೆಗೆ ಬೆಂಗಳೂರಿನಲ್ಲಿ ಒಟ್ಟು 172 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಬೊಮ್ಮನಹಳ್ಳಿ 23, ಪೂರ್ವವಲಯ 41, ಮಹದೇವಪುರ 44, ಆರ್.ಆರ್ ನಗರ 8, ದಕ್ಷಿಣ ವಲಯ 34, ಪಶ್ಚಿಮ 16, ಯಲಹಂಕದಲ್ಲಿ 6 ಡೆಂಘೀ ಪ್ರಕರಗಳು ಪತ್ತೆಯಾಗಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X