ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ; ‘ಏನೇನೋ ಅಂದ್ಕೊಬೇಡಿ’ ಎಂದ ನಟ ದರ್ಶನ್

Date:

ಸದ್ಯ ಲೋಕಸಭಾ ಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಮಂಡ್ಯದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ಪ್ರಚಾರ ಆರಂಭಿಸಿದ್ದಾರೆ. ಈ ಬೆನ್ನಲ್ಲೇ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ಇದೀಗ, ಎಲ್ಲ ಚರ್ಚೆಗಳಿಗೂ ಸ್ವತಃ ದರ್ಶನ ಅವರೇ ಸ್ಪಷ್ಟನೆ ನೀಡಿದ್ದಾರೆ.

ಸುಮಲತಾ ಅಂಬರೀಶ್ ಬಿಜೆಪಿ ಸೇರಿದ ನಂತರ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವುದು ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಪ್ರಚಾರದ ವೇಳೆ ಮಾತನಾಡಿದ ನಟ ದರ್ಶನ್, “ನಾನು ಎಲ್ಲಿಯೂ ಪಕ್ಷದ ಪರವಾಗಿ ಪ್ರಚಾರಕ್ಕೆ ಬರುವುದಿಲ್ಲ. ನಾನು ವ್ಯಕ್ತಿಯ ಪರವಾಗಿ ಪ್ರಚಾರ ಮಾಡುತ್ತೇನೆ. ಐದು ವರ್ಷಗಳ ಹಿಂದೆ ನರೇಂದ್ರಣ್ಣ ನನಗೆ ಮಾಡಿದ ಸಹಾಯ ನೆನಪಿಸಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮಾಧ್ಯಮದವರು ಈ ಬಗ್ಗೆ ಏನೇನೋ ಹಾಕಿದರೇ ತುಂಬಾ ಕಷ್ಟ ಆಗುತ್ತೆ. ಹಾಗಾಗಿ, ನಾನು ಈ ಬಗ್ಗೆ ಸ್ಪಷ್ಟನೆ ಕೊಡುತ್ತೇನೆ. ಸುಮಲತಾ ಅಂಬರೀಶ್ ಅವರಿಗೆ ಮಂಡ್ಯ ಸೀಟ್ ಸಿಕ್ಕಿಲ್ಲ ಎಂದರೆ, ನಮ್ಮ ಪರವಾಗಿ ಪ್ರಚಾರ ಮಾಡಬೇಕು ಎಂದು ಉದಯ್ ಗೌಡರು ಕೇಳಿದ್ದರು. ಹಾಗಾಗಿ, ಅವರು ಮೊದಲು ಕರೆದರು ಎನ್ನುವ ಕಾರಣಕ್ಕೆ ಪ್ರಚಾರಕ್ಕೆ ಬಂದಿದ್ದೇನೆ” ಎಂದು ತಿಳಿಸಿದರು.

“ಕಾಂಗ್ರೆಸ್‌ ಪಕ್ಷದಿಂದ ಸ್ಟಾರ್ ಚಂದ್ರು ಅವರು ಚುನಾವಣಾ ಕಣಕ್ಕೆ ಇಳಿದಿದ್ದಾರೆ. ನಿಮ್ಮ ಅತ್ಯಮೂಲ್ಯವಾದ ಮತವನ್ನು ಅವರಿಗೆ ನೀಡಿ. ನರೇಂದ್ರ ಹಾಗೂ ಉದಯ್ ಅವರ ಕೈಗಳನ್ನು ಬಲಪಡಿಸಿ” ಎಂದು ಕೋರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೇಸಿಗೆ | ಬಿಯರ್ ಮೊರೆ ಹೋದ ಮದ್ಯಪ್ರಿಯರು: 11 ದಿನದಲ್ಲಿ 27 ಲಕ್ಷ ಲೀ. ಬಿಯರ್ ಮಾರಾಟ

ಮಂಡ್ಯ ಲೋಕಸಭಾ ಚುನಾವಣಾ ಕಣಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಗಿ ಎಚ್ ​ಡಿ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ.

ಸುಮಲತಾ ಅವರು ಬಿಜೆಪಿ ಸೇರಿರುವದರಿಂದ ಎಚ್‌ ಡಿ ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕಿದೆ. ಆದರೆ, ಸುಮಲತಾ ಎಲ್ಲಿಯೂ ಕಾಣಿಸುತ್ತಿಲ್ಲ. ಯಾವುದೇ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿಲ್ಲ. ಮೌನವಾಗಿದ್ದಾರೆ. ಹೀಗಿರುವಾಗಲೇ ಸುಮಲತಾ ಆಪ್ತ ಎನಿಸಿಕೊಂಡಿರುವ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಇಳಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚನ್ನಪಟ್ಟಣ ಉಪಚುನಾಚಣೆ | ಊಹೆಗಳಾಚೆಗೂ ನಡೆಯುತ್ತಿದೆ ಡಿಕೆಶಿ-ಹೆಚ್‌ಡಿಕೆ ಆಟ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ಹುರಿಯಾಳು ಯಾರು?...

ಅಂಗನವಾಡಿ ಕೇಂದ್ರಗಳ ಉನ್ನತೀಕರಣ; LKG, UKG ಆರಂಭಿಸಲು ಸಿಎಂ ಸಮ್ಮತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

"ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಹಾಗೂ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು...

ವಾಲ್ಮೀಕಿ ನಿಗಮ ಅಕ್ರಮ | ಜಾರಿ ನಿರ್ದೇಶನಾಲಯದಿಂದ ಪ್ರತ್ಯೇಕ ತನಿಖೆ ಆರಂಭ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ಜಾರಿ...