ಹರಿಹರದಲ್ಲಿ ಬಿ ಬಸವಲಿಂಗಪ್ಪ, ಬಿ ಕೃಷ್ಣಪ್ಪ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ: ಸಚಿವ ಮಹದೇವಪ್ಪ ಭರವಸೆ

Date:

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಕರ್ನಾಟಕದ ದಲಿತ ಚಳವಳಿಯ ಪ್ರೇರಕ ಶಕ್ತಿಗಳಾದ ಮಾಜಿ ಸಚಿವ ಬಿ ಬಸವಲಿಂಗಪ್ಪ ಮತ್ತು ಪ್ರೊ. ಬಿ ಕೃಷ್ಣಪ್ಪ ಅವರ ಹೆಸರಿನಲ್ಲಿ ಅಧ್ಯಯನ ಪೀಠಗಳನ್ನು ಸ್ಥಾಪಿಸುವ ಪ್ರಸ್ತಾವನೆ ಬಂದರೆ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.

- Advertisement -

​ಕಾಂಗ್ರೆಸ್‌ನ ವಿಧಾನ ಪರಿಷತ್ತಿನ ಸದಸ್ಯ ರಮೇಶ ಬಾಬು ಅವರು ನಿಯಮ 72ರ ಅಡಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಸಚಿವರು ಈ ಲಿಖಿತ ಉತ್ತರ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕರ್ನಾಟಕದಲ್ಲಿ ದಲಿತ ಚಳವಳಿಗೆ ವೈಚಾರಿಕವಾಗಿ ಮತ್ತು ಸೈದ್ಧಾಂತಿಕವಾಗಿ ಶಕ್ತಿ ತುಂಬಿದ ಕೀರ್ತಿ ಬಿ ಬಸವಲಿಂಗಪ್ಪ ಮತ್ತು ಪ್ರೊ. ಬಿ ಕೃಷ್ಣಪ್ಪ ಅವರಿಗೆ ಸಲ್ಲುತ್ತದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನವರಾದ ಈ ಇಬ್ಬರು ಮಹನೀಯರ ಹೆಸರಿನಲ್ಲಿ ಅವರ ತವರು ನೆಲದಲ್ಲಿ ಅಧ್ಯಯನ ಪೀಠ ಸ್ಥಾಪಿಸುವುದು ಅತ್ಯಂತ ಸೂಕ್ತ ಎಂದು ರಮೇಶ ಬಾಬು ಪ್ರತಿಪಾದಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಬೈಲ್ ಮೃತ್ಯು ಮೋಡಿಯಿಂದ ಮಕ್ಕಳನ್ನು ರಕ್ಷಿಸುವವರಾರು?

ಈಗಾಗಲೇ ಈ ಇಬ್ಬರು ನಾಯಕರ ಹೆಸರಿನಲ್ಲಿ ಸ್ಮಾರಕ ಮತ್ತು ಅಧ್ಯಯನ ಕೇಂದ್ರಗಳಿಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ ಎಂದು ಸಚಿವರು ಅಂಕಿಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ.

ಹರಿಹರ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪ್ರೊ. ಬಿ ಕೃಷ್ಣಪ್ಪನವರ ಸ್ಮಾರಕ ಭವನ (ಸಾಮಾಜಿಕ ಮತ್ತು ಸಾಂಸ್ಕೃತಿಕ ಭವನ) ನಿರ್ಮಾಣಕ್ಕಾಗಿ 2.5 ಕೋಟಿ ರೂ. ಮಂಜೂರು ಮಾಡಲಾಗಿದ್ದು, ಪೂರ್ಣ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರೊ. ಬಿ ಕೃಷ್ಣಪ್ಪನವರ ಹೆಸರಿನಲ್ಲಿ ಅಧ್ಯಯನ ಕೇಂದ್ರ ಸ್ಥಾಪನೆಗೆ 2016ರಲ್ಲಿ 1 ಕೋಟಿ ರೂ. ಮಂಜೂರು ಮಾಡಿ, ಬಿಡುಗಡೆಗೊಳಿಸಲಾಗಿದೆ. ಬೆಂಗಳೂರಿನಲ್ಲಿ ಬಿ ಬಸವಲಿಂಗಪ್ಪನವರ ಸ್ಮಾರಕ ಅಭಿವೃದ್ಧಿ ಹಾಗೂ ಸೌಂದರ್ಯೀಕರಣಕ್ಕಾಗಿ 1 ಕೋಟಿ ರೂ. ಮಂಜೂರು ಮಾಡಲಾಗಿದ್ದು, ಇದರಲ್ಲಿ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರಸ್ತುತ ಹರಿಹರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಈ ಇಬ್ಬರು ನಾಯಕರ ಹೆಸರಿನಲ್ಲಿ ಯಾವುದೇ ಅಧ್ಯಯನ ಪೀಠ ಸ್ಥಾಪನೆಯಾಗಿಲ್ಲ. ಆದಾಗ್ಯೂ, ಈ ಸಂಬಂಧ ಪ್ರಸ್ತಾವನೆಯನ್ನು ಪಡೆದು ಅಧ್ಯಯನ ಪೀಠಗಳ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...

ಸೌಜನ್ಯ ಪ್ರಕರಣ | SIT ವಿರುದ್ಧ ತಾಯಿ ಕುಸುಮಾವತಿ ಅಸಮಾಧಾನ; ತನಿಖಾಧಿಕಾರಿ ಬದಲಾವಣೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್‌ನ...