ಮತದಾನ ಮಾಡಲು ಮತಗಟ್ಟೆಗೆ ತೆರಳಿದಾಗ ಮತದಾರರು ಮೊಬೈಲ್ ತೆಗೆದುಕೊಂಡು ಹೋಗದಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಆದರೂ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮತಗಟ್ಟೆಯೊಳಗೆ ಯುವಕನೊಬ್ಬ ಮೊಬೈಲ್ ತೆಗೆದುಕೊಂಡು ಹೋಗಿ ಫೋಟೋ ಕ್ಲಿಕ್ಕಿಸಿರುವ ಘಟನೆ ನಡೆದಿದೆ.
ರಂಜಿತ್ ಬಂಗೇರ ಎಂಬ ಯುವಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೋ ತೆಗೆದು ಪುತ್ತೂರಿನ ಕೋಟಿ-ಚೆನ್ನಯ ಕಂಬಳ ವಾಟ್ಸಾಪ್ ಗ್ರೂಪ್ಗೆ ಶೇರ್ ಮಾಡಿದ್ದಾನೆ.
ಈ ಫೋಟೊ ನೋಡಿದ ಕೆಲವರು ಕೂಡಲೇ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸದ್ಯ ರಂಜಿತ್ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಸುತ್ತಿನ ಮತದಾನ 14 ಲೋಕಸಭಾ ಕ್ಷೇತ್ರಗಳಲ್ಲಿ ಏ.26 ರಂದು ನಡೆಯುತ್ತಿದೆ. ಚುನಾವಣಾ ಆಯೋಗ ಎಲ್ಲ ಮತಗಟ್ಟೆಗಳಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಜತೆಗೆ, ಮತದಾರರಿಗೆ ಕಟ್ಟುನಿಟ್ಟಿನ ಆದೇಶವೊಂದನ್ನು ಜಾರಿಗೆ ತಂದಿದ್ದು, ಮತಗಟ್ಟೆಯೊಳಗೆ ಮತದಾರರು ಮೊಬೈಲ್ ಫೋನ್, ಸ್ಮಾರ್ಟ್ ಫೋನ್ಗಳನ್ನು ತೆಗೆದುಕೊಂಡು ಹೋಗದಂತೆ ಸೂಚಿಸಲಾಗಿದೆ.