ಹಿರಿಯ ಪತ್ರಕರ್ತ ನಂಜುಂಡೇಗೌಡಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ

Date:

2023ನೇ ಸಾಲಿನ `ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’ ಹಿರಿಯ ಪತ್ರಕರ್ತರಾದ ಹೊನಕೆರೆ ನಂಜುಂಡೇಗೌಡ ಅವರಿಗೆ ಲಭಿಸಿದೆ. ಪ್ರಶಸ್ತಿ 15 ಸಾವಿರ ರೂ. ನಗದು ಹಾಗೂ ಫಲಕವನ್ನು ಹೊಂದಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಹೊನಕೆರೆ ಗ್ರಾಮದವರಾದ ನಂಜುಂಡೇಗೌಡ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಒಟ್ಟು 35 ವರ್ಷಗಳ ಅನುಭವ ಹೊಂದಿದ್ದಾರೆ. ಪತ್ರಕರ್ತನಾಗಿ ಮೈಸೂರಿನಲ್ಲಿ ವೃತ್ತಿ ಜೀವನ ಆರಂಭಿಸಿ ಬಳಿಕ ಧಾರವಾಡ, ಶಿವಮೊಗ್ಗ, ದಾವಣಗೆರೆ, ಬೆಂಗಳೂರು ಮತ್ತು ದೆಹಲಿಯಲ್ಲಿಯೂ ಕೆಲಸ ಮಾಡಿದ್ದಾರೆ. ಪ್ರಜಾವಾಣಿ ಪತ್ರಿಕೆಯಲ್ಲಿ ಹಲವು ದಶಕಗಳಿಂದ ವಿವಿಧ ಬ್ಯೂರೋಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಧಾರವಾಡ ಜಿಲ್ಲೆಯ ಸತ್ತೂರು ಗ್ರಾಮದ ರೈತನ ಆತ್ಮಹತ್ಯೆಯಿಂದ ಆರಂಭಿಸಿ ಜಿ-20 ಸಮ್ಮೇಳನದವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಮಾಜಿ ಪ್ರಧಾನಿ ಮನಮೋಹನಸಿಂಗ್, ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರೊಂದಿಗೆ ಪಾಕಿಸ್ತಾನ, ಸೌದಿ ಅರೇಬಿಯಾ ದೇಶಗಳಿಗೆ ತೆರಳಿ ವರದಿ ಮಾಡಿದ್ದಾರೆ. ನೇಪಾಳ ಭೂಕಂಪದ ವರದಿಗಾರಿಕೆಗೂ ತೆರಳಿದ್ದ ನಂಜುಂಡೇಗೌಡ ಅವರು ಸದ್ಯ ಬಳ್ಳಾರಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದುವರೆಗೂ 39 ಹಿರಿಯ ಪತ್ರಕರ್ತರಿಗೆ `ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಕಳೆದ ವರ್ಷ ಈ ಪ್ರಶಸ್ತಿಯು ಹುಬ್ಬಳ್ಳಿಯ ಹಿರಿಯ ಪತ್ರಕರ್ತ ಗೋಪಾಲ ಹೆಗಡೆ ಅವರಿಗೆ ಒಲಿದಿತ್ತು.

ಹೊನಕೆರೆ ನಂಜುಂಡೇಗೌಡ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ...

ಬರ ಪರಿಹಾರ | ಸುಪ್ರೀಂ ಕೋರ್ಟ್ ಉಗಿದಿದ್ದನ್ನೇ ಮೋದಿ ಪ್ರಸಾದ ಎನ್ನುತ್ತಿರುವ ಬಿಜೆಪಿ!

ರಾಜ್ಯಕ್ಕೆ 3,454 ಕೋಟಿ ರುಪಾಯಿ ಬರ ಪರಿಹಾರ ಸುಪ್ರೀಮ್ ಕೋರ್ಟ್ ಕೊಟ್ಟದ್ದೇ...

ಚಾಮರಾಜನಗರ | ಮತಗಟ್ಟೆ ಧ್ವಂಸ ಮಾಡಿದ ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ...

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....