ಮಳೆ | ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಣೆ

Date:

ರಾಜ್ಯದ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

- Advertisement -

ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಹಾಗೂ ಕರಾವಳಿಯ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಹೆಚ್ಚಿನ ಸ್ಥಳಗಳಲ್ಲಿ ಜಿಟಿಜಿಟಿ ಮಳೆ ಹಾಗೂ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜತೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗೆ ಶುಕ್ರವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.

ನವೆಂಬರ್‌ 15ರಂದು ಕರ್ನಾಟಕದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೊಂದು ಮಹಾ ಮರಮೇಧಕ್ಕೆ ಕೇಂದ್ರದ ಅನುಮತಿ ಅಮಾನುಷ

ನವೆಂಬರ್‌ 16ರಂದು ಕರಾವಳಿಯ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ.

ನವೆಂಬರ್‌ 17ರಂದು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಮೇಲೆ ಒಣಹವೆ ಇರುವ ಸಾಧ್ಯತೆ ಇದೆ.

ನವೆಂಬರ್‌ 18ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...