ಬೆಂಗಳೂರು | ಮಳೆ ಅವಾಂತರ; ನೆಲಕ್ಕೊರಗಿದ ಮರಗಳು, ಮನೆಗಳಿಗೆ ನುಗ್ಗಿದ ನೀರು

Date:

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಯಂಕಾಲ ಜೋರು ಮಳೆ ಸುರಿಯುತ್ತಿದೆ. ಶುಕ್ರವಾರ ರಾತ್ರಿ ವೇಳೆ ಭಾರೀ ಮಳೆಯಾಗಿದ್ದು, ಹಲವೆಡೆ ಅವಾಂತರ ಸೃಷ್ಟಿ ಮಾಡಿದೆ.

- Advertisement -

ಆರ್‌.ಆರ್.ನಗರ, ಜ್ಞಾನಭಾರತಿ, ಏಪೋರ್ಟ್‌ ರಸ್ತೆ, ಸುಂಕದಕಟ್ಟೆ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ಮಳೆ ನೀರು ತುಂಬಿ ಹರಿದಿದೆ. ಅನ್ನಪೂರ್ಣೇಶ್ವರಿ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ನಿದ್ದೆಯಿಲ್ಲದೇ ಸ್ಥಳೀಯರು ರಾತ್ರಿಯೆಲ್ಲ ನೀರನ್ನು ಹೊರಹಾಕುವ ಕೆಲಸ ಮಾಡಿದ್ದಾರೆ. ಮನೆಯ ವಸ್ತುಗಳೆಲ್ಲ ಮಳೆ ನೀರಿಗೆ ತೊಯ್ದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇನ್ನು ಬಿನ್ನಿಮಿಲ್ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಿಂದ ಹರಿಯುವ ನೀರು, ಗೋಡೆಯಿಂದ ಸೋರಿ ರಾಯಪುರ ಅಕ್ಕಪಕ್ಕದಲ್ಲಿರುವ ಮನೆಗಳಿಗೆ ನುಗ್ಗಿ ಅವಾಂತರ ಉಂಟಾಗಿದೆ. ಬೆಂಗಳೂರಿನ ನಾಗರಬಾವಿ ಎನ್‌ಜಿಎಫ್‌ ಬಡಾವಣೆಯ 9ನೇ ಕ್ರಾಸ್‌ನಲ್ಲಿ ಬೆಸ್ಕಾಂ ಲೈಟ್ ಕಂಬ ಮತ್ತು ದೊಡ್ಡ ಮರವೊಂದು ಶೆಡ್‌ ಮನೆಯ ಮುಂದೆ ಬಿದ್ದಿದೆ.

ಮಳೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ 70 ಮರಗಳು ನೆಲಕ್ಕುರುಳಿವೆ. 171 ಮರಗಳ ರೆಂಬೆ ಕೊಂಬೆಗಳು ಮುರಿದು ಬಿದ್ದಿದೆ. ನಾಗರಬಾವಿಯ ನೃಪತುಂಗ ನಗರದ 4ನೇ ಮುಖ್ಯ ರಸ್ತೆಯಲ್ಲಿ ಮರಗಳು ಬಿದ್ದಿವೆ. ಒಂದೇ ರಸ್ತೆಯ ಉದ್ದಕ್ಕೂ ಸುಮಾರು 10ಕ್ಕೂ ಅಧಿಕ ಮರಗಳು ನೆಲಕ್ಕೊರಗಿವೆ. ಪರಿಣಾಮ ಮರದ ಕೆಳಗೆ ಪಾರ್ಕ್ ಮಾಡಿದ್ದ ಕಾರುಗಳ ಗಾಜು ಪುಡಿ ಪುಡಿಯಾಗಿದೆ.

ಇಡೀ ರಸ್ತೆಯಲ್ಲಿ ಮರದ ರೆಂಬೆಕೊಂಬೆಗಳು ಬಿದ್ದು ರಸ್ತೆ ಸಂಚಾರ ಬಂದ್ ಆಗಿತ್ತು. ಆದಷ್ಟು ಬೇಗ ಮರಗಳನ್ನು ತೆರವು ಮಾಡುವಂತೆ ಸ್ಥಳೀಯರು ಬಿಬಿಎಂಪಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಮೈಸೂರು ರಸ್ತೆ ಸೇರಿದಂತೆ ನಗರದ ಹಲವೆಡೆ ಟ್ರಾಫಿಕ್ ​ಜಾಮ್​ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು.

ನಗರದ ಎಲ್ಲೆಲ್ಲಿ ಎಷ್ಟೆಷ್ಟು ಮಳೆ

ಕೆಂಗೇರಿ – 89 ಮಿಮೀ, ಪೀಣ್ಯ ಇಂಡಸ್ಟ್ರಿಯಲ್ ಏರಿಯಾ – 62 ಮಿ.ಮೀ, ನಾಯಂಡನಹಳ್ಳಿ – 61.5 ಮಿ.ಮೀ, ಹೆಮ್ಮಿಗೆಪುರ – 61 ಮಿ.ಮೀ, ಆರ್ ಆರ್ ನಗರ – 60 ಮಿ.ಮೀ, ಮಾರುತಿ ಮಂದಿರ -51.50ಮಿ.ಮೀ, ವಿದ್ಯಾಪೀಠ – 50ಮಿಮೀ, ಉತ್ತರಹಳ್ಳಿ -42 ಮಿ.ಮೀ, ಹಂಪಿನಗರ – 39 ಮಿ.ಮೀ, ಯಲಹಂಕ – 38.50 ಮಿ.ಮೀ, ಜಕ್ಕೂರು – 38 ಮಿ.ಮೀ, ಕೊಟ್ಟಿಗೆಪಾಳ್ಯ – 33 ಮಿ.ಮೀ, ಕೊಡಿಗೆಹಳ್ಳಿ – 28.50 ಮಿ.ಮೀ, ನಂದಿನಿ ಲೇಔಟ್ – 28 ಮಿ.ಮೀ ಮಳೆ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ; ನಾಮಪತ್ರ ಸಲ್ಲಿಕೆಗೆ ಮೇ.16 ಕೊನೆಯ ದಿನ

ಮಳೆಯ ಅಬ್ಬರಕ್ಕೆ ತಡರಾತ್ರಿ ನಗರ ನಿವಾಸಿಗಳು ಹೈರಾಣಾಗಿದ್ದಾರೆ. ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...