ರಾಜ್ಯದಲ್ಲಿ ಇನ್ನೂ 5 ದಿನ ಮಳೆ, ಬೆಂಗಳೂರಿನಲ್ಲಿ ಮಾತ್ರ ಒಣಹವೆ: ಹವಾಮಾನ ಇಲಾಖೆ

Date:

ರಾಜ್ಯದ ಹಲವೆಡೆ ಮಳೆಯಾಗಿದ್ದು, ಈ ಬಾರಿ ಮುಂಗಾರು ವಿಳಂಬವೆಂಬ ಹವಾಮಾನ ಇಲಾಖೆಯ ಮುನ್ಸೂಚನೆಯ ಬೆನ್ನಲ್ಲೇ ಸೋಮವಾರ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರವಾಳಿ ಪ್ರದೇಶಗಳಲ್ಲಿ ಗುಡುಗು ಸಿಡಿಲು ಸಹಿತ ಗಾಳಿ ಮಳೆಯಾಗಿದೆ. ಮುಂದಿನ 5 ದಿನಗಳವರೆಗೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದು, ಬೆಂಗಳೂರಿನಲ್ಲಿ ಬಿಸಿಲ ಝಳ ಎಂದಿನಂತೆ ಮುಂದುವರೆಯಲಿದೆ ಎಂದು ತಿಳಿಸಿದೆ.

- Advertisement -
Rain 3 1

ಮಲೆನಾಡಿನಲ್ಲಿ ಗಾಳಿ ಮಳೆ ಸೃಷ್ಟಿಸಿದ ಅವಾಂತರ: ಒಣ ಹವೆಯಿಂದ ತತ್ತರಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ನಿನ್ನೆ ಸುರಿದ ಮಳೆ ಬಿಸಿಲ ಕಾವನ್ನು ಸ್ವಲ್ಪ ಮಟ್ಟಿಗೆ ತಗ್ಗಿಸಿದೆ. ರಭಸವಾಗಿ ಬೀಸಿದ ಗಾಳಿಯ ಪರಿಣಾಮ ಮರಗಳು ಧರೆಗುರುಳಿ ಸಂಚಾರ ದಟ್ಟಣೆ ಸೃಷ್ಟಿಯಾಗಿತ್ತು. ಎನ್ ಆರ್ ಪುರ ತಾಲೂಕಿನ ಆಮ್ತಿ ಬಳಿ ಬೃಹತ್‌ ಮರ ರಸ್ತೆಗೆ ಬಿದ್ದಿದ್ದು, ರಸ್ತೆಬದಿಗಿದ್ದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರ ಬಿದ್ದ ಕಾರಣ ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿ ಬಾಳೆಹೊನ್ನೂರು, ಕೊಟ್ಟಿಗೆಹಾರ ಮಾರ್ಗದಲ್ಲಿ ಟ್ರ್ಯಾಫಿಕ್‌ ಜಾಮ್‌ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...
Rain Chikkamagaluru

ಕಳಸ ತಾಲೂಕಿನ ಕುದುರೆಮುಖ ಟಿಬಿ ಸರ್ಕಲ್‌ನಲ್ಲಿ ಮರ ಉರುಳಿದ ಪರಿಣಾಮ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿತ್ತು. ಹಲವೆಡೆ ಮೇಲ್ಛಾವಣಿಗೆ ಹೊದಿಸಿದ್ದ ಶೀಟ್‌ಗಳು ಗಾಳಿಗೆ ಹಾರಿವೆ. ಕೊಪ್ಪ ತಾಲೂಕಿನ ಗಾಳಿಗಂಡಿ ಗ್ರಾಮದಲ್ಲಿ ಆರು ಮನೆಗಳ ಮೇಲ್ಛಾವಣಿಗಳು ಹಾರಿವೆ. ಅಲಗೇಶ್ವರ ಗ್ರಾಮದಲ್ಲಿ ಮನೆ ಮೇಲೆ ಬೃಹತ್ ಮರ ಬಿದ್ದಿದ್ದು, ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ಹಾಕಿದ್ದ ಶಾಮಿಯಾನ ಒದ್ದೆ : ಚಾಮರಾಜನಗರದ ಗುಂಡ್ಲುಪೇಟೆಯಲ್ಲೂ ಗಂಟೆಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ಹಾಕಿದ್ದ ಶಾಮಿಯಾನ ಒದ್ದೆಯಾಗಿದೆ. ಗುಂಡ್ಲುಪೇಟೆ ಭಾಗದ 110 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು ಭಾಗಿಯಾಗಿದ್ದರು.

Rain 2 2

ಹಾಸನದ ವಾಣಿಜ್ಯ ಮಳಿಗೆಗಗಳಿಗೆ ಹಾನಿ : ಹಾಸನ ಜಿಲ್ಲೆಯಲ್ಲಿ ಸಂಜೆ ಬೊಬ್ಬಿರಿದ ಗಾಳಿ ಮಳೆಗೆ ಅರಕಲಗೂಡು ತಾಲೂಕಿನ ಹಲವೆಡೆ ಮನೆಗಳಿಗೆ ಹಾಕಿದ್ದ ಶೀಟ್‍ಗಳು ಹಾರಿ ಹೋಗಿವೆ. ಮಳೆಗೆ ಕಾಲೇಜು ಕಟ್ಟಡ, ಬಿಜಿಎಸ್ ಸಮುದಾಯಭವನ ಹಾಗೂ ವಾಣಿಜ್ಯ ಮಳಿಗೆಗಳಿಗೆ ಅಳವಡಿಸಿದ್ದ ಶೀಟ್‍ಗಳು ಹಾರಿ ಬಂದು ರಸ್ತೆಗೆ ಬಿದ್ದಿವೆ. ಮನೆಯ ಶೀಟ್‍ಗಳೂ ಕೂಡ ಹಾರಿ ಹೋಗಿದ್ದು, ತಗ್ಗಿನಲ್ಲಿದ್ದ ಮನೆಗಳಿಗೆ ನೀರು ನುಗ್ಗಿದೆ.

Rain 31

ಮರದ ಹರೆಗಳು ಕಾರಿನ ಮೇಲೆ ಬಿದ್ದು ಎರಡು ಕಾರುಗಳು ಜಖಂಗೊಂಡಿವೆ. ವಿದ್ಯುತ್ ತಂತಿಗಳ ಮೇಲೆ ಮರದ ರೆಂಬೆಗಳು ಬಿದ್ದ ಪರಿಣಾಮ ತಂತಿಗಳು ಕತ್ತರಿಸಿ ಬಿದ್ದಿದ್ದು ಹಲವು ಗ್ರಾಮಗಳಲ್ಲಿ ಜನ ಕತ್ತಲಲ್ಲಿ ಕೂರುವಂತಾಗಿತ್ತು.

ರಾಣೇಬೆನ್ನೂರು ಕೆರೆಯಂತಾದ ರಸ್ತೆಗಳು
ಹಾವೇರಿ ಜಿಲ್ಲೆಯ ರಾಣೇಬೆನ್ನೂರು, ಬ್ಯಾಡಗಿ ಸೇರಿದಂತೆ ವಿವಿಧ ಕಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಮಳೆಗೆ ಕೆಲವು ಕಡೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ರಾಣೇಬೆನ್ನೂರಿನ ಮಳೆಗೆ ರಸ್ತೆಗಳು ಕೆರೆಯಂತಾಗಿ ವಾಹನ ಸವಾರರು ಪರದಾಡಿದ್ದಾರೆ.

ಮುಂದಿನ ಐದು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಸೂಚನೆ

ಏಪ್ರಿಲ್ 21ರಿಂದ 25ರವರೆಗೆ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ. ಈ ಅವಧಿಯಲ್ಲಿ ಕರಾವಳಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಉಳಿದಂತೆ ಬಿರು ಬಿಸಿಲು ಕಂಡುಬರಲಿದ್ದು, ಉಷ್ಣ ಅಲೆ ಎಚ್ಚರಿಕೆ ನೀಡಲಾಗಿದೆ ಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿದ್ದೀರಾ? ಬೀದರ್‌ | ಬಿಸಿಲಿನ ತಾಪ : ಕುಸಿದು ಬಿದ್ದು ಯುವಕ ಸಾವು!

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಮುನ್ಸೂಚನೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಬಾಗಲಕೋಟೆ, ಹಾವೇರಿ, ಧಾರವಾಡ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ, ಚಿತ್ರದುರ್ಗ, ಬೀದರ್‌ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹಗುರ ಮಳೆಯಾಗಲಿದೆ.

ಬೆಂಗಳೂರಿಗಿಲ್ಲ ಮಳೆ: ರಾಜಧಾನಿಯ ಜನ ಬಿಸಿಲಿನಿಂದ ತತ್ತರಿಸುತ್ತಿರುವಾಗಲೇ ಇನ್ನೂ 48 ಘಂಟೆಗಳ ಕಾಲ ಹವಾಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ವರದಿ ತಿಳಿಸಿದೆ. ಒಣಹವೆ ಮುಂದುವರೆಯಲಿದ್ದು, ಸದ್ಯ 36% ಗರಿಷ್ಠ ಉಷ್ಣಾಂಶ ದಾಖಲಾಗಿದೆ.


eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಕ್ಕೀಡಾಗಿ ಜೈಲು ಸೇರಿದ್ದ ನಿವೃತ್ತ ನ್ಯಾಯಮೂರ್ತಿ ಸಿ.ಎಸ್ ಕರ್ಣನ್ ನಿಧನ

ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ...

ಅಮೆರಿಕ-ಭಾರತ ವ್ಯಾಪಾರ ಒಪ್ಪಂದ: ಸುಂಕದಲ್ಲಿ ಭಾರತಕ್ಕೆ ವಿಶೇಷ ರಿಯಾಯಿತಿ ನೀಡಲಿದೆ ಅಮೆರಿಕ; ಕೇಂದ್ರ ಸರ್ಕಾರ ಹೇಳಿಕೆ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ ಬೆಲೆ 20,000 ಗಡಿ ದಾಟುವ ಆತಂಕ

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ ಕೇಂದ್ರ!

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ...