ರಾಜ್ಯ ಕೆಲವೆಡೆ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಕೊಡಗು, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ರಾಯಚೂರು, ವಿಜಯಪುರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಯಾದಗಿರಿ, ಬೆಂಗಳೂರು ಗ್ರಾಮಾಂತರ ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮೇ 27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ರಾಜ್ಯಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸಲಿದ್ದು, ಈ ಹಿನ್ನೆಲೆ, ‘ಯೆಲ್ಲೋ ಮತ್ತು ರೆಡ್ ಅಲರ್ಟ್’ ಘೋಷಿಸಲಾಗಿದೆ.
ಮಳೆಯಿಲ್ಲದೇ, ಇಷ್ಟು ದಿನ ಬರಿದಾಗಿದ್ದ ಕೆರೆ, ನದಿಗಳು ತುಂಬುತ್ತಿವೆ. ಕಾವೇರಿ, ತುಂಗಾಭದ್ರಾ, ಹೇಮಾವತಿ, ಕಪಿಲಾ, ನೇತ್ರಾವತಿ ಸೇರಿದಂತೆ ಹತ್ತಾರು ನದಿಗಳು ಈಗ ನಿಧಾನವಾಗಿ ತುಂಬಿಕೊಳ್ಳುತ್ತಿವೆ. ಮಲೆನಾಡು ಭಾಗದಲ್ಲಿನ ನದಿಗಳಿಗೆ ಜೀವಕಳೆ ಬರುತ್ತಿದೆ. ಈ ಹಿನ್ನೆಲೆ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಂದೇ ದಿನ 51 ಮಂದಿ ಸಾವು; ಎಡಿಜಿಪಿ ಅಲೋಕ್ ಕುಮಾರ್
ಇನ್ನು ಸಿಡಿಲು ಬಡಿದು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮಳೆ ಬಂದ ಹಿನ್ನೆಲೆ ಮರದಡಿ ನಿಂತಿದ್ದಾಗ ಸಿಡಿಲು ಬಡಿದು ಕೊನೆಯುಸಿರೆಳೆದಿದ್ದಾರೆ. ಏಕನಾಥ್ ವಾಘಮೂಡೆ(55) ಹಾಗೂ ಸತೀಶ್ ಶಳಕೆ(40) ಮೃತರು.
ಇನ್ನೊಂದೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾದ ಹಿನ್ನಲೆ, ಯಾದಗಿರಿ ಜಿಲ್ಲೆಯ ಹೊಸಹಳ್ಳಿ ಕ್ರಾಸ್ ಬಳಿಯ ಬಡಾವಣೆ ಕರೆಯಂತಾಗಿದೆ.