ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರವಿವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಇತ್ತೀಚಿನ ದಿನಗಳಲ್ಲಿ ದೇಶದ ಬಹುತೇಕ ಭಾಗಗಳು ತಾಪಮಾನ ಒತ್ತಡದಲ್ಲಿವೆ. ಪಶ್ಚಿಮ ಬಂಗಾಳದಿಂದ ಒಡಿಶಾ, ಬಿಹಾರ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಿಂದ ತೆಲಂಗಾಣ, ತಮಿಳುನಾಡು, ಕರ್ನಾಟಕದವರೆಗೆ ಬಿಸಿಲಿನ ಅಬ್ಬರ ಮುಂದುವರಿದಿದೆ.
ಮೇ 7 ರಿಂದ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಇದರ ಪರಿಣಾಮವಾಗಿ ತಾಪಮಾನವು ಸಾಮಾನ್ಯ ಸ್ಥಿತಿಗೆ ಮರಳಲಿದೆ. ಇದು ಮುಂದಿನ 2 ವಾರಗಳವರೆಗೆ ಬೆಂಗಳೂರು ನಗರದಲ್ಲಿ ತಂಪಾದ ವಾತಾವರಣವನ್ನು ಕಲ್ಪಿಸಲಿದೆ. ಈ ಅವಧಿಯಲ್ಲಿ ಬೆಂಗಳೂರಿನಲ್ಲಿ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಅತ್ಯಾಚಾರದ ಆರೋಪಿಗಳಾದ ಪ್ರಜ್ವಲ್, ಎಚ್ ಡಿ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಎಚ್ಎಎಲ್ನಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊಸಕೋಟೆ, ಮೈಸೂರು, ಹುಣಸೂರು,ಮಂಡ್ಯ, ಸರಗೂರು,ಹಾರಂಗಿ, ಕುಶಾಲನಗರ, ಕೆಆರ್ನಗರದಲ್ಲಿ ಮಳೆಯಾಗಿದೆ. 12 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 45.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ ಎಂದು ಇಲಾಖೆ ತಿಳಿಸಿದೆ.