ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

Date:

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗಾಗಲೇ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟದ ಬಗ್ಗೆ ಸರಿಯಾದ ಕಾರಣ ಏನು ಎಂಬುದು ಸದ್ಯಕ್ಕೆ ಇನ್ನು ತಿಳಿದುಬಂದಿಲ್ಲ. ಸದ್ಯ ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ರಾಜ್ಯ ಪೊಲೀಸ್​ ಮಹಾನಿರ್ದೇಶಕ ಅಲೋಕ್​ ಮೋಹನ್ ಹೇಳಿದರು.

- Advertisement -

“ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಂದ ವರದಿ ಬಂದ ನಂತರ ಸ್ಪಷ್ಟ ಮಾಹಿತಿ ತಿಳಿಯಲಿದೆ. ರಾಮೇಶ್ವರಂ ಕೆಫೆಗೆ ಗ್ರಾಹಕರು ಏನಾದರೂ ತಂದಿದ್ದರಾ? ಅಥವಾ ಈ ಸ್ಪೋಟಕ್ಕೆ ಬೇರೆಯೇ ಕಾರಣ ಇದೇಯಾ ಎಂಬುದನ್ನು ಸದ್ಯಕ್ಕೆ ಹೇಳಲಾಗದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಮೇಶ್ವರಂ ಕೆಫೆ ಸ್ಪೋಟ; ಎಲ್ಲ ಆಯಾಮಗಳಲ್ಲಿ ತನಿಖೆಗೆ ಮುಂದಾದ ಪೊಲೀಸರು

“ಈ ಘಟನೆಗೆ ಕಾರಣನಾದ ಆರೋಪಿಯನ್ನ ನಾವು ಖಂಡಿತ ಪತ್ತೆ ಮಾಡುತ್ತೇವೆ. ಸದ್ಯಕ್ಕೆ ಯಾರ ಮೇಲೂ ಅನುಮಾನ ಇಲ್ಲ. ತನಿಖೆ ನಡೆಯುತ್ತಿದೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ದಳ, ಕೇಂದ್ರ ಗುಪ್ತಚರ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ” ಎಂದು ಡಿಜಿಪಿ ಅಲೋಕ್ ಮೋಹನ್ ಮಾಹಿತಿ ನೀಡಿದ್ದಾರೆ.

“ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಎಂ ಮತ್ತು ಗೃಹ ಸಚಿವರಿಗೆ ಮಾಹಿತಿ ನೀಡಲಾಗಿದ್ದು, ಎಫ್​ಎಸ್​ಎಲ್​ ಟೀಮ್​ ಪರಿಶೀಲನೆ ನಡೆಸುತ್ತಿದೆ. ಎಫ್ಎಸ್​ಎಲ್ ತಂಡ ಸಂಪೂರ್ಣ ಪರಿಶೀಲನೆ ನಡೆಸಿದ ಬಳಿಕ ಮಾಹಿತಿ ನೀಡುತ್ತೇವೆ” ಎಂದು ಅಲೋಕ್ ಮೋಹನ್ ಹೇಳಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳಾ ಶಕ್ತಿಯ ಅನಾವರಣ: ಮಂಡ್ಯ ಜಿಲ್ಲಾ ಪಂಚಾಯತ್ ಸ್ತಬ್ಧಚಿತ್ರಕ್ಕೆ ಈಶ್ವರ ಖಂಡ್ರೆ ಮೆಚ್ಚುಗೆ

ಮೈಸೂರು ದಸರಾ ಜಂಬೂಸವಾರಿಯಲ್ಲಿ ಜನಮೆಚ್ಚುಗೆ ಗಳಿಸುವುದರ ಜೊತೆಗೆ ಪ್ರಥಮ ಬಹುಮಾನ ಪಡೆದ...

ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಮೈಶುಗರ್ ಸಕ್ಕರೆ ಗೋದಾಮಿಗೆ ರೈತರ ಮುತ್ತಿಗೆ

ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡಬೇಕು ಹಾಗೂ ಪ್ರತಿ ಟನ್ ಕಬ್ಬಿಗೆ...

ಕಬ್ಬು ಬೆಳೆಗಾರರ ರಕ್ಷಣೆಗೆ ಪ್ರತ್ಯೇಕ ವಿಮೆ, ನ್ಯಾಯಯುತ ಬೆಲೆ ಸೇರಿದಂತೆ 12 ಬೇಡಿಕೆ

ಕಬ್ಬು ಬೆಳೆಗಾರರಿಗೆ ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ₹6,000 ಕನಿಷ್ಠ...

ದಾಂಡೇಲಿ | ನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳಪೆ: ತನಿಖೆ ನಡೆಸಿ ಕ್ರಮಕ್ಕೆ ಡಿ. ಸ್ಯಾಮ್ಸನ್ ಆಗ್ರಹ

ಕೇಂದ್ರ ಸರ್ಕಾರದ ಅನುದಾನದಲ್ಲಿ ದಾಂಡೇಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿ...