ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳ ಪರಿಶೀಲನೆ ಮುಂದುವರೆಸಿದ ಅಧಿಕಾರಿಗಳಿಗೆ ಇದೀಗ, ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸುವುದಕ್ಕೆ ಬಳಸಿದ್ದ ರಾಸಾಯನಿಕ ಪತ್ತೆಯಾಗಿದೆ ಎನ್ನಲಾಗಿದೆ. ಈ ಹಿಂದೆ ಸ್ಫೋಟಗೊಂಡ ಸ್ಥಳದಲ್ಲಿ ಪೊಲೀಸರಿಗೆ ಬ್ಯಾಟರಿ ಮತ್ತು ಟೈಮರ್ ಪತ್ತೆಯಾಗಿತ್ತು.
ಟೈಮರ್ ಫಿಕ್ಸ್ ಮಾಡಿ ಸ್ಪೋಟ ಮಾಡಲು ಪೊಟ್ಯಾಷಿಯಂ ನೈಟ್ರೇಟ್ ಮತ್ತು ಹೈಡ್ರೋಜನ್ ಪರಾಕ್ಸೈಡ್ ಬಳಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಸ್ಫೋಟದ ಅವಶೇಷಗಳ ಮಾದರಿಗಳನ್ನು ಎಫ್‌ಎಸ್‌ಎಲ್ ಮತ್ತು ಸೋಕೋ ತಂಡ ಸಂಗ್ರಹಿಸಿದೆ.
ಬಾಂಬ್ಗೆ ಟೈಮರ್ ಫಿಕ್ಸ್ ಮಾಡಿ ಬ್ಯಾಗಿನ ಒಳಗೆ ಇಟ್ಟು ಸ್ಫೋಟಿಸಲಾಗಿದೆ ಎಂಬ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ
ಏಕಕಾಲಕ್ಕೆ ಎರಡು ಬಾಂಬ್ ಸ್ಫೋಟಿಸಲು ಆರೋಪಿ ಯೋಜಿಸಿದ್ದನು ಎಂದು ತಿಳಿದುಬಂದಿದೆ. ಟೈಮರ್ ಫಿಕ್ಸ್ ಮಾಡುವಾಗ 5 ಸೆಕೆಂಡ್ ಅಂತರದ ಬಗ್ಗೆ ಗೊತ್ತಿಲ್ಲದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಎಫ್‌ಎಸ್‌ಎಲ್ ವರದಿಯಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ.
ಒಂದು ವೇಳೆ 2 ಬಾಂಬ್ ಸ್ಫೋಟಗೊಂಡಿದ್ದರೆ ಕಟ್ಟಡವೇ ನೆಲಸಮ ಆಗುವುದರೊಂದಿಗೆ ಸಾವು-ನೋವು ಹೆಚ್ಚಾಗುವ ಸಾಧ್ಯತೆ ಇತ್ತು ಎಂಬ ಆಂಶ ವರದಿಯಲ್ಲಿ ಬಹಿರಂಗವಾಗಿದೆ. ಇತ್ತ ಆರೋಪಿಗಾಗಿ ತೋವ್ರ ಶೋಧ ಮುಂದುವರೆಸಿರುವ ಪೊಲೀಸರು ಎಂಟು ತಂಡ ಮಾಡಿಕೊಂಡು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈಗಾಗಲೇ ನಾಲ್ವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದ್ದು, ಆಡುಗೋಡಿ ಟೆಕ್ನಿಕಲ್ ಸೆಲ್ಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೃಷಿ ಹೊಂಡದಲ್ಲಿ ಬಿದ್ದ ಮಗಳ ರಕ್ಷಣೆಗೆ ಧಾವಿಸಿದ ದಂಪತಿ; ಒಂದೇ ಕುಟುಂಬದ ಮೂವರು ಸಾವು
ಅಪರಾಧ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ, ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್ ಅವರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ದಿ ರಾಮೇಶ್ವರಂ ಕೆಫೆ ಹಾಗೂ ಅಕ್ಕ-ಪಕ್ಕದ ಮಳಿಗೆಗಳು, ಐಟಿಪಿಎಲ್ ಮುಖ್ಯರಸ್ತೆ, ಕುಂದಲಹಳ್ಳಿ ಹಾಗೂ ಸುತ್ತಮುತ್ತಲಿನ ಸ್ಥಳಗಳಲ್ಲಿರುವ 400ಕ್ಕೂ ಹೆಚ್ಚು ಕ್ಯಾಮೆರಾಗಳ ಡಿವಿಆರ್‌ಗಳನ್ನು ಸುಪರ್ದಿಗೆ ಪಡೆದು, ಎಲ್ಲ ವಿಡಿಯೊ ವೀಕ್ಷಿಸಲಾಗುತ್ತಿದೆ. ಶಂಕಿತ ಓಡಾಡಿದ್ದ ಕೆಲ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.