ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟು 24,36,270 ಪ್ರಕರಣಗಳ ಇತ್ಯರ್ಥ: ನ್ಯಾಯಮೂರ್ತಿ ಜಿ.ನರೇಂದರ್

Date:

ಇದೇ ಸೆಪ್ಟೆಂಬರ್ 9 ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 24,36,270 ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಕಾರ್ಯನಿರ್ವಾಹಕ ಅಧ್ಯಕ್ಷರಾದ ಜಿ.ನರೇಂದರ್ ತಿಳಿಸಿದರು.

ಇಂದು ಉಚ್ಚನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು ‘ಸರ್ವರಿಗೂ ನ್ಯಾಯ” ಇದು ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶವಾಗಿದ್ದು, ಜನತಾ ನ್ಯಾಯಾಲಯ/ಲೋಕ್ ಅದಾಲತ್ ಮೂಲಕ ಜನರಿಗೆ ತ್ವರಿತ ಮತ್ತು ಸಕ್ಷಮ ನ್ಯಾಯ ಒದಗಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಪಶ್ಚಿಮ ಬಂಗಾಳ | ಕೇಂದ್ರ ಸಚಿವರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳ ಪೈಕಿ 1305 ವೈವಾಹಿಕ ಪ್ರಕರಣಗಳು,255 ಪುನರ್ ಮಿಲನ ಪ್ರಕರಣ, 2806 ದಾವಾ ಪ್ರಕರಣಗಳು, 3,303 ವಾಹನ ಅಪಘಾತ ಪರಿಹಾರ ಪ್ರಕರಣ, 9,269 ಚೆಕ್ ಬೌನ್ಸ್ ಪ್ರಕರಣಗಳು, ಭೂಸ್ವಾಧೀನ ಪರಿಹಾರಕ್ಕೆ ಸಂಬಂಧಿಸಿದ 430,ಇತರೆ 2899 ಅಮಲುಜಾರಿ ಪ್ರಕರಣಗಳು, ರೇರಾಗೆ ಸಂಬಂಧಿಸಿದ 35 ಹಾಗೂ ಗ್ರಾಹಕರ ವ್ಯಾಜ್ಯಗಳ 95 ಪ್ರಕರಣಗಳು ಸೇರಿವೆ ಎಂದರು.

1012 ಪೀಠಗಳಲ್ಲಿ ನಡೆದ ಲೋಕ್ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇದ್ದ 2,14,925 ಪ್ರಕರಣಗಳು ಹಾಗೂ 22,21,345 ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥಗೊಂಡಿದೆ. ಒಟ್ಟು ಇತ್ಯರ್ಥಗೊಂಡ ಮೊತ್ತ 1,420 ಕೋಟಿ ರೂ.ಗಳು ಎಂದು ತಿಳಿಸಿದರು.

ಲೋಕ್ ಅದಾಲತ್ ನಲ್ಲಿ ಬೆಂಗಳೂರು, ಧಾರವಾಡ, ಕಲಬುರಗಿಯ ಉಚ್ಛನ್ಯಾಯಾಲಯದ ಪೀಠಗಳು ಕರ್ತವ್ಯ ನಿರ್ವಹಿಸಿದ್ದು 655 ದಾವೆಗಳು ಇತ್ಯರ್ಥಗೊಂಡಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಉಚ್ಚ ನ್ಯಾಯಾಲಯದ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ಪ್ರಾಧಿಕಾರದ ಇತರ ಗೌರವಾನ್ವಿತ ಸದಸ್ಯರು ಉಪಸ್ಥತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಶಾಸಕ ಕೆ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ

ವಿಧಾನ ಪರಿಷತ್ ಟಿಕೆಟ್ ನೀಡದ ಕಾರಣಕ್ಕಾಗಿ ಬಿಜೆಪಿಯೊಳಗೆ ಬಂಡಾಯ ಎದ್ದು, ನೈಋತ್ಯ...

ಮೋದಿ ತಮ್ಮನ್ನು ತಾವೇ ದೇವದೂತ ಎನ್ನುತ್ತಿರುವುದು ಮೂಢನಂಬಿಕೆಯ ಸ್ಪಷ್ಟ ಹೆಜ್ಜೆ: ಸಚಿವ ಹೆಚ್ ಸಿ ಮಹದೇವಪ್ಪ

ಬುದ್ಧ ಹುಟ್ಟಿದ ನಾಡಿನಲ್ಲಿ, ವಿಜ್ಞಾನ ತಂತ್ರಜ್ಞಾನವು ಇಷ್ಟೊಂದು ಮುಂದುವರೆದ ಕಾಲದಲ್ಲಿ ಪ್ರಧಾನಿ...

‘ಶಕ್ತಿ’ ಯೋಜನೆಯಿಂದ ಧರ್ಮಸ್ಥಳಕ್ಕೆ ಭಕ್ತರ ಸಂಖ್ಯೆ ಹೆಚ್ಚಳ; ಸಿಎಂ, ಡಿಸಿಎಂ ಸಂತಸ

ಸರ್ಕಾರದ 'ಶಕ್ತಿ' ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಸಚಿವ ಕೆ ಎನ್ ರಾಜಣ್ಣ

"ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ...