ರೇವ್ ಪಾರ್ಟಿ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ

Date:

ಬೆಂಗಳೂರಿನ ಎಲೆಕ್ಟ್ರಾನಿಕ್ಸಿಟಿ ಸಮೀಪದ ಜಿ.ಆರ್‌.ಫಾರ್ಮ್ಹೌಸ್ನಲ್ಲಿ ನಡೆದಿದ್ದರೇವ್ಪಾರ್ಟಿಪ್ರಕರಣಕ್ಕೆ ಸಂಬಂಧಿಸಿದಂತೆ, ಡ್ರಗ್ಸ್ ಸೇವಿಸಿದ ಆರೋಪದಡಿ ತೆಲುಗು ನಟಿ ಹೇಮಾ ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಲು ಒಂದು ವಾರ ಕಾಲಾವಕಾಶ ಕೇಳಿರುವುದಾಗಿ ವರದಿಯಾಗಿದೆ.

ರೇವ್ಪಾರ್ಟಿಯಲ್ಲಿ ಭಾಗಿಯಾಗಿ ಡ್ರಗ್ಸ್ಸೇವಿಸಿರುವ ಪ್ರಕರಣದ ವಿಚಾರಣೆಗೆ ಸೋಮವಾರ ಹಾಜರಾಗುವಂತೆ ನಟಿ ಹೇಮಾ ಸೇರಿ ಎಂಟು ಮಂದಿಗೆ ಸಿಸಿಬಿ ನೋಟಿಸ್ನೀಡಿತ್ತು. ಇದಕ್ಕೆ ಅನಾರೋಗ್ಯದ ಕಾರಣ ನೀಡಿರುವ ಹೇಮಾ ಅವರು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಮುಂದೆ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದ್ದಾರೆ ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.

ನಗರದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಇತ್ತೀಚಿಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದ ಹಿನ್ನೆಲೆ, ನಟಿ ಸೇರಿ 8 ಮಂದಿಗೆ ಮೇ 27 ಸೋಮವಾರ ವಿಚಾರಣೆ ಹಾಜರಾಗಲು ಸಿಸಿಬಿ ನೋಟಿಸ್ ನೀಡಿತ್ತು. ಉಳಿದವರು ಸೋಮವಾರ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ. ಹೇಮಾ ಅವರಿಗೆ ಎರಡನೇ ಬಾರಿ ನೋಟಿಸ್ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಕರಣದಲ್ಲಿ ತೆಲುಗು ನಟಿಯನ್ನು ರಕ್ಷಿಸುವಂತೆ ತೆಲಂಗಾಣ ಮತ್ತು ಆಂಧ್ರಪ್ರದೇಶದ ಪ್ರಭಾವಿಗಳಿಂದ ಒತ್ತಡ ಹೇರಲಾಗುತ್ತಿದೆ. ಬಂಧಿತ ವ್ಯಕ್ತಿಗಳು ಹೆಚ್ಚು ಸಂಪರ್ಕ ಹೊಂದಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆಯು ಸಂಭವನೀಯ ಡ್ರಗ್ಸ್ ದಂಧೆಯನ್ನು ಬಯಲಿಗೆಳೆಯುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದವರಿಂದ ಸಂಗ್ರಹಿಸಲಾದ 98 ರಕ್ತದ ಮಾದರಿಗಳ ಪೈಕಿ 86 ಮಂದಿ ಡ್ರಗ್ಸ್ ಸೇವಿಸಿರುವುದು ವರದಿಯಲ್ಲಿ ದೃಢಪಟ್ಟಿದೆ. 50ಕ್ಕೂ ಹೆಚ್ಚು ಪುರುಷರು ಮತ್ತು 30ಕ್ಕೂ ಹೆಚ್ಚು ಮಹಿಳೆಯರ ವರದಿ ಪಾಸಿಟಿವ್ ಬಂದಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ. ಹಂತ ಹಂತವಾಗಿ ಅವರನ್ನು ವಿಚಾರಣೆಗೆ ಕರೆಯಲು ಮಾದಕ ದ್ರವ್ಯ ನಿಗ್ರಹ ದಳ ಸಿದ್ಧತೆ ನಡೆಸಿದೆ.

ಮೇ 20ರಂದು ಟೆಕ್ಕಿಗಳು, ತೆಲುಗು ನಟರು ಸೇರಿದಂತೆ ಸುಮಾರು 100 ಜನರು ಭಾಗವಹಿಸಿದ್ದಸನ್ಸೆಟ್ ಟು ಸನ್ರೈಸ್ ವಿಕ್ಟರಿಶೀರ್ಷಿಕೆಯ ರೇವ್ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಪಾರ್ಟಿಯಲ್ಲಿ ಭಾಗವಹಿಸಿದ್ದವರು ಎಂಡಿಎಂಎ, ಕೊಕೇನ್, ಗಾಂಜಾ, ಚರಸ್ ಮತ್ತು ಇತರ ಮಾದಕ ವಸ್ತುಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಒಂದೇ ಠಾಣೆಯಲ್ಲಿ 1.02 ಲಕ್ಷ ಸಂಚಾರ ನಿಮಯ ಉಲ್ಲಂಘನೆ ಪ್ರಕರಣ

ರೇವ್ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿದ್ದ ವಿಜಯವಾಡದ ವಾಸು ಹಾಗೂ ಆತನ ನಾಲ್ವರು ಸ್ನೇಹಿತರನ್ನು ಹೆಚ್ಚಿನ ತನಿಖೆಗೆ ಸಿಸಿಬಿ ವಶಕ್ಕೆ ಪಡೆದಿದೆ. ಹೆಬ್ಬಗೋಡಿ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರನ್ನು ಸಿಸಿಬಿ ತನಿಖೆಗೆ ವರ್ಗಾಯಿಸಲಾಗಿತ್ತು. ಬಳಿಕ ಪ್ರಕರಣದ ತನಿಖೆಗೆ ಆರೋಪಿಗಳನ್ನು ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಸಿಸಿಬಿ ಮನವಿ ಮಾಡಿತು. ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

ಡ್ರಗ್ಸ್ ಪೂರೈಕೆಯ ಜೊತೆಗೆ ಸೆಕ್ಸ್ ದಂಧೆ ಕೂಡ ನಡೆಯುತ್ತಿರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಿಂದ ನಗರ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ವಿಭಾಗಕ್ಕೆ ಪ್ರಕರಣವನ್ನು ವರ್ಗಾಯಿಸುವ ಮುನ್ನವೇ ಐವರನ್ನು ಬಂಧಿಸಲಾಗಿತ್ತು. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್‌ರಿಂದ ರಾಜ್ಯದಲ್ಲಿ 1,400 ಕೋಟಿ ರೂ. ಹೂಡಿಕೆ‌

ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್...

ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ...

ಜೂನ್ 19ರಂದು ಅಂಗನವಾಡಿ ನೌಕರರ ಸಂಘ ಅನಿರ್ದಿಷ್ಟಾವಧಿ ಹೋರಾಟ

ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು...

ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು...