ಶೀಘ್ರವೇ ಕ್ರೀಡಾ ಶಾಲೆಗಳ 180 ದೈಹಿಕ ಶಿಕ್ಷಕರ ನೇಮಕಾತಿ: ಸಚಿವ ಬಿ.ನಾಗೇಂದ್ರ

Date:

Advertisements

ರಾಜ್ಯದಲ್ಲಿ ಕ್ರೀಡಾ ಶಾಲೆ ಹಾಗೂ ವಸತಿ ನಿಯಲಗಳ 180 ದೈಹಿಕ ಶಿಕ್ಷಕರ ತರಬೇತಿ ಪೂರ್ಣಗೊಂಡಿದ್ದು, ಶೀಘ್ರವೇ ಸ್ಥಳ ನಿಯೋಜಿಸಿ ನೇಮಕಾತಿ ಮಾಡುವುದಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡ ಸಚಿವ ಬಿ.ನಾಗೇಂದ್ರ ಹೇಳಿದರು.

ಬುಧವಾರ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಸಿ.ಎನ್.ಬಾಲಕೃಷ್ಣ ಅವರ ಚುಕ್ಕೇ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿದೆ. ಅಮೃತ ದತ್ತು ಕ್ರೀಡಾ ಯೋಜನೆಯಡಿ ವಿವಿಧ ಕ್ರೀಡೆಗಳಲ್ಲಿ ಪದಕ ವಿಜೇರಾತ 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಅಗತ್ಯವಾದ ತರಬೇತಿ ಹಾಗೂ ಪ್ರೋತ್ಸಾಹ ನೀಡಲಾಗುತ್ತಿದೆ. ಇದರೊಂದಿಗೆ ಕ್ರೀಡಾಪುಟುಗಳಿಗೆ 2024ರ ಒಲಂಪಿಕ್ ಕ್ರೀಡಗಳಿಲ್ಲಿ ಪಾಲ್ಗೊಳ್ಳಲು ರೂ.10 ಲಕ್ಷ ವೆಚ್ಚದಲ್ಲಿ ತರಬೇತಿ ನೀಡಲಾಗುತ್ತಿದೆ.

Advertisements

ಕ್ರೀಡಾ ಇಲಾಖೆಯಿಂದ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪುಟುಗಳಿಗೆ ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ, ಅಮೃತ ಕ್ರೀಡಾದತ್ತು ಯೋಜನೆ, ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ರಾಜ್ಯದಲ್ಲಿ 2 ಕ್ರೀಡಾ ಶಾಲೆ ಹಾಗೂ 32 ಕ್ರೀಡ ವಸತಿ ನಿಲಯಗಳು ಇದ್ದು ಒಟ್ಟು 2482 ಕ್ರೀಡಾಪಟುಗಳು ಪ್ರವೇಶ ಪಡೆದಿದ್ದಾರೆ. ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಪ್ರತಿ ಜಿಲ್ಲೆಗಳಲ್ಲಿ ಕ್ರೀಡಾ ತರಬೇತುದಾರರನ್ನು ನೇಮಿಸಲಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಟ್ಟುವ ಮುನ್ನವೇ ಹೆಣ್ಣು ಜೀವಗಳನ್ನು ಬಲಿ ಪಡೆಯುತ್ತಿರುವ ಅನಾಗರಿಕ ವ್ಯವಸ್ಥೆ

ಇದೇ ಸಂದರ್ಭದಲ್ಲಿ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಸಿ.ಎನ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 125 ತಾಲ್ಲೂಕು ಕ್ರೀಡಾಂಗಣಗಳು ಇವೆ. ಕ್ರೀಡಾ ಇಲಾಖೆ ಕಳೆದ ಎರೆಡು ವರ್ಷದಲ್ಲಿ ಒಟ್ಟು ರೂ.56 ಕೋಟಿಗಳನ್ನು ಕ್ರೀಡಾಂಗಣಗಳ ಅಭಿವೃದ್ಧಿಗಾಗಿ ಬಿಡುಗಡೆ ಮಾಡದೆ. ಶ್ರವಣಬೆಳಗೊಳ ವಿಧಾನ ಸಭಾ ಕ್ಷೇತ್ರದ ಚನ್ನರಾಯಪಟ್ಟಣದ ತಾಲ್ಲೂಕು ಕ್ರೀಡಾಂಗಣವನ್ನು ಒಟ್ಟು 7 ಎಕರೆಯಲ್ಲಿ ನಿರ್ಮಿಸಲಾಗಿದೆ. 400 ಮೀಟರ್ ಮಣ್ಣಿನ ಓಟದ ಅಂಕಣ, ಜಿಮ್ ಕೊಠಡಿ, ಹೈಮಾಸ್ಟ್ ದೀಪ್ ಪೆವಿಲಿಯನ್ನ ಹಾಗೂ ಶೌಚಾಲಯ ಕಟ್ಟಗಳನ್ನು ನಿರ್ಮಿಸಲಾಗಿದ್ದು, ವಿದ್ಯುತ್ ಸರಬರಾಜು ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಶಾಸಕ ಬಾಲಕೃಷ್ಣ.ಸಿ.ಎನ್.ಮಾತನಾಡಿ, ಚನ್ನರಾಯಪಟ್ಟಣದಲಿ 1 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯಿದೆ. ಹೆಚ್ಚಿನ ಶಾಲಾ ಕಾಲೇಜುಗಳು ಇದ್ದು, ಸುಸಜ್ಜಿತ ಕ್ರೀಡಾಂಗಣ, ಸಿಂಥಟಿಕ್ ಟ್ರಾಕ್ ಅವಶ್ಯಕತೆ ಇದೆ. ಸರ್ಕಾರ ಈ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಕೋರಿದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X