ಒಂದೇ ವರ್ಷಕ್ಕೆ ಬೆಂಗಳೂರಿನಲ್ಲಿ ಕಡಿಮೆಯಾದ ಸಂಚಾರ ದಟ್ಟಣೆ: ಶ್ರೇಯಾಂಕದಲ್ಲಿ ಆರನೇ ಸ್ಥಾನ

Date:

ವಾಹನ ಸಂಚಾರ ದಟ್ಟಣೆಯಲ್ಲಿ ಕುಖ್ಯಾತಿ ಪಡೆದಿದ್ದ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ಸಂಚಾರ ವ್ಯವಸ್ಥೆಯಲ್ಲಿ ಗಣನೀಯ ಬದಲಾವಣೆ ಹೊಂದಿದೆ. ಡಚ್ ಸಂಸ್ಥೆಯ ಟಾಮ್ ಬಿಡುಗಡೆ ಮಾಡುವ ಸರ್ವೆ ವರದಿ ಪ್ರಕಾರ ಜಾಗತಿಕ ಸಂಚಾರ ದಟ್ಟಣೆಯ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿದ್ದ ಬೆಂಗಳೂರು ಇದೀಗ ಆರನೇ ಸ್ಥಾನಕ್ಕೆ ಇಳಿದಿದೆ.

- Advertisement -

“ಬೆಂಗಳೂರಿನ ಸಂಚಾರ ವ್ಯವಸ್ಥೆಯಲ್ಲಿ ಗಣನೀಯ ಬದಲಾವಣೆಯಾಗಿದೆ. ಡಚ್ ಸಂಸ್ಥೆಯ ಟಾಮ್ ಇತ್ತೀಚೆಗೆ 2023 ಸರ್ವೆ ವರದಿ ಬಿಡುಗಡೆ ಮಾಡಿದೆ. ಟಾಮ್ ಸರ್ವೆ ವರದಿ ಪ್ರಕಾರ ಜಾಗತಿಕ ಸಂಚಾರ ದಟ್ಟಣೆ ಶ್ರೇಯಾಂಕದಲ್ಲಿ ಬೆಂಗಳೂರು ಆರನೇ ಸ್ಥಾನಕ್ಕೆ ಇಳಿದಿದೆ” ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “2022ರಲ್ಲಿ ವಾಹನ ಸಂಚಾರ ದಟ್ಟಣೆಯಲ್ಲಿ ಬೆಂಗಳೂರು ಎರಡನೇ ಸ್ಥಾನದಲ್ಲಿತ್ತು. ಇದೀಗ, 2023ಕ್ಕೆ ಆರನೇ ಸ್ಥಾನಕ್ಕೆ ಇಳಿದಿದೆ ಎಂದು ಟಾಮ್​ ಸಂಸ್ಥೆ ವರದಿ ನೀಡಿದೆ” ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ನಿಯತ್ರಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರದ ಜಂಕ್ಷನ್​ಗಳಲ್ಲಿ ಸುಗಮ ಸಂಚಾರಕ್ಕೆ ಕರ್ತವ್ಯ ನಿರತ ಸಿಬ್ಬಂದಿ ಅಥವಾ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅಲ್ಲದೇ, ಅತ್ಯಾಧುನಿಕ ಡ್ರೋನ್, ಸಿಸಿಟಿವಿ ಸೇರಿದಂತೆ ಇನ್ನಿತರೆ ಸುಧಾರಿತ ತಂತ್ರಜ್ಞಾನಗಳನ್ನು ಬಳಸಲಾಗಿದೆ” ಎಂದು ವಿವರಿಸಿದರು.

“ಬೆಂಗಳೂರಿನಲ್ಲಿ ಈಗ ನಮ್ಮ ಮೆಟ್ರೋ ಜಾಲ ಸುಧಾರಿಸಿದೆ. ಟ್ರಾಫಿಕ್ ಬಸ್ ಸ್ಟಾಪ್ ಸ್ಥಳಾಂತರ, ಯೂಟರ್ನ್ ಮುಚ್ಚುವಿಕೆ, ಸಿಗ್ನಲ್ ಹಂತ ಬದಲಾವಣೆ ಹೀಗೆ ನಾನಾ ಕ್ರಮಗಳಿಂದ ವಾಹನ ದಟ್ಟಣೆ ಪ್ರಮಾಣ ಕಡಿಮೆಯಾಗಿದೆ. ಪ್ರಯಾಣದ ಸಮಯ ಕಡಿಮೆ ಮಾಡಿದ ಟಾಪ್ 10 ಪಟ್ಟಿಯಲ್ಲಿ ಬೆಂಗಳೂರು ನಂಬರ್ ಒನ್​ನಲ್ಲಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಂದೆಯನ್ನು ರಕ್ಷಿಸಲು ಕೊಲೆ ಆರೋಪಿಯಾದ ಮಗ: ತಂದೆ-ಮಗನ ಬಂಧನ

ಇಬ್ಬರು ವಂಚಕರ ಬಂಧನ
“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಸಬ್ಸಿಡಿ
ದರದಲ್ಲಿ ಕಾರು, ಸೈಟ್, ಯುವಕರಿಗೆ ಕೆಲಸ, ವಿಧವೆಯರಿಗೆ ಮಾಸಾಶನ ಮತ್ತು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಕೆಲಸ ಕೊಡಿಸುವುದಾಗಿ 60ಕ್ಕೂ ಹೆಚ್ಚು ಜನರಿಂದ ಹಣ ಪಡೆದು ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ” ಎಂದು ಮಾಹಿತಿ ನೀಡಿದರು.

“ಆರೋಪಿಗಳು ಹಣವನ್ನು ನೇರವಾಗಿ ತಮ್ಮ ಅಕೌಂಟ್​ಗಳಿಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು. ಆರೋಪಿಗಳು ಸುಮಾರು ₹15ಲಕ್ಷಕ್ಕೂ ಅಧಿಕ ಹಣ ಪಡೆದು ವಂಚನೆ ಮಾಡಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರೆದಿದೆ. ಈ ಬಗ್ಗೆ ಉತ್ತರ ವಿಭಾಗ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...