ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಿ: ನಿರಂಜನಾರಾಧ್ಯ.ವಿ.ಪಿ. ಒತ್ತಾಯ

Date:

“ದಿನದಿಂದ ದಿನಕ್ಕೆ ಸರ್ಕಾರಿ ಶಾಲೆಗಳು ಕನಿಷ್ಠ ಮೂಲಸೌಕರ್ಯ ಹಾಗೂ ಖಾಯಂ ಶಿಕ್ಷಕರ ಕೊರತೆಯಿಂದ ಗುಣಾತ್ಮಕ ಶಿಕ್ಷಣವನ್ನು ಒದಗಿಸಲು ಹಲವು ಸಂಕಷ್ಟಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆ, ಶಾಲಾ ಶಿಕ್ಷಣ ವಲಯವನ್ನು ಆದ್ಯತಾ ವಲಯವನ್ನಾಗಿ ಪರಿಗಣಿಸಿ, ಮುಂಬರುವ ಬಜೆಟ್‌ನಲ್ಲಿ ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು” ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ಪಿ.ವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

- Advertisement -

ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವ ಅಭಿವೃದ್ಧಿ ಶಿಕ್ಷಣ ತಜ್ಞ ಹಾಗೂ ಸುಗಮಕಾರರು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ (ಫಾಫ್ರೆ) ನಿರಂಜನಾರಾಧ್ಯ.ವಿ.ಪಿ ಅವರು, “ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವ ಮೂಲಕ ಪ್ರತಿಯೊಂದು ಶಾಲೆಯನ್ನು ನೆರೆಹೊರೆಯ ಸಮಾನ ಶಾಲೆಯನ್ನಾಗಿ ಪರಿವರ್ತಿಸಿ ಎಲ್ಲ ಮಕ್ಕಳಿಗೆ ಸಮಾನ ಗುಣಮಟ್ಟದ ಶಿಕ್ಷಣ ಒದಗಿಸಬೇಕೆಂಬ ಕೂಗು ರಾಜ್ಯದಲ್ಲಿ ಹಲವು ದಶಕಗಳಿಂದ ಕೇಳಿಬರುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸಾಮಾಜಿಕ ನ್ಯಾಯವನ್ನು ಕೇಂದ್ರ ಬಿಂದುವನ್ನಾಗಿಸಿಕೊಂಡು ಒಕ್ಕೂಟ ವ್ಯವಸ್ಥೆಯಲ್ಲಿ ತಾವು ಪ್ರತಿಪಾದಿಸುತ್ತಿರುವ ‘ಕರ್ನಾಟಕ ಅಭಿವೃದ್ಧಿ ಮಾದರಿಯುʼ ಸೇವಾ ವಲಯವಾದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಮಾತ್ರ ಈ ಬಗೆಯ ಹೊಸ ಮಾದರಿಗಳು ಜನ ಸಾಮಾನ್ಯರಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತವೆ. ಹಾಗಾಗಿ, ತಾವು ಮಂಡಿಸಲಿರುವ ಮುಂದಿನ ಆಯವ್ಯಯದಲ್ಲಿ ಶಾಲಾ ಶಿಕ್ಷಣದ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಮೀಸಲಿಡಬೇಕು” ಎಂದು ಮನವಿ ಮಾಡಿದ್ದಾರೆ.

ಶಾಲಾ ಶಿಕ್ಷಣದ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಮೀಸಲಿಡಿ

  • ತಾವು ಈ ಹಿಂದೆ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ, ಸರ್ಕಾರಿ ಶಾಲೆಗಳ ಸಬಲೀಕರಣಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿಸ್ತೃತ ಸಂಶೋಧನೆಯ ಮೂಲಕ ’ಸರ್ಕಾರಿ ಶಾಲೆಗಳ ಸಬಲೀಕರಣ ವರದಿಯನ್ನು 2017ರಲ್ಲಿ ಸಲ್ಲಿಸಿತ್ತು. ಆದರೆ, ಇಲ್ಲಿಯವರೆಗೆ ಈ ವರದಿಯನ್ನು ಜಾರಿಗೊಳಿಸಲು ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ. ಮುಂದಿನ ಬಜೆಟ್‌ ಅಧಿವೇಶನದಲ್ಲಿ ಈ ವರದಿಯನ್ನು ಸದನದಲ್ಲಿ ಅಂಗೀಕರಿಸಿ ಪೂರ್ಣವಾಗಿ ಜಾರಿಗೊಳಿಸಲು ಆಯವ್ಯಯದಲ್ಲಿ ಹಣ ಮೀಸಲಿಡಬೇಕು.
  • ಶಿಕ್ಷಣ ಹಕ್ಕು ಕಾಯಿದೆ 2009 ಜಾರಿಗೆ ಬಂದು ಸುಮಾರು 15 ವರ್ಷಗಳು ಕಳೆಯುತ್ತಾ ಬಂದರು. ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯಿದೆ ಅನ್ವಯ ಮೂಲಭೂತ ಸೌಕರ್ಯಗಳಾದ ಶಿಕ್ಷಕರು, ಕಲಿಕಾ ಕೊಠಡಿ, ಅಗತ್ಯ ಪಾಠೋಪಕರಣ, ಪೀಠೋಪಕರಣ, ಕ್ರೀಡಾ ಸಾಮಗ್ರಿ, ಕುಡಿಯುವ ನೀರು, ಶೌಚಾಲಯ, ಇತ್ಯಾದಿಗಳನ್ನು  ಸಮರ್ಪಕವಾಗಿ ಒದಗಿಸಲು ಸಾಧ್ಯವಾಗಿಲ್ಲ.
  • ಕರ್ನಾಟಕದಲ್ಲಿ ಆರ್‌ಟಿಇ ಅನುಪಾಲನೆ ಕೇವಲ ಶೇಕಡ 26.3 ಇದೆ. ಈ ಕಾರಣದಿಂದ ಶಿಕ್ಷಣ ಹಕ್ಕು ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಆಯವ್ಯಯದಲ್ಲಿ ‘ವಿಶೇಷ ಮೂಲಭೂತ ಸೌಕರ್ಯ ಅಭಿವೃದ್ಧಿ ಅನುದಾನʼ ಬಿಡುಗಡೆ ಮಾಡಬೇಕು.
  • ಶಿಕ್ಷಣ ಹಕ್ಕು ಕಾಯಿದೆಯನ್ನು ಜಾರಿಗೊಳಿಸಲು ಒಂದು ರೋಡ್‌ ಮ್ಯಾಪನ್ನು ರೂಪಿಸಲು ಬಜೆಟ್‌ನಲ್ಲಿ ಘೋಷಿಸಬೇಕು.

ಈ ಸುದ್ದಿ ಓದಿದ್ದೀರಾ? ಸಾವಿರ ಕೋಟಿ ಬೆಲೆ ಬಾಳುವ ಜಾಗವನ್ನು ಖಾಸಗಿಯವರಿಗೆ ನೀಡಿ ಕಮಿಷನ್ ಪಡೆದ ಬಿಜೆಪಿ ನಾಯಕರು: ಎಎಪಿ ಆರೋಪ

  • ಕರ್ನಾಟಕ ಮಾದರಿಯ ಭಾಗವಾಗಿ ಮತ್ತು ಸಾಮಾಜಿಕ ನ್ಯಾಯದ ಆಶಯವನ್ನು ವಿಸ್ತರಿಸಲು ʼಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೆ ವಿಸ್ತರಿಸಬೇಕು. ರಾಜ್ಯದಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು 18 ವರ್ಷದವರೆಗೆ ನಿಷೇಧಿಸಲು ಮತ್ತು ಸಂವಿಧಾನದ ವಿಧಿ 45ರ ಆಶಯದಂತೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಒದಗಿಸಲು ಅಗತ್ಯ ಸೌಕರ್ಯಕ್ಕೆ ಮತ್ತು ನರ್ಸರಿ ಶಿಕ್ಷಕರ ತರಬೇತಿಗೆ/ನೇಮಕಾತಿಗೆ ವಿಶೇಷ ಅನುದಾನ ಒದಗಿಸಬೇಕು.
  • ಕಳೆದ ಮೂರು ಶೈಕ್ಷಣಿಕ ವರ್ಷದಿಂದ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಿಸದ ಕಾರಣ ನೂರಾರು ಮಕ್ಕಳು ಶಿಕ್ಷಣದ ಹಕ್ಕಿನಿಂದ ವಂಚಿತರಾಗಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ಉಚಿತ ಬೈಸಿಕಲ್ ವಿತರಣೆಗೆ ಆಯವ್ಯಯದಲ್ಲಿ ಅಗತ್ಯ ಅನುದಾನ ನೀಡಬೇಕು.

“ಬಡ ಜನರ ಮೂಲ ಆಶಯವಾಗಿರುವ ಗುಣಾತ್ಮಕ ಶಿಕ್ಷಣವನ್ನು ಒದಗಿಸುವ ಭಾಗವಾಗಿ ಮುಂಬರುವ ಆಯವ್ಯಯದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಆದ್ಯತಾ ವಲಯವನ್ನಾಗಿ ಪರಿಗಣಿಸಿ ಅದನ್ನು ಗಟ್ಟಿಗೊಳಿಸಲು ಅಗತ್ಯ ಅನುದಾನಗಳನ್ನು ಒದಗಿಸಬೇಕು” ಎಂದು ಕೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...