ಮೀಸಲಾತಿ ವಿವಾದ | ಅಂಬೇಡ್ಕರ್‌ ಮೇಲೆ ಕಾಂಗ್ರೆಸ್ಸಿಗೆ ಪ್ರೀತಿ ಇಲ್ಲ: ಸಿಎಂ ಬೊಮ್ಮಾಯಿ

Date:

  • ‘ಅಧಿಕಾರಕ್ಕೆ ಬಂದ ಮೇಲೆ ಮೀಸಲಾತಿ ಹಿಂಪಡೆಯುವುದಾಗಿ ಕಾಂಗ್ರೆಸ್ ಹೇಳುತ್ತಿದೆ’
  • ಅಂಬೇಡ್ಕರ್‌ ಅವರು ಬರೆದ ಸಂವಿಧಾನದ ಮೇಲೆ ಕಾಂಗೆಸ್ಸಿಗೆ ನಂಬಿಕೆ ಇಲ್ಲ: ಸಿಎಂ

ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್‌ ಹೇಳಿಕೆ ಗಮನಿಸಿದರೆ ಅಂಬೇಡ್ಕರ್‌ ಅವರ ಮೇಲೆಯಾಗಲಿ, ಅವರು ಬರೆದ ಸಂವಿಧಾನದ ಮೇಲೆಯಾಗಲಿ ನಂಬಿಕೆ ಇಲ್ಲ ಎಂಬುದು ತಿಳಿಯುತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮೀಸಲಾತಿ ನೀಡಿರುವುದು ಕಾನೂನು ಬಾಹಿರ, ಸಂವಿಧಾನ ವಿರೋಧಿ ಎಂದು ಕೆಳಮಟ್ಟದ ಶಬ್ದ ಬಳಸಿದ್ದಾರೆ” ಎಂದು ಆರೋಪಿಸಿದರು. 

“ಜನಸಂಖ್ಯೆ ಆಧಾರಿತವಾಗಿ ಮೀಸಲಾತಿ ನೀಡಬೇಕು ಎಂದು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ. ಎಸ್.ಸಿ/ ಎಸ್.ಟಿ ಸಮುದಾಯಗಳ ಬಹು ವರ್ಷಗಳ ಬೇಡಿಕೆಯನ್ನು ಈಡೇರಿಸಿ, ಸಂವಿಧಾನದ ಪರಿಚ್ಛೇದ 9 ಗೆ ಸೇರಿಸಲು ಶಿಫಾರಸ್ಸು ಮಾಡಲಾಗಿದೆ” ಎಂದು ಸಿಎಂ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಶಿಗ್ಗಾಂವಿ ಕ್ಷೇತ್ರದಿಂದಲೇ ನನ್ನ ಸ್ಪರ್ಧೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಮತ ಬ್ಯಾಂಕ್

“ಕಾಂಗ್ರೆಸ್‌ ಅವರು ತಮ್ಮ ಕಾಲದಲ್ಲಿ ಏನೂ ಮಾಡದೇ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದದವರನ್ನು ಬರೀ ಮತ ಬ್ಯಾಂಕ್‌ಗಾಗಿ ಬಳಕೆ ಮಾಡಲಾಗಿದೆ. ನಾಗಮೋಹನ್ ದಾಸ್ ವರದಿ ಬಂದು 4  ವರ್ಷ ಆಗಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಯಡಿಯೂರಪ್ಪ ಅವರ ಅವಧಿಯಲ್ಲಿ ವರದಿ ಬಂದ ಆರು ತಿಂಗಳಿಗೆ ವಿಸ್ತರಣೆ ಮಾಡಿದರು” ಎಂದರು.

“ನನ್ನ ಅವಧಿಯಲ್ಲಿ ಸರ್ವ ಪಕ್ಷಗಳ ಸಭೆ ಕರೆದು ಒಪ್ಪಿಗೆ ಪಡೆಯಲಾಯಿತು. ನಂತರ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಪರ ನಿರ್ಣಯ ಕೈಗೊಳ್ಳಲಾಯಿತು. ಸರ್ಕಾರ ಆದೇಶ ಹೊರಡಿಸಿ ಶೆಡ್ಯೂಲ್ 9ಕ್ಕೆ ಸೇರಿಸಲಾಗಿದೆ” ಎಂದು  ಸ್ಪಷ್ಟಪಡಿಸಿದರು.

ಸರ್ವರಿಗೂ ನ್ಯಾಯ

ನಾವು ಸಾಮಾಜಿಕ ನ್ಯಾಯದ ಪರಿಪಾಲನೆ ಮಾಡಿರುವುದನ್ನು ಕಾಂಗ್ರೆಸ್‌ ಟೀಕಿಸುತ್ತಿದೆ. ಕಾಂಗ್ರೆಸ್‌ನವರು ದಲಿತ, ಹಿಂದುಳಿದ ವರ್ಗದ, ಲಿಂಗಾಯತ, ಒಕ್ಕಲಿಗರ ವಿರೋಧಿಯಾಗಿದ್ದಾರೆ. ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಲ್ಲ

ಅಧಿಕಾರಕ್ಕೆ ಬಂದ ಮೇಲೆ ಮೀಸಲಾತಿ ಹಿಂಪಡೆಯುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಅವರು ಅಧಿಕಾರಕ್ಕೆ ಬರುವ ಪ್ರಶ್ನೆಯೆ ಇಲ್ಲ. ಇದನ್ನ ಹಿಂದೆ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಅವರಿಗೆ ಶಕ್ತಿಯೂ ಇಲ್ಲ ಅವಕಾಶವೂ ಇಲ್ಲ. ಕಾಂಗ್ರೆಸ್‌ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಬೊಮ್ಮಾಯಿ ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಚರಾಜ್ಯಗಳ ಫಲಿತಾಂಶ; ಜನರ ತೀರ್ಮಾನ ಗೌರವಿಸುತ್ತೇವೆ: ಸಿದ್ದರಾಮಯ್ಯ

ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದು, ಇನ್ನುಳಿದ ಮೂರು...

ಬೆಂಗಳೂರು | ನಿವೃತ್ತ ಐಎಎಸ್‌ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ: ದೂರು ದಾಖಲು

ಪಾನೀಯದಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎಂದು 28...

ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಸಾಮಾಜಿಕ ಹೋರಾಟಗಾರ ಸಿ ಎಸ್ ​ಸಿದ್ದರಾಜು ಅವರಿಂದ ದೂರು ಚುನಾವಣಾ...