ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳ ಗ್ರಾಮದ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿ ಭಾಗ್ಯಶ್ರೀ ಅವರ ಪೋಷಕರನ್ನು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ಮಾಡಿ ಸಾಂತ್ವನ ಹೇಳಿದರು.
ಬಾಲಕಿ ಆತ್ಮಹತ್ಯೆಗೆ ದುಃಖ ವ್ಯಕ್ತಪಡಿಸಿದ ಸಚಿವರು, “ವಸತಿ ಶಾಲೆಯ ಮಕ್ಕಳಿಗೆ ಆಪ್ತಸಮಾಲೋಚನೆ ನಡೆಸಲಾಗುವುದು” ಎಂದರು. ಇಂತಹ ಸಂಕಷ್ಟದ ಸಂದರ್ಭದಲ್ಲಿ ತಾವು ಕುಟುಂಬದ ಜೊತೆಗೆ ಇರುವುದಾಗಿ ಭರವಸೆ ನೀಡಿದ ಸಚಿವರು ಕಾಂಗ್ರೆಸ್ ಪಕ್ಷದ ವತಿಯಿಂದ ರೂ. 1 ಲಕ್ಷ ಪರಿಹಾರದ ಹಣವನ್ನು ಪೋಷಕರಿಗೆ ನೀಡಿದರು.
ಈ ಸಂದರ್ಭದಲ್ಲಿ ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಮೂದ್ ಸಾಹೇಬ್, ಭೀಮಣ್ಣ ಸಾಲಿ, ಶಿವಾನಂದ ಪಾಟೀಲ, ತಹಸೀಲ್ದಾರ ಇದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?
ರಸ್ತೆ ಅಪಘಾತ; ಪರಿಹಾರ ವಿತರಣೆ
ಕಳೆದ ನವೆಂಬರ್ ತಿಂಗಳಲ್ಲಿ ಹಲಕಟ್ಟಾ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದ ಆರು ಜನರ ವಾರಸುದಾರರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಪರಿಹಾರದ ಚೆಕ್ ವಿತರಿಸಿದರು.
ನಾಲವಾರದ ಅವರ ಮನೆಗೆ ಭೇಟಿ ನೀಡಿದ ಸಚಿವರು, ಮೃತ ಆರು ಮಂದಿಯ ವಾರಸುದಾರರಿಗೆ ತಲಾ ರೂ 2 ಲಕ್ಷದ ಪರಿಹಾರದ ಚೆಕ್ ನ್ನು ವಿತರಿಸಿದರು.
ನಾಲವಾರ ಗ್ರಾಮದ ನಿವಾಸಿಗಳಾದ ನಜ್ಮಿನ್ ಬೇಗಂ (28), ಬೀಬಿ ಫಾತಿಮಾ(12), ಅಬೂಬಕ್ಕರ್(4), ಬೀಬಿ ಮರಿಯಮ್( 3 ತಿಂಗಳು), ಮುಹಮ್ಮ ದ್ ಪಾಷಾ, 20) ಹಾಗೂ ಆಟೋ ಚಾಲಕ ಬಾಬಾ(35) ಸ್ಥಳದಲ್ಲಿಯೇ ಮೃತಪಟ್ಟಿದ್ದು, 10 ವರ್ಷದ ಬಾಲಕ ಮಹಮ್ಮದ್ ಹುಸೇನ್ ಗಂಭೀರ ಗಾಯಗೊಂಡಿದ್ದರು.
