ರಾಜ್ಯದಲ್ಲಿ ಮಳೆ ಅಬ್ಬರಕ್ಕೆ ತುಂಬಿ ಹರಿಯುತ್ತಿವೆ ನದಿಗಳು; ನದಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ

Date:

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ, ಮಲೆನಾಡು ಜಿಲ್ಲೆ ಸೇರಿದಂತೆ ಹಲವೆಡೆ ಜೋರು ಮಳೆಯಾಗುತ್ತಿದೆ. ಕುಮಾರಧಾರ, ಲಕ್ಷ್ಮಣತೀರ್ಥ, ಕಾವೇರಿ, ನೇತ್ರಾವತಿ ಸೇರಿದಂತೆ ರಾಜ್ಯದ ಹಲವು ನದಿಗಳು ತುಂಬಿ ಹರಿಯುತ್ತಿವೆ. ಹಾಗಾಗಿ, ಸ್ಥಳೀಯರು ಮತ್ತು ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ನೇತ್ರಾವತಿ ನದಿಗೆ ಸೇರುತ್ತಿದೆ. ಬೆಳ್ತಂಗಡಿ ತಾಲೂಕಿನಲ್ಲಿ ನೇತ್ರಾವತಿ ನದಿಯ ಹರಿವು ಹೆಚ್ಚಿದ್ದು ನೀರು ಇನ್ನಷ್ಟು ಏರುವ ಸಾಧ್ಯತೆಯಿದೆ. ಪ್ರಸ್ತುತ ನದಿಯಲ್ಲಿ ಪ್ರವಾಹದ ಸ್ಥಿತಿ ಇಲ್ಲ. ಆದರೆ, ಹರಿವು ಹೆಚ್ಚಿದೆ. ತಗ್ಗು ಪ್ರದೇಶದ ಕೆಲವು ತೋಟಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಬಂಟ್ವಾಳದಲ್ಲಿ ನೇತ್ರಾವತಿ ನದಿ 5.8 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿರುವ ಕಾರಣ ಜನ ಎಚ್ಚರಿಕೆಯಿಂದ ಇರಬೇಕು. ನದಿ ತೀರದ ಜನರು ಹೊಳೆಯಲ್ಲಿ ಇಳಿಯದಂತೆ ಸೂಚನೆ ನೀಡಿದೆ. ಅಲ್ಲದೇ, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಂಗನವಾಡಿ, ಪ್ರೌಢಶಾಲೆಗಳಿಗೆ ರಜೆ ನೀಡಿದೆ.

ಜೋರು ಮಳೆಯ ಕಾರಣ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಅಣೆಕಟ್ಟು ಸಂಪೂರ್ಣವಾಗಿ ಮುಳುಗಿದ್ದು, ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ‌ ನೀಡಲಾಗುತ್ತಿದೆ. ಕುಮಾರಧಾರ ನದಿ ತೀರದಲ್ಲಿ ಭದ್ರತಾ ಸಿಬ್ಬಂದಿ, ಹೋಮ್‌ಗಾರ್ಡ್ಸ್​​​​ಗಳನ್ನು ನಿಯೋಜಿಸಲಾಗಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನಲ್ಲಿ ಭಾರೀ ಮಳೆಗೆ ಲಕ್ಷ್ಮಣ ತೀರ್ಥ ನದಿ ತುಂಬಿ ಹರಿಯುತ್ತಿದೆ. ಒಳ ಹರಿವು ಹೆಚ್ಚಾದರೇ ಹನಗೋಡು ಬಳಿ ಇರುವ ಅಣೆಕಟ್ಟು ಮುಳುಗಡೆಯಾಗುವ ಸಾಧ್ಯತೆ ಇದೆ. ಇದರಿಂದ ನದಿ ನೀರು ಅಕ್ಕಪಕ್ಕದ ಜಮೀನುಗಳಿಗೆ ನುಗ್ಗಲಿದೆ. ಕೊಡಗಿನಲ್ಲಿ ಜೋರು ಮಳೆಯಾಗುತ್ತಿರುವ ಕಾರಣ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಮಡಿಕೇರಿ ತಾಲೂಕಿನ ಭಾಗಮಂಡಲ ತ್ರಿವೇಣಿ ಸಂಗಮ‌ ಜಲಾವೃತಗೊಂಡಿದೆ. ಭಾಗಮಂಡಲ – ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಮಂಗಳೂರಲ್ಲಿ ಮುಂದುವರಿದ ದುರಂತ: ವಿದ್ಯುತ್ ತಂತಿ ಬಿದ್ದು ದಾರುಣ ಅಂತ್ಯ ಕಂಡ ಇಬ್ಬರು ರಿಕ್ಷಾ ಚಾಲಕರು

ಸಿದ್ದಾಪುರ ತಾಲೂಕಿನ ಹಸ್ವಿಗುಳಿ ಗ್ರಾಮದಲ್ಲಿ ಗುಡ್ಡ ಕುಸಿತವಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ 400ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿಯುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೆ, ಇದನ್ನ ಜಿಲ್ಲಾಡಳಿತ ನಿರ್ಲಕ್ಷಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಗುರುವಾರವೂ ಆಗುತ್ತಿದೆ. ಮಳೆಗೆ ಕಾಸರಗೋಡು ಜಿಲ್ಲೆಯ ಮಧೂರು ಶ್ರೀ ಮದನಂತೇಶ್ವರ ಜಲಾವೃತಗೊಂಡಿದೆ. ಉಪ್ಪಿನಂಗಡಿ ಬಳಿ ನೇತ್ರಾವತಿ ನದಿ ನೀರಿನ ಮಟ್ಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...