ರಸ್ತೆ ಸುರಕ್ಷತಾ ಅಭಿಯಾನ | 1.5 ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಸಂಚಾರ ಪೊಲೀಸರು

Date:

ಸುರಕ್ಷಿತ ಹೆಲ್ಮೆಟ್ ಧರಿಸುವಿಕೆ ಮತ್ತು ಸೀಟ್ ಬೆಲ್ಟ್ ಬಳಕೆ, ಪಾದಚಾರಿ ಸುರಕ್ಷತೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು 1.5 ಲಕ್ಷ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಅಭಿಯಾನದ ಮುಖಾಂತರ ತರಬೇತಿ ನೀಡಿದ್ದಾರೆ.

- Advertisement -

ಸ್ಟೂಡೆಂಟ್ಸ್ ಅಸೋಸಿಯೇಷನ್ ​​ಫಾರ್ ರೋಡ್ ಸೇಫ್ಟಿ (ಎಸ್‌ಎಆರ್‌ಎಸ್‌) ಕಾರ್ಯಕ್ರಮದ ಅಡಿಯಲ್ಲಿ ಒಂದು ವಾರದ ರಸ್ತೆ ಸುರಕ್ಷತಾ ಅಭಿಯಾನದ ಭಾಗವಾಗಿ ಬೆಂಗಳೂರು ಸಂಚಾರ ಪೊಲೀಸರು 1.5 ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಐದು ದಿನಗಳಲ್ಲಿ 1 ಲಕ್ಷ ವಿದ್ಯಾರ್ಥಿಗಳನ್ನು ತಲುಪುವ ಗುರಿ ಹೊಂದಿದ್ದ ಈ ಕಾರ್ಯಕ್ರಮವು ಸುರಕ್ಷಿತ ರಸ್ತೆ ಶಿಷ್ಟಾಚಾರ ಮತ್ತು ಸಂಚಾರ ನಿಯಮಗಳನ್ನು ಪಾಲಿಸುವುದರ ಮಹತ್ವದ ಬಗ್ಗೆ ಅರಿವು ನೀಡಿದೆ.

ಜೂನ್ 24 ರಿಂದ 28ರವರೆಗೆ ನಡೆಸಲಾದ ಈ ಅಭಿಯಾನವು ಸಂವಾದ, ಕಾರ್ಯಾಗಾರಗಳು ಮತ್ತು ಪ್ರಾಯೋಗಿಕ ಪ್ರದರ್ಶನಗಳ ಮೂಲಕ 566 ಶಿಕ್ಷಣ ಸಂಸ್ಥೆಗಳ 1.5 ಲಕ್ಷ ವಿದ್ಯಾರ್ಥಿಗಳನ್ನು ತಲುಪಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮುಕ್ತಾಯ ಹಂತದಲ್ಲಿರುವ ಕಾವೇರಿ 5ನೇ ಹಂತದ ಯೋಜನೆ; ಮುಂದೇನು?

ಸುರಕ್ಷಿತ ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಬಳಕೆ, ಪಾದಚಾರಿ ಸುರಕ್ಷತೆ, ಅಪಾಯಕಾರಿ ಚಾಲನೆ ಹಾಗೂ ಜೀಬ್ರಾ ಕ್ರಾಸಿಂಗ್‌ಗಳ ಸರಿಯಾದ ಬಳಕೆ ಮತ್ತು ಟ್ರಾಫಿಕ್ ಸಿಗ್ನಲ್‌ಗಳನ್ನು ಆರ್ಥಮಾಡಿಕೊಳ್ಳುವುದರ ಬಗ್ಗೆ ಕಾರ್ಯಕ್ರಮಳಲ್ಲಿ ವಿವರಿಸಲಾಗಿದೆ. ಅನುಭವಿ ಟ್ರಾಫಿಕ್ ಅಧಿಕಾರಿಗಳು ಪ್ರಸ್ತುತಿಗಳು ಮತ್ತು ಪ್ರಾಯೋಗಿಕ ಪ್ರದರ್ಶನಗಳನ್ನು ನಡೆಸಿದ್ದಾರೆ.

ಹಲವಾರು ರಸ್ತೆ ಅಪಘಾತಗಳಲ್ಲಿ ಯುವ ಪಾದಚಾರಿಗಳು, ಸೈಕ್ಲಿಸ್ಟ್‌ಗಳು ಮತ್ತು ಬೈಕ್‌ ಸವಾರರು ಹೆಚ್ಚು ತುತ್ತಾಗಿರುವ ಕಾರಣ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...