ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

Date:

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಬಗ್ಗೆ ಚರ್ಚಿಸಿದ್ದಾರೆ.

- Advertisement -

ಬಲ್ಲ ಮೂಲಗಳ ಪ್ರಕಾರ, ಕುಮಾರಸ್ವಾಮಿ ಅವರು ತಮ್ಮ ತಂದೆ ಮತ್ತು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ರಾಜ್ಯಸಭಾ ಸದಸ್ಯತ್ವದ ಅವಧಿ ಜೂನ್‌ನಲ್ಲಿ ಕೊನೆಗೊಳ್ಳಲಿದ್ದು, ಅವರನ್ನು ರಾಜ್ಯಸಭೆಗೆ ಮರು ನಾಮನಿರ್ದೇಶನ ಮಾಡುವ ಬಗ್ಗೆಯೂ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶಿಸುವಂತೆ ಬಿಜೆಪಿ ಹೈಕಮಾಂಡ್‌ಗೆ ಶಿಫಾರಸ್ಸು ಮಾಡುವುದಕ್ಕೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರಯತ್ನಿಸುತ್ತಿದ್ದಾರೆಂಬ ಚರ್ಚೆಗಳಿರುವ ನಡುವೆ ಕುಮಾರಸ್ವಾಮಿ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ರಾಜ್ಯ ಸಭೆಗೆ ತಮ್ಮ ತಂದೆಯವರನ್ನೇ ಮರು ನಾಮನಿರ್ದೇಶಿಸಲು ಮನವಿ ಮಾಡಿಕೊಂಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : ಬಿಜೆಪಿ ಅಸ್ತ್ರಕ್ಕೆ ಟಿಎಂಸಿ ಪ್ರತ್ಯಸ್ತ್ರ; ಸುವೇಂದು ಎದುರು ಸ್ಪರ್ಧಿಸಿರುವ ‘ಪಬಿತ್ರ ಕರ್’ ಯಾರು ಗೊತ್ತೆ?

ಇನ್ನು, ಆಡಳಿತಾರೂಢ ಕಾಂಗ್ರೆಸ್ ವಿರುದ್ಧದ ರಾಜಕೀಯ ಹೋರಾಟ ಮತ್ತು ಮುಂಬರುವ ನಾಲ್ಕು ಎಂಎಲ್‌ಸಿ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನಿರ್ಧಾರ ತೆಗೆದುಕೊಳ್ಳುವಲ್ಲಿ ರಾಜ್ಯ ಬಿಜೆಪಿ ಮೈತ್ರಿಕೂಟದ ಪಾಲುದಾರ ಪಕ್ಷ ಜೆಡಿಎಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆಯೂ ಕುಮಾರಸ್ವಾಮಿ ತಮ್ಮ ಅಸಮಾಧಾನವನ್ನು ಶಾ ಮುಂದೆ ವ್ಯಕ್ತಪಡಿಸಿದ್ದಾರೆಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಈ ಸಂದರ್ಭದಲ್ಲಿ ರಾಜ್ಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕೂಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...

ಮಮತಾ ಬ್ಯಾನರ್ಜಿ ರ‍್ಯಾಲಿಗೆ ತೆರಳುತ್ತಿದ್ದ TMC ಶಾಸಕನ ಕಾರಿಗೆ ಮೊಟ್ಟೆ, ಕಲ್ಲು ತೂರಾಟ

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...