‘ಸೇಫ್‌ ಸಿಟಿ’ ಯೋಜನೆ | ಎಐ ಕ್ಯಾಮೆರಾಗಳ ಮೊರೆ ಹೋದ ಪೊಲೀಸ್ ಇಲಾಖೆ; 890 ಎಐ ಕ್ಯಾಮೆರಾ ಕಣ್ಗಾವಲು

Date:

ರಾಜಧಾನಿ ಬೆಂಗಳೂರಿನ ಸಂಚಾರ ವ್ಯವಸ್ಥೆಯ ಸುಧಾರಣೆಗಾಗಿ ನಗರ ಪೊಲೀಸರು ‘ಸೇಫ್‌ ಸಿಟಿ’ ಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದ ಕೃತಕ ಬುದ್ಧಿಮತ್ತೆಯ (ಎಐ) ಕ್ಯಾಮೆರಾಗಳ ಮೊರೆ ಹೋಗಿದ್ದು, ಉತ್ತಮ ಭದ್ರತೆಗಾಗಿ ನಗರದಾದ್ಯಂತ 500ಕ್ಕೂ ಹೆಚ್ಚು ಸ್ಥಳಗಳಲ್ಲಿ 890 ಎಐ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಮುಂದಾಗಿದ್ದಾರೆ.

“ಈ ಹೊಸ ಕ್ಯಾಮೆರಾಗಳು ನಗರದ ಸುತ್ತಮುತ್ತಲಿನ 3,000 ಸ್ಥಳಗಳಲ್ಲಿ ಅಳವಡಿಸಲಾಗಿರುವ 7,500 ಕ್ಯಾಮೆರಾಗಳಿಗೆ ಸೇರ್ಪಡೆಯಾಗುತ್ತವೆ. ಆದರೂ, 2,500 ಅಸ್ತಿತ್ವದಲ್ಲಿರುವ ಕ್ಯಾಮೆರಾಗಳು ಕಡಿಮೆ ಗುಣಮಟ್ಟದ ನಿರ್ವಹಣೆಯಿಂದಾಗಿ ನಿಷ್ಕ್ರಿಯವಾಗಿವೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅತ್ಯಧಿಕ ಸಂಚಾರ ದಟ್ಟಣೆಯುಳ್ಳ ಹಾಗೂ ಅಪಘಾತಗಳು ಸಂಭವಿಸುವ 501 ಪ್ರದೇಶಗಳಲ್ಲಿ 890ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಅಕ್ಟೋಬರ್‌ ಅಂತ್ಯದೊಳಗೆ ಕ್ಯಾಮೆರಾಗಳ ಅಳವಡಿಕೆ ಕಾರ್ಯ ಪೂರ್ಣಗೊಳ್ಳಲಿದೆ. ಆನಂತರ ಸಂಚಾರ ನಿರ್ವಹಣಾ ಕೇಂದ್ರಕ್ಕೆ ವಸ್ತು ಚಿತ್ರಣ ಲಭಿಸಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತಾಂತ್ರಿಕ ದೋಷದಿಂದಾಗಿ 2500 ಕ್ಯಾಮೆರಾಗಳು ಕಾರ್ಯ ನಿರ್ವಹಿಸುತ್ತಿರಲಿಲ್ಲ. ಈ ಲೋಪ ಸರಿಪಡಿಸಲು ಮುಂದಾಗಿರುವ ಪೊಲೀಸ್‌ ವಿಭಾಗವು ಕ್ಯಾಮೆರಾಗಳಿಗೆ ನೆಟ್‌ವರ್ಕ್ ಸಂಪರ್ಕ ಕಲ್ಪಿಸಿದ್ದ ಬಿಎಸ್‌ಎನ್‌ಎಲ್‌ನೊಂದಿಗಿನ ಒಪ್ಪಂದ ರದ್ದುಪಡಿಸಿದೆ. ಹೊಸದಾಗಿ ಬೆಲ್‌ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು, ತ್ವರಿತಗತಿಯಲ್ಲಿ ಒಂದು ಸಾವಿರ ಕ್ಯಾಮೆರಾಗಳ ಲೈವ್‌ ವಿಡಿಯೊ ಸಂಪರ್ಕ ಕಲ್ಪಿಸಲಾಗಿದೆ. 1,500 ಕ್ಯಾಮೆರಾಗಳು ಜೂನ್‌ ಅಂತ್ಯಕ್ಕೆ ಕಾರ್ಯಾಚರಣೆಗೆ ಸಿದ್ಧವಾಗಲಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

“ಸುರಕ್ಷಿತ ನಗರ ಯೋಜನೆಯಡಿ ಮುಂಬರುವ 890 ಸುಧಾರಿತ ತಂತ್ರಜ್ಞಾನದ ಕ್ಯಾಮೆರಾಗಳನ್ನು ಆಯಕಟ್ಟಿನ ಸ್ಥಳಗಳಲ್ಲಿ ಅಳವಡಿಸಲಾಗುವುದು. ಇದು ಸಂಚಾರ ನಿರ್ವಹಣೆಗೆ ಸಹಾಯ ಮಾಡುತ್ತದೆ. ವಾಹನಗಳ ಸಂಚಾರ, ಅಪಘಾತದ ಘಟನೆಗಳು, ಹಿಟ್ ಅಂಡ್ ರನ್, ಮಹಿಳೆಯರಿಗೆ ಕಿರುಕುಳ ಹಾಗೂ ಇತರ ಅಹಿತಕರ ಘಟನೆಗಳ ಮೇಲ್ವಿಚಾರಣೆಗೆ ಸಹಾಯ ಮಾಡುತ್ತದೆ. ದಟ್ಟಣೆಯ ವಸ್ತುಸ್ಥಿತಿಯ ದೃಶ್ಯಾವಳಿಗಳನ್ನು ಸಂಚಾರ ನಿರ್ವಹಣಾ ಕೇಂದ್ರಕ್ಕೆ ರವಾನಿಸಲಿವೆ. ಇದರಿಂದ ತ್ವರಿತವಾಗಿ ಸಂಚಾರ ದಟ್ಟಣೆಯನ್ನು ನಿರ್ವಹಣೆ ಮಾಡಲು ಸಾಧ್ಯವಾಗಲಿದೆ. ಜತೆಗೆ, ಅಪಘಾತಗಳು ಸಂಭವಿಸಿದಾಗ ತಕ್ಷಣ ಸ್ಪಂದಿಸಲು ನೆರವಾಗಲಿವೆ. ಕಮಾಂಡ್ ಸೆಂಟರ್‌ಗೆ ಜೋಡಿಸಲಾದ ಕ್ಯಾಮೆರಾಗಳನ್ನು ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಂಚಾರ ನಿರ್ವಹಣೆ ಎರಡಕ್ಕೂ ಬಳಸಬಹುದು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಐ ಕ್ಯಾಮೆರಾಗಳಲ್ಲಿ ದಿನದ 24 ಗಂಟೆಯ ದೃಶ್ಯಾವಳಿಗಳೂ ಸೆರೆಯಾಗಲಿವೆ. ಇದರಿಂದ ರಸ್ತೆಗಳಲ್ಲಿ ಪುಂಡಾಟಿಕೆ ಮಾಡುವ ಸವಾರರು ಹಾಗೂ ಹೆಣ್ಣು ಮಕ್ಕಳನ್ನು ಚುಡಾಯಿಸುವ ಪುಂಡರ ಕೃತ್ಯಗಳಿಗೂ ಕಡಿವಾಣ ಹಾಕಲು ಸಾಧ್ಯವಾಗಲಿದೆ. ಹಿಟ್‌ ಆ್ಯಂಡ್‌ ರನ್‌ ಪ್ರಕರಣಗಳಲ್ಲಿ ಸವಾರರನ್ನು ಪತ್ತೆ ಮಾಡಬಹುದಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಇದಲ್ಲದೆ, ಎಂಟು ಡ್ರೋನ್ ಕ್ಯಾಮೆರಾಗಳನ್ನು ಖರೀದಿಸಲು ಮತ್ತು ಬೆಂಗಳೂರಿನಾದ್ಯಂತ 150 ವಾಚ್ ಟವರ್‌ಗಳನ್ನು ಸ್ಥಾಪಿಸಲು ಪೊಲೀಸರು ಪ್ರಸ್ತಾಪಿಸಿದ್ದಾರೆ. ಇದಲ್ಲದೆ, ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿರುವ ಎಂಟು ಹೈ-ಡೆಫಿನಿಷನ್ ಫೇಸ್-ರೆಕಗ್ನಿಷನ್ ಕ್ಯಾಮೆರಾಗಳನ್ನು ಸ್ಥಾಪಿಸಲು ಇಲಾಖೆ ಮುಂದಾಗಿದೆ.

ಈ ಸುದ್ದಿ ಓದಿದ್ದೀರಾ? ಮತ್ತೆ ಜೀವ ಪಡೆದ ಬೆಂಗಳೂರಿನ ಆನೆ ಪಾರ್ಕ್ ಕೆರೆ; ವೈವಿಧ್ಯಮಯ ಪಕ್ಷಿಗಳಿಗೆ ನೆಲೆ

ಇವುಗಳನ್ನು ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು, ವಿಮಾನ ನಿಲ್ದಾಣಗಳು ಮತ್ತು ಕ್ರಿಕೆಟ್ ಸ್ಟೇಡಿಯಂನಲ್ಲಿ ಅಳವಡಿಸಲಿದೆ. ಆರೋಪಿಯ ಚಲನವಲನ ಮತ್ತು ಆತನನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ.

“ಸುರಕ್ಷಿತ ನಗರ ಯೋಜನೆಯಡಿ ನಿಗದಿಪಡಿಸಲಾದ ಹಣವನ್ನು ಕಮಾಂಡ್ ಸೆಂಟರ್ ಅನ್ನು ಮತ್ತಷ್ಟು ಬಲಪಡಿಸಲು ಎಐ ಆಧಾರಿತ ಕ್ಯಾಮೆರಾಗಳನ್ನು ಸ್ಥಾಪಿಸಲು ಬಳಸಲಾಗುತ್ತದೆ. ಈ ವರ್ಷ ಅಕ್ಟೋಬರ್ ವೇಳೆಗೆ ಯೋಜನೆ ಪೂರ್ಣಗೊಳ್ಳುವ ಸಾಧ್ಯತೆ ಇದೆ” ಎಂದು ಆಡಳಿತ ವಿಭಾಗದ ಉಪ ಪೊಲೀಸ್ ಆಯುಕ್ತ ಸಂತೋಷ್ ಬಾಬು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ...

ಜೂನ್ 19ರಂದು ಅಂಗನವಾಡಿ ನೌಕರರ ಸಂಘ ಅನಿರ್ದಿಷ್ಟಾವಧಿ ಹೋರಾಟ

ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು...

ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು...

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ....