ಬೀದರ್‌ ಲೋಕಸಭಾ | ಕೇಂದ್ರ ಸಚಿವ ಭಗವಂತ ಖೂಬಾಗೆ ಮಣಿಸಿ ಗೆಲುವಿನ ನಗೆ ಬೀರಿದ ಸಾಗರ ಖಂಡ್ರೆ

Date:

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದ ಸಾಗರ್ ಖಂಡ್ರೆ ಅವರು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಕ್ಷೇತ್ರದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

- Advertisement -

ಪ್ರಸಕ್ತ ಲೋಕಸಭೆಗೆ ಆಯ್ಕೆಯಾದ ಸಂಸದರಲ್ಲಿ 26 ವರ್ಷದ ಸಾಗರ್‌ ಖಂಡ್ರೆ ದೇಶದ ಅತಿ ಕಿರಿಯ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2014 ಹಾಗೂ 2019ರಲ್ಲಿ ಎರಡು ಬಾರಿ ಸತತವಾಗಿ ಜಯ ಸಾಧಿಸಿ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದ ಸಚಿವ ಭಗವಂತ ಖೂಬಾ ಅವರನ್ನು ಮಣಿಸುವ ಮೂಲಕ ಕ್ಷೇತ್ರ ಮತ್ತೆ ʼಕೈʼ ತೆಕ್ಕೆಗೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

2009 ರಿಂದ ಬೀದರ್‌ ಲೋಕಸಭಾ ಸಾಮಾನ್ಯ ಕ್ಷೇತ್ರವಾಗಿ ಬದಲಾದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ  ಕಾಂಗ್ರೆಸ್‌ನ ಮಾಜಿ ಸಿಎಂ ಧರ್ಮಸಿಂಗ್‌ ಜಯ ಗಳಿಸಿದ್ದರು. ಬಳಿಕ 2014 ಹಾಗೂ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಭಗವಂತ ಖೂಬಾ ಎನ್.‌ಧರ್ಮಸಿಂಗ್‌ ಹಾಗೂ ಈಶ್ವರ ಖಂಡ್ರೆ ಅವರನ್ನು ಕ್ರಮವಾಗಿ ಸೋಲಿಸಿ ಎರಡು ಬಾರಿ ಮೋದಿ ಅಲೆಯಲ್ಲಿ ಗೆದ್ದು ಬೀಗಿದರು.

ಚುನಾವಣಾಧಿಕಾರಿಗಳು ಆದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಸಾಗರ್‌ ಖಂಡ್ರೆ

ಸಾಗರ್‌ ಖಂಡ್ರೆ ಅವರು 6,65,162 ಮತ ಪಡೆದರೆ, ಭಗವಂತ ಖೂಬಾ ಅವರು 5,35,766 ಮತ ಗಳಿಸಿದ್ದಾರೆ. 1,29,396 ಅಂತರದಿಂದ ಸಾಗರ್‌ ಖಂಡ್ರೆ ಗೆಲುವಿನ ನಗೆ ಬೀರಿದ್ದಾರೆ.

ತಂದೆಯ ಸೋಲಿನ ಸೇಡು ತೀರಿಸಿಕೊಂಡ ಮಗ :

2019ರ ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಚಿವ ಈಶ್ವರ ಖಂಡ್ರೆ ಅವರು ಸಂಸದ ಭಗವಂತ ಖೂಬಾ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಆದರೆ, ಈಶ್ವರ ಖಂಡ್ರೆಯವರು ಸಂಸದ ಭಗವಂತ ಖೂಬಾ ವಿರುದ್ಧ ಭಾರಿ ಅಂತರದಿಂದ ಪರಾಭವಗೊಂಡಿದ್ದರು. ಅದೇ ಸೋಲನ್ನು ಸವಾಲಾಗಿ ಸ್ವೀಕರಿಸಿದ್ದ ಈಶ್ವರ ಖಂಡ್ರೆ ಹ್ಯಾಟ್ರಿಕ್‌ ಗೆಲುವಿನ ಹುಮ್ಮಸ್ಸಿನಲ್ಲಿದ್ದ ಭಗವಂತ ಖೂಬಾ ಅವರನ್ನು ಹೇಗಾದರೂ ಮಣಿಸಬೇಕೆಂದು ಪಟ್ಟು ಹಿಡಿದು ಮಗ ಸಾಗರ್‌ ಖಂಡ್ರೆ ಅವರನ್ನು ಕಾಂಗ್ರೆಸ್‌ ಟಿಕೆಟ್‌ ಕೊಡಿಸಿ ಅದೃಷ್ಟ ಪರೀಕ್ಷೆಗೆ ಇಳಿಸಿದ್ದರು. ಇದೀಗ ನಿರೀಕ್ಷೆಯಂತೆ ಮಗ ಸಾಗರ್‌ ಖಂಡ್ರೆ ಭಾರಿ ಅಂತರದಿಂದ ಗೆಲುವು ಸಾಧಿಸಿ ತಂದೆಯ ಸೋಲಿನ ಸೇಡು ತೀರಿಸಿಕೊಂಡಿದ್ದಾರೆ.

ಹಳೆ ದಾಖಲೆ ಅಳಿಸಿದ ಸಾಗರ್‌ ಖಂಡ್ರೆ :

ಹೊಸ ಚಿಗುರು, ಹಳೆ ಬೇರು ಎಂಬಂತೆ ಹಿರಿಯ, ಕಿರಿಯ ವಯಸ್ಸಿನ ಸಂಸದರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಸಂಸತ್ತು ಪ್ರವೇಶಿಸಿದ್ದು ಸೇರಿದಂತೆ ಲೋಕಸಭಾ ಕ್ಷೇತ್ರ ಹಲವು ಮೊದಲುಗಳಿಗೆ ಸಾಕ್ಷಿಯಾಗುವ ಮೂಲಕ ಹೊಸ ದಾಖಲೆಗೆ ಸಾಕ್ಷಿಯಾಗಿದೆ.

ಎಲ್‌ಎಲ್‌ಬಿ ಪಧವಿಧರರಾಗಿರುವ ಸಾಗರ್‌ ಖಂಡ್ರೆಯವರು ಮೊದಲ ಬಾರಿ ಚುನಾವಣೆ ಎದುರಿಸಿ ಯಶಸ್ಸು ಕಂಡಿದ್ದಾರೆ. 1980ರಲ್ಲಿ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಔರಾದ ತಾಲೂಕು ಮೂಲದ 28 ವರ್ಷದ ನರಸಿಂಗ್‌ರಾವ್‌ ಹುಲ್ಲಾ ಸೂರ್ಯವಂಶಿ ಅವರು ಸ್ಪರ್ಧಿಸಿ ಮೊದಲ ಪ್ರಯತ್ನದಲ್ಲೇ ಸಂಸತ್ತಿಗೆ ಆಯ್ಕೆಯಾಗಿದ್ದರು. ಸಂಸದರಾಗಿ ಆಯ್ಕೆಯಾದ ನರಸಿಂಗ್‌ರಾವ್ ಸೂರ್ಯವಂಶಿ ಅವರು ಕ್ಷೇತ್ರದ ಕಿರಿಯ ಸಂಸದ ಎಂಬ ಹೊಸ ದಾಖಲೆ ಸೃಷ್ಟಿಸಿದ್ದರು. ಪ್ರಸಕ್ತ ಲೋಕಸಭೆಗೆ ನಡೆದ ಚುನಾವಣೆ ಕಣದಲ್ಲಿದ್ದು, ಗೆದ್ದು ಬೀಗಿದ ಸಾಗರ್‌ ಖಂಡ್ರೆ ದೇಶದ ಕಿರಿಯ ಸಂಸದ ಎಂಬ ಹೆಗ್ಗಳಿಕೆಯೊಂದಿಗೆ ಕ್ಷೇತ್ರದ ಹಿಂದಿನ ದಾಖಲೆ ಅಳಿಸಿ ಹಾಕಿದ್ದಾರೆ.

ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಓಡಿಸ್ಸಾ ರಾಜ್ಯದ ಕೆಂದುಜಹಾರ್‌ ಕ್ಷೇತ್ರದಿಂದ (ಬಿಜೆಡಿ) ಪಕ್ಷದಿಂದ ಸ್ಪರ್ಧಿಸಿದ ಚಂದ್ರಾಣಿ ಮುರ್ಮು ಎಂಬ 25 ವರ್ಷದ ಯುವತಿ ಜಯ ಸಾಧಿಸಿ ದೇಶದ ಅತ್ಯಂತ ಕಿರಿಯ ಸಂಸದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು ಇಲ್ಲಿ ಸ್ಮರಿಸಬಹುದು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುವವರಿಗೆ ಪಾಠ ಕಲಿಸಿದ ಫಲಿತಾಂಶ

ರಾಜ್ಯ ರಾಜಕಾರಣದಲ್ಲಿ ಗುರುತಿಸಿಕೊಂಡಿರುವ ಭಾಲ್ಕಿಯ ಖಂಡ್ರೆ ಕುಟುಂಬ ಕಳೆದ ಬಾರಿ ರಾಷ್ಟ್ರ ರಾಜಕಾರಣ ಪ್ರವೇಶಿಸಲು ಲೋಕಸಭಾ ಅಖಾಡಕ್ಕೆ ಇಳಿದರೂ ಫಲಿಸಲಿಲ್ಲ. ಖಂಡ್ರೆ ಪರಿವಾರದ ಮೂರನೇ ತಲೆಮಾರು ಸಾಗರ್‌ ಖಂಡ್ರೆಯವರು ಪ್ರಸಕ್ತ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗುವ ಮೂಲಕ ಖಂಡ್ರೆ ಕುಟುಂಬ ಮೊದಲ ಬಾರಿಗೆ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿದಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಮನಾಬಾದ್‌ | ರಾತ್ರಿ ಪಾಳಿಯಲ್ಲಿ ವೈದ್ಯರ ಕೊರತೆ, ಪರದಾಡಿದ ಗರ್ಭಿಣಿಯರು!

ಹುಮನಾಬಾದ್‌ ಪಟ್ಟಣದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರು...

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...