ಹಸುಗೂಸು ಮಾರಾಟ | ಕಳೆದ 6 ವರ್ಷದಲ್ಲಿ 250ಕ್ಕೂ ಹೆಚ್ಚು ಮಕ್ಕಳ ಮಾರಾಟ

Date:

Advertisements

ರಾಜ್ಯದಲ್ಲಿ ಮತ್ತೆ ನವಜಾತ ಶಿಶುಗಳ ಮಾರಾಟ ಗ್ಯಾಂಗ್‌ ಸಕ್ರಿಯವಾಗಿದ್ದು, ಇತ್ತೀಚೆಗೆ 20 ದಿನದ ಗಂಡು ಮಗುವನ್ನು ಮಾರಾಟ ಮಾಡುವ ವೇಳೆ, ಸಿಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಒಂದೊಂದಾಗಿ ಸತ್ಯ ಹೊರಬೀಳುತ್ತಿದೆ. ಆರೋಪಿಗಳು ಕಳೆದ 6 ವರ್ಷದಲ್ಲಿ 250ಕ್ಕೂ ಹೆಚ್ಚು ಮಕ್ಕಳನ್ನು ಮಾರಾಟ ಮಾಡಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಸಿಸಿಬಿ ವಿಚಾರಣೆ ವೇಳೆ ಹೊರಬಿದ್ದಿದೆ.

250 ಮಕ್ಕಳ ಪೈಕಿ ಕರ್ನಾಟಕದಲ್ಲಿ 50-60 ಮಕ್ಕಳನ್ನು ಮಾರಾಟ ಮಾಡಿದ್ದರೆ, ಉಳಿದ ಮಕ್ಕಳನ್ನು ತಮಿಳುನಾಡಿಗೆ ಮಾರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮಾರಾಟ ಮಾಡಿರುವ ಮಕ್ಕಳ ಪೈಕಿ 10 ಮಕ್ಕಳ ಸುಳಿವು ಸದ್ಯ ಪೊಲೀಸರಿಗೆ ದೊರೆತಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮಕ್ಕಳನ್ನು ಯಾರಿಗೆ ಮತ್ತು ಎಲ್ಲಿ ಮಾರಾಟ ಮಾಡಲಾಗಿದೆ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

Advertisements

ಅಂಡಾಣು ಕೊಡುವವರನ್ನು ಪತ್ತೆ ಮಾಡಿ ಅವರಿಂದ ಕಮಿಷನ್ ಪಡೆಯುತ್ತಿದ್ದ ಮಹಾಲಕ್ಷ್ಮಿ ಈ ದಂಧೆಯ ಪ್ರಮುಖ ಸೂತ್ರಧಾರಿಯಾಗಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಈಕೆ ಈ ಮೊದಲು ಬಾಡಿಗೆ ಮನೆಯಲ್ಲಿದ್ದು, ಗಾರ್ಮೆಂಟ್‌ನಲ್ಲಿ ₹8000ಕ್ಕೆ ಕೆಲಸ ಮಾಡಿಕೊಂಡಿದ್ದಳು. ಗಾರ್ಮೆಂಟ್‌ನಲ್ಲಿ ಪರಿಚಯವಾದ ಒಬ್ಬರು ಅಂಡಾಣು ನೀಡಿದರೆ, ಹಣ ನೀಡುವುದಾಗಿ ಹೇಳಿದ್ದಾರೆ. ಆಗ ಅಂಡಾಣು ನೀಡಿದ್ದ ಮಹಾಲಕ್ಷ್ಮಿ 20 ಸಾವಿರ ಕಮಿಷನ್ ಪಡೆದಿದ್ದಳು. ಬಳಿಕ ತಾನೇ ಈ ದಂಧೆಯಲ್ಲಿ ಮುಂದುವರೆದ ಈಕೆ ಅಂಡಾಣು ನೀಡುವವರನ್ನು ಪತ್ತೆ ಮಾಡಿ ಕಮಿಷನ್ ಪಡೆಯುತ್ತಿದ್ದಳು. ಬಳಿಕ ಸ್ವಂತ ಮನೆ, ಕಾರು ಜತೆಗೆ ಮೈತುಂಬಾ ಚಿನ್ನಾಭರಣವನ್ನು ಆರೋಪಿ ಮಹಾಲಕ್ಷ್ಮಿ ಹೊಂದಿದ್ದಾಳೆ ಎಂಬ ವಿಚಾರವೂ ತನಿಖೆಯಿಂದ ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X