ಮುರುಘಾ ಶ್ರೀ ವಿರುದ್ಧದ ಸಾಮೂಹಿಕ ಅತ್ಯಾಚಾರ, ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಪ್ರಕರಣ ರದ್ದು

Date:

ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶ್ರೀ ವಿರುದ್ಧದ ಸಾಮೂಹಿಕ ಅತ್ಯಾಚಾರ, ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಪ್ರಕರಣ ರದ್ದು ಪಡಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಮುರುಘಾ ಶ್ರೀ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಪುರಸ್ಕರಿಸಿದೆ.

- Advertisement -

ಆದರೆ ಅತ್ಯಾಚಾರ ಮತ್ತು ಪೋಕ್ಸೊ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿ ಆರೋಪ ನಿಗದಿ ಮುಂದುವರಿಯಲಿದೆ ಎಂದಿರುವ ಕರ್ನಾಟಕ ಹೈಕೋರ್ಟ್ ಹೊಸದಾಗಿ ಆರೋಪ ನಿಗದಿ ಮಾಡಿ, ಪ್ರಕ್ರಿಯೆ ಮುಂದುವರಿಸಲು ವಿಚಾರಣಾಧೀನ ನ್ಯಾಯಾಲಯಕ್ಕೆ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಡಾ. ಶಿವಮೂರ್ತಿ ಮುರುಘಾ ಶರಣರು 2023ರ ಏಪ್ರಿಲ್‌ 13 ಮತ್ತು 20ರಂದು ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ತಮ್ಮ ವಿರುದ್ಧ ಚಿತ್ರದುರ್ಗದ ವಿಶೇಷ ನ್ಯಾಯಾಲಯವು ಆರೋಪ ನಿಗದಿ ಮಾಡಿರುವ ಆದೇಶಗಳನ್ನು ವಜಾ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.

“ಆರೋಪ ನಿಗದಿ ಮಾಡುವ ಸಂದರ್ಭದಲ್ಲಿ ವಿಶೇಷ ನ್ಯಾಯಾಲಯವು ಅಂಚೆ ಕಚೇರಿಯಂತೆ ವರ್ತಿಸಬಾರದಿತ್ತು” ಎಂದು ಹೇಳಿರುವ ಹೈಕೋರ್ಟ್, ಮುರುಘಾ ಶ್ರೀ ವಿರುದ್ಧ ತಪ್ಪಾಗಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ವರದಿಯಾಗುವುದಕ್ಕೂ ಮುನ್ನ 3.5 ವರ್ಷಗಳ ಹಿಂದೆ ಸಾಕ್ಷ್ಯ ನಾಶಪಡಿಸಲಾಗಿದ್ದು, ಐಪಿಸಿ ಸೆಕ್ಷನ್‌ 201ರ ಅಡಿ ತಪ್ಪಾಗಿ ಸಾಕ್ಷ್ಯ ನಾಶ ಆರೋಪ ಹೊರಿಸಲಾಗಿದೆ” ಎಂದು ಹೇಳಿದೆ.

ಈ ಸಂದರ್ಭದಲ್ಲೇ ಹೈಕೋರ್ಟ್, “ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ 376(2)ಎನ್‌ ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ–2012ರ ಸೆಕ್ಷನ್‌ 4 ಮತ್ತು 6ರ ಅಡಿ ಆರೋಪ ಮುಂದುವರಿಯಲಿವೆ” ಎಂದು ತಿಳಿಸಿದೆ.

“ಮುರುಘಾ ಶ್ರೀ ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ” ಎಂದು ಆರೋಪಿಸಿ 2022ರ ಆಗಸ್ಟ್‌ 26ರಂದು ಮೈಸೂರಿನ ನಜರ್‌ಬಾದ್ ಪೊಲೀಸ್‌ ಠಾಣೆಯಲ್ಲಿ ಇಬ್ಬರು ಬಾಲಕಿಯರು ದೂರು ದಾಖಲಿಸಿದ್ದು, 2022ರ ಸೆಪ್ಟೆಂಬರ್ 1ರಂದು ಪೊಲೀಸರು ಮುರುಘಾ ಶ್ರೀರನ್ನು ಬಂಧಿಸಿದ್ದರು.

ಇದಾದ ಬಳಿಕ ಮುರುಘಾ ಶ್ರೀ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನು ಮತ್ತಿಬ್ಬರು ಬಾಲಕಿಯರು ಮಾಡಿದ್ದು, ಈ ಪ್ರಕರಣದಲ್ಲಿ 2023ರ ನವೆಂಬರ್‌ನಲ್ಲಿ ಶ್ರೀಗಳಿಗೆ ಹೈಕೋರ್ಟ್‌ನಿಂದ ಜಾಮೀನು ನೀಡಲಾಗಿದೆ. ಆದರೆ ಚಿತ್ರದುರ್ಗ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

800 ಉರ್ದು, 200 ಮರಾಠಿ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಸಭಾಪತಿ ಸಲೀಂ ಅಹ್ಮದ್‌ಗೆ ಮನವಿ

ಸರ್ಕಾರವು 800 ಉರ್ದು ಮತ್ತು 200 ಮರಾಠಿ ಮಾಧ್ಯಮ ಶಿಕ್ಷಕರ ಹುದ್ದೆಗಳನ್ನು...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...