ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

Date:

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ ಪರೀಕ್ಷೆ ನಡೆಸಿ, ಫಲಿತಾಂಶ ಪ್ರಕಟಿಸಿದೆ. ಫಲಿತಾಂಶ ಪ್ರಕಟಿಸಿ ಎರಡು ವಾರದ ಬಳಿಕ ಈಗ ಪಿಯುಸಿ ಪರೀಕ್ಷೆ-2 ನಡೆಸಲು ಮುಂದಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಮೇ 16 ರವರೆಗೆ ನಡೆಯಲಿದೆ.

- Advertisement -

ದ್ವಿತೀಯ ಪಿಯುಸಿ ಪರೀಕ್ಷೆ-2 ಬರೆಯಲು ಒಟ್ಟು 1,49,300 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ವಿಶೇಷ ಅಂದರೆ, ಪಿಯುಸಿ ಮೊದಲ ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಹಳೆಯ ಫಲಿತಾಂಶಕ್ಕೆ ಚಾಲೆಂಜ್ ಮಾಡಲು 32 ಸಾವಿರ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. 27,092 ವಿದ್ಯಾರ್ಥಿಗಳು ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. ನಾಟ್ ಕ್ಲಿಯರ್ಡ್ ವಿದ್ಯಾರ್ಥಿಗಳ ಸಂಖ್ಯೆ 89,221 ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಒಟ್ಟು 84,933 ವಿದ್ಯಾರ್ಥಿಗಳು, 64,367 ವಿದ್ಯಾರ್ಥಿನಿಯರು ಸೇರಿ 1,49,300 ಅಭ್ಯರ್ಥಿಗಳು ಪರೀಕ್ಷೆ-2ಕ್ಕೆ ಹಾಜರಾಗುತ್ತಿದ್ದು, ಕಲಾ ವಿಭಾಗದಲ್ಲಿ 52,492, ವಾಣಿಜ್ಯ ವಿಭಾಗದಲ್ಲಿ 39,427 ಹಾಗೂ ವಿಜ್ಞಾನ ವಿಭಾಗದಲ್ಲಿ 57,381 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಂಡಳಿ ತಿಳಿಸಿದೆ.

ಪರೀಕ್ಷೆಗೆ ನೋಂದಾಯಿಸಿರುವ ಎಲ್ಲ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್​ಸೈಟ್ https://kseab.karnatala.gov.in ನಲ್ಲಿ ಪಡೆಯಬಹುದಾಗಿದೆ.

ಹನ್ನೊಂದು ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆಯನ್ನು ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪತ್ರವನ್ನು ಆನ್​ಲೈನ್​ನಲ್ಲಿ ಪಡೆಯಬಹುದಾಗಿದೆ. ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರಲ್ಲಿ ಕೆಲವರು ಅನುತ್ತೀರ್ಣರಾಗಿದ್ದರೆ, ಮತ್ತೆ ಕೆಲವರಿಗೆ ಅಂಕ ಕಡಿಮೆ ಬಂದಿದೆ ಎಂಬ ಅಸಮಾಧಾನ ಹೊಂದಿದ್ದರೆ, ಅಂತವರಿಗಾಗಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಸಲಾಗುತ್ತಿದೆ. ಇದರ ಅಂತಿಮ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಪ್ರತಿಯೊಂದು ವಿಷಯದ ಪರೀಕ್ಷೆಯು ಮಧ್ಯಾಹ್ನ 2-15 ರಿಂದ ಸಂಜೆ 04-30 ಗಂಟೆವರೆಗೆ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾರುಗಳ ನಡುವೆ ಢಿಕ್ಕಿ ಯುವತಿ ಸಜೀವ ದಹನ; ಗಾಯಗೊಂಡಿದ್ದ ಮೂವರು ಸಾವು

ಪರೀಕ್ಷಾ ವೇಳಾಪಟ್ಟಿ

  • ಏ.29 ರಂದು ಕನ್ನಡ, ಅರೇಬಿಕ್
  • ಏ.30 ರಂದು ಇತಿಹಾಸ / ಭೌತಶಾಸ್ತ್ರ
  • ಮೇ 2ರಂದು ಇಂಗ್ಲಿಷ್
  • ಮೇ 3ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • ಮೇ 4ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಗೃಹವಿಜ್ಞಾನ, ಮೂಲಗಣಿತ
  • ಮೇ 9ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣಶಾಸ್ತ್ರ
  • ಮೇ 11ರಂದು ಸಮಾಜಶಾಸ್ತ್ರ, ಭೂಗರ್ಭಶಾಸ್ತ್ರ, ಜೀವಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
  • ಮೇ 13ರಂದು ಅರ್ಥಶಾಸ್ತ್ರ
  • ಮೇ 14ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
  • ಮೇ 15ರಂದು ಹಿಂದಿ
  • ಮೇ 16ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೆಬಿಕ್, ಫ್ರೆಂಚ್
  • ಮೇ 16 ರಂದು ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಬ್ಯೂಟಿ ಅಂಡ್ವೆಲ್‌ನೆಸ್‌, ಆಟೋಮೊಬೈಲ್, ರೀಟೈಲ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...