ದ್ವಿತೀಯ ಪಿಯುಸಿ ಪರೀಕ್ಷೆ ಮೌಲ್ಯ ಮಾಪನ ಹಾಗೂ ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, ನಾಳೆ (ಏ.10) ಬುಧವಾರ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಂಗಳವಾರ ತಿಳಿಸಿದೆ.
ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್ 1ರಿಂದ ಮಾರ್ಚ್ 22 ರವರೆಗೆ ಪರೀಕ್ಷೆ ನಡೆದಿದ್ದವು. ಹೆಸರು ನೋಂದಾಯಿಸಿಕೊಂಡಿದ್ದ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ.98 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಫಲಿತಾಂಶ ಘೋಷಣೆ ಕುರಿತು ನಾಳೆ ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆ ನಂತರ https://karresults.nic.in ಜಾಲತಾಣದಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.