ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

Date:

Advertisements

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆ ನಡೆದಿದೆ. ಪರೀಕ್ಷೆಯ ಮೊದಲ ದಿನವೇ 18,231 ವಿದ್ಯಾರ್ಥಿಗಳು ಗೈರಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.

ರಾಜ್ಯಾದ್ಯಂತ ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗಗಳಲ್ಲಿ 3,30,608 ಗಂಡು ಮಕ್ಕಳು ಮತ್ತು 3,67,958 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 6,98,566 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 1,124 ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಿದೆ.

ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಗೆ 5,25,787 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 5,07,556 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಹಾಜರಾತಿಯು ಶೇ.96.53ರಷ್ಟು ದಾಖಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 1,499 ವಿದ್ಯಾರ್ಥಿಗಳು ಗೈರಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ 1,175, ಕಲಬುರಗಿ ಜಿಲ್ಲೆಯಲ್ಲಿ 1,132, ರಾಯಚೂರು 1,097, ತುಮಕೂರು 1,067 ಹಾಗೂ ಬೀದರ್ ಜಿಲ್ಲೆಯಲ್ಲಿ 1,010 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಸಂಬಂಧ ರಾಜ್ಯಾದ್ಯಂತ 540 ಜಿಲ್ಲಾ ಜಾಗೃತ ದಳ ಹಾಗೂ 3,108 ವಿಶೇಷ ಜಾಗೃತ ದಳದ ಸದಸ್ಯರನ್ನು ನೇಮಕ ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X