ದ್ವಿತೀಯ ಪಿಯುಸಿ | ಮೂವರು ವಿದ್ಯಾರ್ಥಿಗಳ ಪರೀಕ್ಷೆಗೆ 20 ಸಿಬ್ಬಂದಿ ಕರ್ತವ್ಯ ನಿರ್ವಹಣೆ

Date:

ಸದ್ಯ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದೆ. 1,124 ಕೇಂದ್ರಗಳಲ್ಲಿ ಈ ಬಾರಿ 6,98,624 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮಾರ್ಚ್‌ 21ರಂದು ತಮಿಳು, ತೆಲಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಹಾಗೂ ಫ್ರೆಂಚ್ ಭಾಷೆಗಳಿಗೆ ಪರೀಕ್ಷೆ ನಡೆಯುತ್ತಿದೆ. ಇದರಲ್ಲಿ ವಿಶೇಷವೆಂದರೆ, ಕೊಪ್ಪಳದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಮೂವರೇ ವಿದ್ಯಾರ್ಥಿಗಳು ಹಾಜರಾಗಿದ್ದು, 20 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

- Advertisement -

ಕೊಪ್ಪಳದ ಈ ಕೇಂದ್ರದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಉರ್ದು ಪರೀಕ್ಷೆ ಬರೆದರೆ, ಓರ್ವ ವಿದ್ಯಾರ್ಥಿನಿ ಸಂಸ್ಕೃತ ಪರೀಕ್ಷೆ ಬರೆಯಲು ಹಾಜರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೂವರು ವಿದ್ಯಾರ್ಥಿಗಳಿಗೆ ಇಬ್ಬರು ರೂಮ್‌ ಸೂಪರ್‌ವೈಸರ್, ಚೀಫ್​ ಕಸ್ಟೋಡಿಯನ್, ಜಂಟಿ ಅಧೀಕ್ಷಕರು, ಆಫೀಸ್‌ ಸುಪರಿಡೆಂಟ್​​, ಓರ್ವ ಉತ್ತರ ಪತ್ರಿಕೆ ಪಾಲಕರು, ಓರ್ವ ಕಚೇರಿ ಸಹಾಯಕ, ಓರ್ವ ಟೈಪಿಸ್ಟ್, ಓರ್ವ ಜಾಗೃತದಳ ಸಿಬ್ಬಂದಿ, ಓರ್ವ ಗ್ರೂಪ್ ಡಿ ಸಿಬ್ಬಂದಿ ಸೇರಿದಂತೆ ಇಪ್ಪತ್ತು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಓರ್ವ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಕೂಡಾ ಪರೀಕ್ಷಾ ಕೇಂದ್ರದಲ್ಲಿ ನಿಯೋಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | 85 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತದಾನಕ್ಕೆ ಅವಕಾಶ

ಪರೀಕ್ಷೆ ಎಷ್ಟು ಜನ ವಿದ್ಯಾರ್ಥಿಗಳು ಬರೆದರೂ ಎಲ್ಲ ರೀತಿಯ ವ್ಯವಸ್ಥೆ ಮಾಡುತ್ತೇವೆ. ಇನ್ನುಳಿದ ಪರೀಕ್ಷೆಗಳಂತೆ ಈ ಪರೀಕ್ಷೆಗಳಲ್ಲಿ ನಿಯಮ ಪಾಲನೆ ಮಾಡುತ್ತೇವೆ. ಎಲ್ಲ ಸಿಬ್ಬಂದಿ ತಮ್ಮ ತಮ್ಮ ಕೆಲಸ ನಿರ್ವಹಣೆ ಮಾಡುತ್ತಾರೆ ಎಂದು ಸಿಬ್ಬಂದಿ ಹೇಳುತ್ತಾರೆ.

ಮಾರ್ಚ್‌ 21ರಂದು ತಮಿಳು, ತೆಲಗು ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಹಾಗೂ ಫ್ರೆಂಚ್ ಭಾಷೆಗಳಿಗೆ ಪರೀಕ್ಷೆ ಇನ್ನೂ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...