ಮೈಸೂರು |ಮೇಲಧಿಕಾರಿಗಳ ಕಿರುಕುಳ ಆರೋಪ; ಎಫ್‌ಡಿಎ ಆತ್ಮಹತ್ಯೆ

Date:

Advertisements

ಸರ್ಕಾರಿ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ 32 ವಯಸ್ಸಿನ ಪ್ರಜ್ವಲ್‌ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೇಲಧಿಕಾರಿಗಳಾದ ತಹಸೀಲ್ದಾರ್ ಪ್ರವೀಣ್, ಶಿರಸ್ತೇದಾರ್ ಗುರುರಾಜ್ ವಿರುದ್ಧ ಕಿರುಕುಳದ ಗಂಭೀರ ಆರೋಪ ಕೇಳಿ ಬಂದಿದೆ.

ಮಡಿಕೇರಿ ತಹಸೀಲ್ದಾರ್ ಕಚೇರಿ ಬಿಲ್ಲಿಂಗ್ ವಿಭಾಗದಲ್ಲಿ ನಾಲ್ಕು ವರ್ಷಗಳಿಂದ ಪ್ರಜ್ವಲ್ ಸೇವೆ ಸಲ್ಲಿಸುತ್ತಿದ್ದರು. ಆರು ತಿಂಗಳಿಂದ ತಹಸೀಲ್ದಾರ್, ಶಿರಸ್ತೇದಾರ್ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಕಚೇರಿ ಸಿಬ್ಬಂದಿ, ಸಾರ್ವಜನಿಕರ ಮುಂದೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ತಾಯಿ, ಪತ್ನಿ ಜತೆ ಪ್ರಜ್ವಲ್ ನೋವು ಹೇಳಿಕೊಂಡಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಆಶಯವೋ, ಅಣಕವೋ?

ಇತ್ತೀಚೆಗೆ ಫೆಸ್ಟಿವಲ್ ಅಡ್ವಾನ್ಸ್ ಬಿಲ್‌ನಲ್ಲಿ ತಹಸೀಲ್ದಾರ್ ಸಹಿ ಹೋಲಿಕೆ ಆಗಿರಲಿಲ್ಲ. ಇದನ್ನೇ ನೆಪ ಮಾಡಿಕೊಂಡು ‘ನೀನೇ ಸಹಿ ಮಾಡಿದ್ದೀಯ’ ಎಂದು ಪ್ರಜ್ವಲ್ ಮೇಲೆ ಆರೋಪ ಮಾಡಿದ್ದ ತಹಸೀಲ್ದಾರ್ ಪ್ರವೀಣ್. ಮೀಟಿಂಗ್ ಮಾಡಿ ಸಸ್ಪೆಂಡ್ ಮಾಡುವುದಾಗಿ ಬೆದರಿಕೆ ಕೂಡಾ ಹಾಕಿದ್ದರು ಎಂದು ಹೇಳಲಾಗಿದೆ.

ಕಾಲು ಹಿಡಿದು ಬೇಡಿಕೊಂಡರೂ ಬಾಯಿಗೆ ಬಂದಂತೆ ಅಧಿಕಾರಿಗಳು ಮಾತನಾಡಿದ್ದರು. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಜ್ವಲ್ ಯತ್ನಿಸಿದ್ದಾರೆ.

ಐಸಿಯುನಲ್ಲಿ ಚಿಕಿತ್ಸೆ ಪಡೆಯುವಾಗಲೇ ಪೊಲೀಸರನ್ನು ಭೇಟಿ ಮಾಡಲು ಪ್ರಜ್ವಲ್ ಬಯಸಿದ್ದರು. ಲಿಖಿತ ಹೇಳಿಕೆಯನ್ನು ಮೈಸೂರಿನ ಅಶೋಕಪುರಂ ಠಾಣೆಗೆ ಕಳುಹಿಸಿದ್ದರು. ಪೊಲೀಸರು ಬರುವ ಮುನ್ನವೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರಜ್ವಲ್ ಪತ್ನಿ ಬಿ‌.ಜೆ.ಶೃತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ – ಆರೋಗ್ಯ ಕರ್ನಾಟಕ ‘ ಅಂತಾರಾಷ್ಟ್ರೀಯ ಕಾರ್ಯಾಗಾರ

ಮೈಸೂರಿನಲ್ಲಿ ಭಾರತ ಜೆಎಸ್‌ಎಸ್ ಎಹೆಚ್‌ಇಆರ್ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ವೊಲ್ವರ್‌ಹ್ಯಾಂಪ್ಸನ್ ವಿಶ್ವವಿದ್ಯಾಲಯದ...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಮೈಸೂರು | ‘ ನಿರಂತರ ಸಹಜ ರಂಗ – 2025 ‘ಉದ್ಘಾಟಿಸಿದ ಹಿರಿಯ ರಂಗಕರ್ಮಿ ಸಿ ಬಸವಲಿಂಗಯ್ಯ

ಮೈಸೂರಿನ ಮಾನಸಗಂಗೋತ್ರಿಯ ಗಾಂಧಿ ಭವನದಲ್ಲಿ ಭಾನುವಾರ ಸಂಜೆ ' ನಿರಂತರ ಸಹಜ...

Download Eedina App Android / iOS

X