ಅಧಿವೇಶನ | ಕುಮ್ಕಿ ಜಮೀನು ಮಂಜೂರಾತಿ ಸಾಧ್ಯವಿಲ್ಲ, ಬಡವರ ಮನೆಗಳ ತೆರವೂ ಇಲ್ಲ: ಕೃಷ್ಣ ಬೈರೇಗೌಡ

Date:

ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.

- Advertisement -

ವಿಧಾನಸಭಾ ಅಧಿವೇಶನದಲ್ಲಿ ಸೋಮವಾರ ಬಿಜೆಪಿ ನಾಯಕ ವಿ. ಸುನೀಲ್‌ ಕುಮಾರ್‌ ಕುಮ್ಕಿ ಜಮೀನಿನ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದರು. “ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕುಮ್ಕಿ ಜಮೀನಿನ ಸಮಸ್ಯೆ ಉಲ್ಬಣಿಸಿದ್ದು, ಸ್ವಾಧೀನದಲ್ಲಿರುವ ಕುಮ್ಕಿ ಜಮೀನಿನನ್ನು ಕಲಂ ನಮೂನೆ 53-57 ಹಾಗು 93 ಸಿಸಿ ಪ್ರಕಾರ ಮಂಜೂರು ಮಾಡಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕುಮ್ಕಿ ಜಮೀನಿನ ಮಂಜೂರಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಯಾರಿಗೂ ಮಂಜೂರು ಮಾಡುವುದು ಸಾಧ್ಯವಿಲ್ಲ. ಆಗುತ್ತೆ, ನೋಡೋಣ ಎಂದು ಜನರಿಗೆ ತಪ್ಪು ಮಾಹಿತಿ ಅಥವಾ ತಪ್ಪು ನಿರೀಕ್ಷೆಗಳನ್ನು ನೀಡಲು ನಾವು ಸಿದ್ದರಿಲ್ಲ. ಕಹಿಯಾದರೂ ಸತ್ಯವನ್ನು ಹೇಳಲೇಬೇಕು. ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂಬುದೇ ಸತ್ಯ” ಎಂದು ಪುನರುಚ್ಚರಿಸಿದರು.

“ಕುಮ್ಕಿ ಜನೀನನ್ನು ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಸಂಪುಟ ಉಪ ಸಮಿತಿ ಸಭೆ ರಚನೆ ಮಾಡಿತ್ತು. ಈ ಸಭೆ ದೀರ್ಘ ಚರ್ಚೆ ನಡೆಸಿದ ನಂತರ ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ ಎಂದು ಈ ವಿಚಾರವನ್ನೇ ಕೈಬಿಟ್ಟಿತ್ತು” ಎಂಬ ಮಾಹಿತಿಯನ್ನು ಅವರು ಸದನಕ್ಕೆ ನೀಡಿದರು.

ಮುಂದುವರೆದು, “ಕೆಎಲ್‌ಆರ್‌ ಆಕ್ಟ್‌ ರೂಲ್‌ 79ರ ಪ್ರಕಾರ ಕುಮ್ಕಿ ಪ್ರದೇಶವನ್ನು ಉಪಯೋಗ ಮಾಡಿಕೊಳ್ಳುವ ಹಕ್ಕನ್ನು ಜನರಿಗೆ ನೀಡಲಾಗಿದೆ. ಜಮೀನಿಗೆ ಹೊಂದಿಕೊಂಡಿರುವ ಕಾಡಿನ ಭಾಗದ ಉಪ ಉತ್ಪನ್ನಗಳನ್ನು ಬಳಕೆ ಮಾಡಿಕೊಳ್ಳುವ ಹಕ್ಕನ್ನು ನೀಡಲಾಗಿದೆ. ಆದರೆ, ಆ ಜಾಗಗಳನ್ನು ಮಂಜೂರು ಮಾಡಲಾಗುವುದಿಲ್ಲ ಎಂಬ ಅಂಶ ಕಾನೂನಿನಲ್ಲಿ ಸ್ಪಷ್ಟವಾಗಿದೆ. ಹೀಗಾಗಿ ಕುಮ್ಕಿ ಜಮೀನನ್ನು ಕನಿಷ್ಠ ಭೋಗ್ಯಕ್ಕೆ ನೀಡುವುದಾದರೂ ಸಾಧ್ಯವಿದೆಯಾ ಎಂಬ ಕುರಿತು ಗಂಭೀರವಾಗಿ ಪರಿಶೀಲಿಸಲಾಗುವುದು” ಎಂದು ಸ್ಪಷ್ಟೀಕರಣ ನೀಡಿದರು.

ಬಡವರ ಮನೆ ತೆರವು ಸಾಧ್ಯವಿಲ್ಲ

ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆ ಸಾಧ್ಯವಿಲ್ಲ ಎಂಬ ವಿಚಾರವನ್ನೂ ಸಚಿವ ಕೃಷ್ಣ ಬೈರೇಗೌಡ ಅವರು ಸದನದ ಗಮನಕ್ಕೆ ತಂದರು.

ಈ ಬಗ್ಗೆ ಗಮನ ಸೆಳೆದ ಸಚಿವರು, “ಕುಮ್ಕಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿರುವ ಬಡವರ ಬಗ್ಗೆ ವಿಶೇಷ ದೃಷ್ಟಿಯಿಂದ ನೋಡುವ ಅಗತ್ಯವಿದೆ. ಗೋಮಾಳ ಜಾಗದಲ್ಲಿ 94 ಸಿಸಿ ಪ್ರಕಾರ ಮಂಜೂರು ಮಾಡದಿದ್ದರೆ, ಖಂಡಿತ ನನ್ನ ಬಳಿ ಬನ್ನಿ ಗ್ರ್ಯಾಂಟ್‌ ಮಾಡಿ ಕೊಡುತ್ತೇನೆ. ಆದರೆ, ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ. ಇದೇ ಸಂದರ್ಭದಲ್ಲಿ ಬಡವರ ಮನೆಯನ್ನೂ ತೆರವುಗೊಳಿಸಲಾಗದು. ಹಾಗಾಗಿ ಕಾನೂನಾತ್ಮಕವಾಗಿ ಸಕಾರಾತ್ಮಕವಾಗಿ ಮಾಡಬಹುದಾ ಎಂದು ಪ್ರಾಮಾಣಿಕವಾಗಿ ವಿಚಾರ ಮಾಡುವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...