ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜೂನ್ 26ರಂದು ವಜಾ ಮಾಡಿ ಆದೇಶ ಹೊರಡಿಸಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಈ ಸುದ್ದಿ ಓದಿದ್ದೀರಾ? ಪ್ರಾಣಿ ಸಾಗಾಟ ನಿಯಮ ಉಲ್ಲಂಘನೆ | ವರ್ತೂರು ಸಂತೋಷ್ ವಿರುದ್ಧ ಪ್ರಕರಣ ದಾಖಲು
ಹಾಸನದ ಹೊಳೆನರಸೀಪುರದ ಟೌನ್ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಪ್ರಕರಣ ಇದಾಗಿದೆ. ಜೂನ್ 26ರಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ.
