ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

Date:

ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

- Advertisement -

ಜೂನ್ 18ರಂದು ಎಸ್‌ಐಟಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ, ಪ್ರಜ್ವಲ್ ರೇವಣ್ಣ ಅವರನ್ನು ಮಂಗಳವಾರ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರು ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ)ಕ್ಕೆ ಕರೆದೊಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗೆಲ್ಲಬಹುದಾಗಿದ್ದ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಲ್ಟಿ ಹೊಡೆದದ್ದು...

ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆದ ನಾಲ್ಕು ಎಮ್ಮೆಲ್ಸಿ ಸ್ಥಾನಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಒಂದೇ ಒಂದು ಸೀಟನ್ನೂ ಪಡೆಯಲಾಗದೆ ಮುಗ್ಗರಿಸಿರುವುದು ರಾಜಕೀಯ ಪಡಸಾಲೆಯಲ್ಲಿ ನಾನಾ ನಮೂನೆಯ ವ್ಯಾಖ್ಯಾನ-ವಿಶ್ಲೇಷಣೆ ಹುಟ್ಟುಹಾಕಿದೆ....

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ವಿಚಾರಣೆ ವೇಳೆ, ನ್ಯಾಯಲಯಕ್ಕೆ ಪ್ರಜ್ವಲ್ ರೇವಣ್ಣ ಎಸ್‌ಐಟಿ ಅಧಿಕಾರಿಗಳು ನನ್ನ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ನನ್ನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ತಿಳಿಸಿದರು.

ಆಗ ನ್ಯಾಯಾಧೀಶರು ವೈದ್ಯಕೀಯ ಪರೀಕ್ಷೆಯನ್ನು ಏಕೆ ನಡೆಸಲಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳನ್ನು ಪ್ರಶ್ನಿಸಿದರು. ವಾದ–ಪ್ರತಿವಾದ ಆಲಿಸಿದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಹಾರಾಣಿ ಕಾಲೇಜು ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಕೋರ್ಟಿಗೆ ಹಾಜರುಪಡಿಸಿದ್ದ ವೇಳೆ ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಿದ್ದರು. ಈ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣಗೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ನ್ಯಾಯಾಲಯವು ಮೇ 31 ರಂದು ಪ್ರಜ್ವಲ್ ರನ್ನು ಜೂನ್ 6 ರವರೆಗೆ ಎಸ್‌ಐಟಿ ವಶಕ್ಕೆ ನೀಡಿತು ಮತ್ತು ನಂತರ ಅದನ್ನು ಜೂನ್ 10 ರವರೆಗೆ ವಿಸ್ತರಿಸಿತು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೋಮುವಾದಿ ಹೆಸರಲ್ಲಿ ಮಹಿಳೆಯರ ಮೇಲೆ ಶೋಷಣೆ: ಕಾಮ್ರೇಡ್ ದೇವಿ ಕಿಡಿ

"ಕೋಮುವಾದ ಹೆಸರಿನಲ್ಲಿ ಮಹಿಳೆಯರ ಮೇಲೆ ಶೋಷಣೆ ಮತ್ತು ಲಿಂಗ ತಾರತಮ್ಯ ನಡೆಯುತ್ತಿದ್ದು,...

ರಾಯಚೂರು | ಸಾಮರಸ್ಯ, ಸಹಬಾಳ್ವೆಯೇ ನಾಡಿನ ಸಂಸ್ಕೃತಿಯ ಜೀವಾಳ: ಸಚಿವ ಡಾ. ಅಜಯ್ ಸಿಂಗ್

ಸಾಮರಸ್ಯವೇ ನಾಡಿನ ಸಂಸ್ಕೃತಿಯ ಜೀವಾಳವಾಗಿದೆ. ಸರ್ವಧರ್ಮ ರಕ್ಷಣೆ, ಸತ್ಯಾರಾಧನೆ, ಧರ್ಮನೀತಿ ಹಾಗೂ...

ಉಡುಪಿ | ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ಬದುಕಿನೊಂದಿಗೆ ಬೆರೆತಿರುವ ಭಾಷೆಯನ್ನು ಜೀವನದುದ್ದಕ್ಕೂ ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ...

ಹಾವೇರಿ | ಕಬ್ಬು ಬೆಲೆ ನಿಗದಿಗೆ ತಜ್ಞರ ವರದಿ ಬರಬೇಕಾಗಿದೆ: ಸಚಿವ ರುದ್ರಪ್ಪ ಲಮಾಣಿ

"ಸಂಬಂಧಿಸಿದ ಸಮಸ್ಯೆ ಪರಿಹಾರಕ್ಕೆ ತಜ್ಞರ ಸಮಿತಿಯ ವರದಿ ಬರಬೇಕಾಗಿದೆ. ವರದಿ ಬಂದ...