ಲೈಂಗಿಕ ಹಗರಣ | ಜೂನ್‌ 6ಕ್ಕೆ ಪ್ರಜ್ವಲ್ ರೇವಣ್ಣ ಕಸ್ಟಡಿ ಅವಧಿ ಮುಕ್ತಾಯ: ಮತ್ತೆ ಕೋರ್ಟ್‌ಗೆ ಹಾಜರು

Date:

Advertisements

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಕಸ್ಟಡಿ ಅವಧಿ ಜೂನ್ 6ಕ್ಕೆ ಕೊನೆಯಾಗಲಿದೆ. ಎಸ್​ಐಟಿ ಅಧಿಕಾರಿಗಳು ಮತ್ತೆ ಕೋರ್ಟ್​ ಮುಂದೆ ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ ಇನ್ನಷ್ಟು ದಿನ ಕಸ್ಟಡಿಗೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡುವ ಸಾಧ್ಯತೆ ಇದೆ.

ಪ್ರಜ್ವಲ್ ವಿಚಾರಣೆಗೆ ಸರಿಯಾಗಿ ಸ್ಪಂದನೆ ನೀಡಿಲ್ಲ ಹಾಗೂ ಘಟನೆ ನಡೆದ ಸ್ಥಳಕ್ಕೆ ಆರೋಪಿ ಪ್ರಜ್ವಲ್‌ನನ್ನು ಕರೆದೊಯ್ದು ಸ್ಥಳ ಮಹಜರು ನಡೆಸಲು ಕೂಡ ಸಮಯಾವಕಾಶಕ್ಕಾಗಿ ಎಸ್‌ಐಟಿ ತಂಡ ಇನ್ನಷ್ಟು ವಿಚಾರಣೆಗೆ ಮತ್ತೆ ಕಸ್ಟಡಿಗೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡುವ ಸಾಧ್ಯತೆ ಇದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆ ಹಾಗೂ ಸಿಐಡಿ ಠಾಣೆಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆ, ಸರ್ಕಾರ ಎಸ್​ಐಟಿ ರಚನೆ ಮಾಡಿ, ತನಿಖೆಗೆ ಆದೇಶ ಮಾಡಿತ್ತು. ಇನ್ನು ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿ ಬಂದ ಬಳಿಕ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದರು. ಈತನ ವಿರುದ್ಧ ಬ್ಲೂ ಕಾರ್ನರ್ ನೋಟಿಸ್, ಬಂಧನ ವಾರಂಟ್ ಕೂಡ ಹೊರಡಿಸಲಾಗಿತ್ತು. ಕೊನೆಗೆ 35 ದಿನಗಳ ಬಳಿಕ ವಿದೇಶದಿಂದ ಆರೋಪಿ ಆಗಮಿಸುತ್ತಿದ್ದಂತೆ ಮೇ 31ರಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲೇ ಎಸ್​ಐಟಿ ಪೊಲೀಸರು ಬಂಧಿಸಿದ್ದರು. ಬಳಿಕ ಕೋರ್ಟ್​ಗೆ ಹಾಜರುಪಡಿಸಿ ಜೂನ್ 6ರವರೆಗೆ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದರು.

ನ್ಯಾಯಾಲಯದ ಅನುಮತಿ ಪಡೆದ ಎಸ್‌ಐಟಿ ಅಧಿಕಾರಿಗಳು ಆರೋಪಿ ಪ್ರಜ್ವಲ್​​ ರೇವಣ್ಣಗೆ ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ಹಲವೆಡೆ ಭಾರೀ ಮಳೆ; ಹಾಸನದಲ್ಲಿ ಸಿಡಿಲು ಬಡಿದು ಮೂವರು ಸಾವು

ಬೌರಿಂಗ್ ಆಸ್ಪತ್ರೆ ಆವರಣದಲ್ಲಿರುವ ಅಟಲ್ ಬಿಹಾರಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್​ಗೆ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಪರೀಕ್ಷೆ ನಡೆದಿದೆ. ವೀರ್ಯ ಮತ್ತು ರಕ್ತ ಮಾದರಿ ಸಂಗ್ರಹ ಮತ್ತು ಲೈಂಗಿಕ ಕ್ರಿಯೆ ನಡೆಸಲು ಸಾಮರ್ಥ್ಯ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಈ ಪರೀಕ್ಷೆಯನ್ನು ನಡೆಸಲಾಗಿದೆ. ತಪಾಸಣೆ ಮುಗಿದ ಬಳಿಕ ಸಂಜೆ ಮತ್ತೆ ಸಿಐಡಿ ಕಚೇರಿಗೆ ಕರೆ ತಂದು ಎಸ್‌ಐಟಿ ವಿಚಾರಣೆಗೆ ಒಳಪಡಿಸಿದೆ. ಇನ್ನೊಂದು ವಾರದಲ್ಲಿ ವರದಿ ಎಸ್‌ಐಟಿ ಕೈ ಸೇರಲಿದೆ ಎಂದು ಕೆಲ ಮೂಲಗಳಿಂದ ತಿಳಿದು ಬಂದಿದೆ.

ಒಂದು ಕಡೆ ಪ್ರಜ್ವಲ್ ವಿರುದ್ಧ ಸಾಲುಸಾಲು ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿದ್ದು, ಜೈಲು ಪಾಲಾಗಿದ್ದಾರೆ. ಇನ್ನೊಂದೆಡೆ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ವಿದ್ಯಾರ್ಥಿ ಕಣ್ಣಲ್ಲಿ ಗಾಂಧೀಜಿ ಬಯಸಿದ ನ್ಯಾಯಸಮ್ಮತ ತತ್ವದ ರಾಜಕೀಯ ವ್ಯವಸ್ಥೆ

ಸ್ವಾತಂತ್ರ್ಯೋತರ ಭಾರತ ಹೇಗಿರಬೇಕು ಎಂಬುದರ ಕುರಿತು ಗಾಂಧೀಜಿಯ ಕನಸು ವಿಭಿನ್ನವಾಗಿದ್ದು, ರಾಜಕೀಯವು...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X