ಮದುವೆಯಾಗುವುದಾಗಿ ಅತ್ಯಾಚಾರ, ವಂಚನೆ: ಶಿವಮೊಗ್ಗದ ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು

Date:

Advertisements

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಸಂತ್ರಸ್ತೆಯಿಂದಲೇ ನಾಲ್ಕು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಬಿಜೆಪಿ ಮಾಧ್ಯಮ ಪ್ರಮುಖ ಶರತ್ ಕಲ್ಯಾಣಿ ಎಂಬಾತನ ಎಂಬಾತನ ವಿರುದ್ಧ ಅತ್ಯಾಚಾರ ಹಾಗೂ ವಂಚನೆ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.

ಶರತ್ ಕಲ್ಯಾಣಿಯು ತನಗೆ ಮದುವೆಯಾಗಿರುವ ಮಾಹಿತಿ ಮುಚ್ಚಿಟ್ಟು ‘ನಾನಿನ್ನು ಅವಿವಾಹಿತ. ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗಿ ನಿನಗೆ ಬಾಳು ಕೊಡುತ್ತೇನೆ ಎಂದು ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ’ ಎಂದು ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿರುವ 43 ವರ್ಷದ ವಿಚ್ಛೇದಿತ ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

ಏಳೆಂಟು ತಿಂಗಳಿಂದ ಮಹಿಳೆ ಜೊತೆ ನಿರಂತರ ಸಂಪರ್ಕದಲ್ಲಿದ್ದ ಶರತ್, ಸಂತ್ರಸ್ತ ಮಹಿಳೆಯು ಮದುವೆಯಾಗು ಎಂದು ಒತ್ತಾಯಿಸಿದರೆನ್ನಲಾಗಿದೆ. ಈ ವೇಳೆ ಶರತ್, ‘ನನಗೆ ಹಣಕಾಸಿನ ಸಮಸ್ಯೆ ಇದೆ. ಅದು ಬಗೆಹರಿದ ನಂತರ ಮದುವೆಯಾಗುತ್ತೇನೆ’ ಎಂದು ಭರವಸೆ ನೀಡಿದ್ದನು. ಅಲ್ಲದೆ, ಈಗ ನನಗೆ ಸಹಾಯ ಮಾಡು ಎಂದು ಕೇಳಿದ್ದ. ಈ ವೇಳೆ ಮಹಿಳೆಯು ಹಲವು ಬಾರಿ ಹಣ ನೀಡಿದ್ದು, ಒಟ್ಟು ನಾಲ್ಕು ಲಕ್ಷ ಹಣ ನಾಲ್ಕು ಲಕ್ಷ ಹಣವನ್ನು ಶರತ್‌ಗೆ ನೀಡಿದ್ದರು. ನಂತರ ಮಹಿಳೆ ಮದುವೆಗೆ ಒತ್ತಾಯಿಸಿದಾಗ ಶರತ್ ಆಕೆಯ ಮನೆ ಕಡೆ ಹೋಗುವುದನ್ನು ನಿಲ್ಲಿಸಿದ್ದಲ್ಲದೆ, ಫೋನ್ ಸಂಪರ್ಕವನ್ನೂ ಕಡಿದುಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಯನಾಡಿಗಾದದ್ದು ನಮ್ಮಲ್ಲೂ ಆಗಬಹುದಲ್ಲವೇ?

ಈ ಬಗ್ಗೆ ಕೇಳಲು ಮಹಿಳೆ ಗುಂಡಪ್ಪ ಶೆಡ್ಡಿನಲ್ಲಿರುವ ಶರತ್ ಕಲ್ಯಾಣಿಯ ಮನೆಗೆ ಹೋದಾಗ ಆತನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಇನ್ನೊಮ್ಮೆ ನಮ್ಮ ಮನೆ ಬಳಿ ಬಂದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿ ಹಣ ಪಡೆದು ಶರತ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತೆ ಮಹಿಳೆಯು ಜುಲೈ 26ರಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ದೂರು ಸ್ವೀಕರಿಸಿರುವ ಮಹಿಳಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಶಿವಮೊಗ್ಗ | ಉನ್ನತ ಶಿಕ್ಷಣ ಪಡೆಯಲು ಇಂಗ್ಲಿಷ್ ಕಲಿಕೆ ಸಹಕಾರಿ : ಬಿಇಒ ರಮೇಶ್

ಶಿವಮೊಗ್ಗ, ಹೊಳೆಹೊನ್ನುರು, ಪಟ್ಟಣ ಸಮೀಪದ ಕೂಡ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಭದ್ರಾಪುರ...

ಶಿವಮೊಗ್ಗ | ನಾಳೆ ಕವಿ ಮೂಡ್ನಾಕೂಡು ಚಿನ್ನಸ್ವಾಮಿರಿಂದ, ದಲಿತ ಸಾಂಸ್ಕೃತಿಕ ಚಿಂತನೆ ಕುರಿತು ವಿಚಾರ ಮಂಥನ

ಶಿವಮೊಗ್ಗ, ಕುವೆಂಪು ವಿ.ವಿ. ಪದವಿ ಕಾಲೇಜು ಕನ್ನಡ ಅಧ್ಯಾಪಕರ ವೇದಿಕೆ, ಡಿವಿಎಸ್...

ಶಿಕಾರಿಪುರ | ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ 1 ವರ್ಷ 8 ತಿಂಗಳ ಪುಟಾಣಿ

ಶಿಕಾರಿಪುರ, ತಾಲೂಕಿನ ಕಾಳೇನಹಳ್ಳಿ ಗ್ರಾಮದ ಒಂದು ವರ್ಷ ಎಂಟು ತಿಂಗಳ ಪುಟಾಣಿ...

Download Eedina App Android / iOS

X