ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಲ್ಲಿ ಮುಂದುವರಿಯುವ ನೈತಿಕತೆ ಉಳಿಸಿಕೊಂಡಿಲ್ಲ: ಎ.ನಾರಾಯಣಸ್ವಾಮಿ

Date:

Advertisements

ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಅನಾವರಣ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣಗಳಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕೇಂದ್ರದ ಮಾಜಿ ಸಚಿವ ಎ ನಾರಾಯಣಸ್ವಾಮಿ ಆಗ್ರಹಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದ ಮುಖ್ಯಮಂತ್ರಿ ಮತ್ತು ಸರಕಾರವು ದಲಿತವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಅದನ್ನು ನಾವು ಖಂಡಿಸುತ್ತೇವೆ” ಎಂದರು.

“ಸಿದ್ದರಾಮಯ್ಯರಿಂದ ಸಮಾಜವಾದದ ಚಿಂತನೆಗಳು ಕಳಚಿ ಬಿದ್ದಿವೆ. ಸಮಾಜವಾದದ ಚಿಂತನೆ ಇದ್ದರೆ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಿರಲಿಲ್ಲ” ಎಂದು ಕಿಡಿಕಾರಿದರು.

Advertisements

“ರಾಜ್ಯದಲ್ಲಿ ಪರಿಶಿಷ್ಟ ಪಂಗಡದ 17 ಶಾಸಕರಿದ್ದಾರೆ. ಈ ಪೈಕಿ 16 ಜನರು ಕಾಂಗ್ರೆಸ್ಸಿನವರು ಎಂದು ಅವರು, 3 ಜನ ಲೋಕಸಭಾ ಸದಸ್ಯರು ಗೆದ್ದಿದ್ದಾರೆ. ವಾಲ್ಮೀಕಿ ನಿಗಮಕ್ಕೆ ಮಾರ್ಚ್ 21ರಂದು ರಾಜ್ಯ ಸರಕಾರವು 187 ಕೋಟಿ ಹಣವನ್ನು ವರ್ಗಾವಣೆ ಮಾಡಿತ್ತು. ಮೇ 26ರವರೆಗೆ, ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಳ್ಳುವವರೆಗೆ ರಾಜ್ಯದ ಮುಖ್ಯಮಂತ್ರಿಗಳ ಗಮನಕ್ಕೆ ಹಗರಣ ಬಂದಿಲ್ಲವಾದರೆ ಆ ಎರಡು ತಿಂಗಳು ಕರ್ನಾಟಕದಲ್ಲಿ ಸರಕಾರ ಇತ್ತೇ” ಎಂದು ಪ್ರಶ್ನಿಸಿದರು.

Advertisements
Bose Military School

“ಅರಣ್ಯ ಪ್ರದೇಶದಲ್ಲಿ ವಾಸವಿರುವ ಜನಾಂಗದವರಿಗೂ ಈ ವಿಷಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಸಂದೇಹ ಉಂಟಾಗಿದೆ. ಹಗರಣದ ಚರ್ಚೆ ನಡೆದಾಗ ಸಚಿವರಿಗೂ ಹಗರಣಕ್ಕೂ ಸಂಬಂಧ ಇಲ್ಲ ಎಂದೇ ಮುಖ್ಯಮಂತ್ರಿಯವರು ಹೇಳಿದ್ದರು. ಎಸ್‍ಐಟಿ ರಚಿಸಿದ ಬಳಿಕ ಕೂಡ ಸಚಿವರು ನಿರಪರಾಧಿ ಎಂದೇ ಹೇಳಿದ್ದರು” ಎಂದು ಗಮನ ಸೆಳೆದರು.

“ವಿದ್ಯಾಸಿರಿ ನಿಲ್ಲಿಸಿದ್ದಾರೆ. ಶೂ ಕೊಡಲು ಯೋಗ್ಯತೆ ಇಲ್ಲ. ಮಕ್ಕಳಿಗೆ ಪುಸ್ತಕ ಕೊಡುತ್ತಿಲ್ಲ; ಹಾಸ್ಟೆಲ್‍ಗಳಲ್ಲಿ ಊಟವನ್ನೂ ನೀಡುತ್ತಿಲ್ಲ. ಹಲವು ಮಕ್ಕಳು ವಿದ್ಯಾಭ್ಯಾಸ ನಿಲ್ಲಿಸಿದ್ದಾರೆ” ಎಂದು ಟೀಕಿಸಿದರು.

“ಗ್ಯಾರಂಟಿಗಳ ಮೂಲಕ ನಿಗಮಗಳ ಕತ್ತನ್ನೇ ಹಿಸುಕಿದ್ದಾರೆ. ಜನಸಂದರ್ಶನದ ವೇಳೆ ಯುವಕರು ಕೊಟ್ಟ ಅರ್ಜಿಗಳನ್ನು ತಿಪ್ಪೆಗೆ ಎಸೆಯಲಾಗಿದೆ. ಇದು ಸಾಮಾಜಿಕ ಕಳಕಳಿಯನ್ನು ಅರ್ಥ ಮಾಡುವಂತಿದೆ” ಎಂದು ವ್ಯಂಗ್ಯವಾಡಿದರು.

ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, “ಎಸ್‍ಇಪಿ ಟಿಎಸ್‍ಪಿ ದಲಿತರ ಹಣ ದುರುಪಯೋಗದ ಬಗ್ಗೆ ನಾವು ಹಲವು ಬಾರಿ ಗಮನ ಸೆಳೆದಿದ್ದೇವೆ. ಕಳೆದ ಆರ್ಥಿಕ ವರ್ಷದಲ್ಲಿ ದಲಿತ ಸಮುದಾಯದ ಶ್ರೇಯೋಭಿವೃದ್ಧಿಗೆ ಮೀಸಲಿಟ್ಟಿದ್ದ 11,114 ಕೋಟಿ ರೂ.ಗಳನ್ನು ಈ ಸರಕಾರ ಬೇರೆ ಬೇರೆ ಕಾರ್ಯಗಳಿಗೆ ದುರುಪಯೋಗ ಪಡಿಸಿಕೊಂಡಿತ್ತು” ಎಂದು ಆಕ್ಷೇಪಿಸಿದರು.

“7ಡಿ ರದ್ದು ಮಾಡುವುದಾಗಿ ಹೇಳಿದ್ದರು. ಅದರಂತೆ 7 ಡಿ ರದ್ದು ಮಾಡಿದ್ದರು. ಆದರೂ, ದಲಿತರಿಗಾಗಿ ಮೀಸಲಿಟ್ಟ 14282 ಕೋಟಿ ರೂಗಳನ್ನು ಬೇರೆಡೆಗೆ ವರ್ಗಾಯಿಸಿದ್ದಾರೆ. 7 ಡಿ ರದ್ದು ಮಾಡಿದ್ದು, 7 ಸಿ ನಲ್ಲಿ ಗ್ಯಾರಂಟಿಗೆ ಹಣ ಕೊಡುತ್ತಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದರಲ್ಲದೆ, ಲೂಟಿ ಮಾಡುವುದಾದರೆ ಹಿಂದಿನ ಬಾಗಿಲಾದರೇನು, ಮುಂದಿನ ಬಾಗಿಲಾದರೆ ಏನು” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ, ದಾವಣಗೆರೆ | ಭದ್ರಾ ಬಲದಂಡೆಯಿಂದ ಕುಡಿಯುವ ನೀರು ಹರಿಸಲು ಐಐಎಸ್‌ಸಿ ವರದಿ, ನಾಲೆ ಜಲಾಶಯಕ್ಕೆ ತೊಂದರೆ ಇಲ್ಲ

ಭದ್ರಾ ಜಲಾಶಯದ ಬಲದಂಡೆ ನಾಲೆಯಿಂದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಹಾಗೂ ಚಿಕ್ಕಮಗಳೂರು...

ನವದೆಹಲಿಯಲ್ಲಿ ದೇವನಹಳ್ಳಿ ರೈತ ಹೋರಾಟದ ಸದ್ದು: ಜೆಪಿಸಿ ಸಭೆಯಿಂದ ಬಿಜೆಪಿ ಸದಸ್ಯರ ಪಲಾಯನ

ದೇವನಹಳ್ಳಿ ರೈತರ ಭೂ ಸ್ವಾಧೀನ ಕುರಿತ ಭೂ ಒತ್ತುವರಿ ಪರಿಶೀಲನೆಯ ಜಂಟಿ...

ಹೆಚ್ಚುತ್ತಿರುವ ಹೃದಯಾಘಾತ | ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ

ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ...

ಪತ್ರಿಕಾ ದಿನಾಚರಣೆ | ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ: ಸಿಎಂ ಸಿದ್ದರಾಮಯ್ಯ

ಇಂದಿನ ಬಹುತೇಕ ಮಾಧ್ಯಮಗಳು ಸುಳ್ಳು ಸುದ್ದಿಗೆ ಹೆಚ್ಚು ಒತ್ತು ನೀಡಿವೆ. ಇದರಿಂದ...

Download Eedina App Android / iOS

X