ಸಾಫ್ಟ್‌ವೇ‌ರ್ ಉನ್ನತೀಕರಣ | ಮಾರ್ಚ್ 10 ರಿಂದ 19 ರವರೆಗೆ ಆನ್‌ಲೈನ್ ಸೇವೆ ಅಲಭ್ಯ

Date:

ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಸಲುವಾಗಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲ ಎಸ್ಕಾಂಗಳ ಆನ್‌ಲೈನ್ ಸೇವೆಗಳು ನಗರ ಪುದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

“ರಾಜ್ಯದ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್‌ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ. ಆನ್‌ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

“ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿದೆ. ಹಾಗಾಗಿ, ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು. ಆದರೆ, ಸಾಫ್ಟ್‌ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲ. ಈ ಸಂದರ್ಭದಲ್ಲಿ ಮಾಪಕ ಓದುಗರು ಗ್ರಾಹಕರಿಗೆ ಬಿಲ್ ಗಳನ್ನು ನೀಡಲಿದ್ದಾರೆ. ಆದರೆ, ಈ ಬಿಲ್ ಗಳನ್ನು ಮಾರ್ಚ್ 20 ರ ನಂತರವೇ ತಂತ್ರಾಂಶದಲ್ಲಿ ಅಪಲೋಡ್ ಮಾಡಲು ಸಾಧ್ಯವಾಗಲಿದೆ” ಎಂದು ಪ್ರಕಟಣೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬಿಡದಿ ಫಾರ್ಮ್‌ಹೌಸ್‌ನಲ್ಲಿ 25 ತಲೆಬುರುಡೆ, ಮೂಳೆಗಳು ಪತ್ತೆ

ಯಾವ ನಗರಗಳಲ್ಲಿ ಆನ್‌ಲೈನ್‌ ಸೇವೆ ಇರುವುದಿಲ್ಲ

ಬೆಸ್ಕಾಂ

ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.

ಸೆಸ್ಕ್‌

ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.

ಮೆಸ್ಕಾಂ

ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಜೆಸ್ಕಾಂ

ಗುಲ್ಬರ್ಗ, ಮಾನವಿ, ಸಿಂಧನೂರು, ಬೀದರ್‌, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ಮಾಬಾದ್ ಹಾಗೂ ಹೊಸಪೇಟೆ.

ಹೆಸ್ಕಾಂ

ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ಈ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಪರಿಣಿತಿಹೊಂದಿದ ಮಾಹಿತಿ ತಂತ್ರಜ್ಞರ(IT) ತಂಡ 24/7 ಕಾರ್ಯನಿರ್ವಹಿಸಲಿದೆ. ಗ್ರಾಹಕರು ಸೇವಾ ಸ್ಥಗಿತ ಕಾಲದಲ್ಲಿ ಸಹಕರಿಸಬೇಕು ಎಂದು ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...