ಮೇ 31ರವರೆಗೆ ಬೆಂಗಳೂರಿಗೆ ಬರುವ ಕೆಲವು ರೈಲುಗಳು ರದ್ದು; ವಿವರ ಇಲ್ಲಿದೆ!

Date:

ಬೈಯಪ್ಪನಹಳ್ಳಿ ವೆಸ್ಟ್ ಕ್ಯಾಬಿನ್ ಮತ್ತು ಬೈಯಪ್ಪನಹಳ್ಳಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ ನಡುವೆ ವಾರ್ಷಿಕ ಕೇಬಲ್ ಮೇಗರಿಂಗ್ ನಿರ್ವಹಣೆ ಕಾಮಗಾರಿ ನಡೆಯುತ್ತಿರುವುದರಿಂದ ಮೇ 29ರಂದು ಮೂರು ಮೆಮು ರೈಲುಗಳು ರದ್ದುಗೊಳ್ಳಲಿದ್ದು, ಎಂಟು ಮೆಮು ರೈಲುಗಳು ಭಾಗಶಃ ರದ್ದಾಗಲಿವೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

- Advertisement -

ಜತೆಗೆ, ಭಟ್ಕಳ ನಿಲ್ದಾಣದಲ್ಲಿ ಮೇ 29 ರಿಂದ 31 ರವರೆಗೆ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳುವುದರಿಂದ ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಕೊಂಕಣ ರೈಲ್ವೆಯು ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

3 ವಿಶೇಷ ಮೆಮು ರೈಲುಗಳು ರದ್ದು

ರೈಲು ಸಂಖ್ಯೆ 01766 ವೈಟ್‌ಫೀಲ್ಡ್‌ – ಕೆಎಸ್ಆರ್ ಬೆಂಗಳೂರು, 06561 ಕೆಎಸ್ಆರ್ ಬೆಂಗಳೂರು-ವೈಟ್‌ಫೀಲ್ಡ್ ಮತ್ತು 01773 ಬಂಗಾರಪೇಟ್-ಕೆಎಸ್ಆರ್ ಬೆಂಗಳೂರು ವಿಶೇಷ ಮೆಮು ರೈಲುಗಳು ಮೇ 29 ರಂದು ತಾತ್ಕಾಲಿಕವಾಗಿ ರದ್ದಾಗಲಿದೆ.

8 ವಿಶೇಷ ಮೆಮು ರೈಲುಗಳು ಭಾಗಶಃ ರದ್ದು

  • (ರೈಲು ಸಂಖ್ಯೆ 06389) ಕೆಎಸ್ಆರ್ ಬೆಂಗಳೂರು-ಬಂಗಾರಪೇಟೆ ವಿಶೇಷ ಮೆಮು ರೈಲು ಕೆಎಸ್ಆರ್ ಬೆಂಗಳೂರು-ವೈಟ್ ಫೀಲ್ಡ್ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
  • (ರೈಲು ಸಂಖ್ಯೆ 06535/06536) ಚಿಕ್ಕಬಳ್ಳಾಪುರ- ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ ವಿಶೇಷ ಮೆಮು ರೈಲು ಯಲಹಂಕ-ಬೆಂಗಳೂರು ಕಂಟೋನ್ಮೆಂಟ್ ನಡುವೆ ಭಾಗಶಃ ರದ್ದಾಗಲಿದೆ.
  • (ರೈಲು ಸಂಖ್ಯೆ 01776/01775) ಮಾರಿಕುಪ್ಪಂ-ಕೆಎಸ್ಆರ್ ಬೆಂಗಳೂರು-ಮಾರಿಕುಪ್ಪಂ ವಿಶೇಷ ಮೆಮು ರೈಲು ಕೃಷ್ಣರಾಜಪುರಂ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
  • (ರೈಲು ಸಂಖ್ಯೆ 01793/01794) ಮಾರಿಕುಪ್ಪಂ-ಕೃಷ್ಣರಾಜಪುರಂ-ಮಾರಿಕುಪ್ಪಂ ವಿಶೇಷ ಮೆಮು ರೈಲು ಬಂಗಾರಪೇಟೆ-ಕೃಷ್ಣರಾಜಪುರಂ ನಡುವೆ ಭಾಗಶಃ ರದ್ದಾಗಲಿದೆ.
  • (ರೈಲು ಸಂಖ್ಯೆ 06529) ಕೆಎಸ್ಆರ್ ಬೆಂಗಳೂರು-ಕುಪ್ಪಂ ವಿಶೇಷ ಮೆಮು ರೈಲು ಕೆಎಸ್ ಆರ್ ಬೆಂಗಳೂರು-ಕೃಷ್ಣರಾಜಪುರಂ ನಡುವೆ ಬಾಗಶಃ ರದ್ದಾಗಲಿದೆ.

ಈ ಸುದ್ದಿ ಓದಿದ್ದೀರಾ? ಪ್ರಭಾಸ್‌ ಅಭಿನಯದ ‘ಕಲ್ಕಿ 2898 ಎಡಿ’ ಏಕಕಾಲದಲ್ಲೇ ಮೂರು ‘ಒಟಿಟಿ’ಗಳಿಗೆ ಮಾರಾಟ

ರೈಲುಗಳ ಭಾಗಶಃ ರದ್ದು

  • ಮೇ 29 ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16585 ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಮುರುಡೇಶ್ವರ ಎಕ್ಸ್ ಪ್ರೆಸ್ ರೈಲು ಶಿರೂರು ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಶಿರೂರು- ಮುರುಡೇಶ್ವರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
  • ಮೇ 30ರಂದು ರೈಲು ಸಂಖ್ಯೆ 16586 ಮುರುಡೇಶ್ವರ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಶಿರೂರು ನಿಲ್ದಾಣದಿಂದ ಮಧ್ಯಾಹ್ನ 2.35 ಗಂಟೆಗೆ ಪ್ರಾರಂಭವಾಗಲಿದ್ದು. ಮುರುಡೇಶ್ವರ ಮತ್ತು ಶಿರೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...