ಮಗನ ಕೊಂದ ಸಿಇಒ | ಮಾನಸಿಕ ಆರೋಗ್ಯ ತಪಾಸಣೆಗೆ ಗೋವಾ ಕೋರ್ಟ್ ಅನುಮತಿ

Date:

ಗೋವಾದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ತಮ್ಮ ನಾಲ್ಕು ವರ್ಷದ ಮಗನನ್ನು ಕೊಂದ ಬೆಂಗಳೂರಿನ ಕಂಪೆನಿಯೊಂದರ ಮಹಿಳಾ ಸಿಇಒ ಸುಚನಾ ಸೇಠ್ ಅವರ ಮಾನಸಿಕ ಆರೋಗ್ಯ ಸ್ಥಿತಿಯನ್ನು ಪರೀಕ್ಷಿಸಲು ಗೋವಾ ನ್ಯಾಯಾಲಯವು ಅನುಮತಿ ನೀಡಿದೆ.

- Advertisement -

ಸುಚನಾ ಸೇಠ್ ಅವರ ತಂದೆ ಮಾನಸಿಕ ಆರೋಗ್ಯ ಕಾಯಿದೆಯಡಿ ವೈದ್ಯರ ಮಂಡಳಿಯಿಂದ ಆಕೆಯ ಮಾನಸಿಕ ಸ್ಥಿತಿಯನ್ನು ಪರೀಕ್ಷಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಿಚಾರಣೆ ಸಮಯದಲ್ಲಿ ಆಕೆಯ ಮಾನಸಿಕ ಆರೋಗ್ಯದ ಸ್ಥಿತಿಯನ್ನು ಮೌಲ್ಯಮಾಪನ ಮಾಡುವಾಗ ಮಾನಸಿಕ ಅಸ್ವಸ್ಥತೆಯ ಲಕ್ಷಣಗಳು ಕಂಡಿಲ್ಲ ಎಂದು ಪೊಲೀಸರು ತಿಳಿಸಿ, ಈ ಮನವಿಯನ್ನು ತಿರಸ್ಕಾರ ಮಾಡಿ ವಿರೋಧಿಸಿದ್ದರು.

ಸೋಮವಾರ ನ್ಯಾಯಾಲಯವೂ ಅರ್ಜಿಯನ್ನು ಅನುಮತಿಸಿದೆ. ಸುಚನಾ ಸೇಠ್ ಅವರ ಮಾನಸಿಕ ಸ್ಥಿತಿಯ ಹೊಸ ಪರೀಕ್ಷೆಗಾಗಿ ಪೊಲೀಸರು ವೈದ್ಯಕೀಯ ಮಂಡಳಿಯ ಮುಂದೆ ಹಾಜರುಪಡಿಸಬೇಕಾಗುತ್ತದೆ ಎಂದು ಸುಚನಾ ಸೇಠ್ ತಂದೆ ಪರ ವಕೀಲರು ತಿಳಿಸಿದ್ದಾರೆ.

ಜನವರಿಯಲ್ಲಿ ಆಕೆ ಬಂಧನದಲ್ಲಿದ್ದ ಅವಧಿಯಲ್ಲಿ ಆಕೆಯ ಮಾನಸಿಕ ಆರೋಗ್ಯದ ಮೌಲ್ಯಮಾಪನ ಸೇರಿದಂತೆ ನಿಯಮಿತ ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ. ಈ ವೇಳೆ, ಅವರು ತಮ್ಮ ಮೌಲ್ಯಮಾಪನಗಳಲ್ಲಿ ಸ್ಪಷ್ಟ ಮತ್ತು ತರ್ಕಬದ್ಧ ಉತ್ತರಗಳನ್ನು ನೀಡಿದ್ದಾರೆ. ಯಾವುದೇ ರೀತಿಯ ಸಕ್ರಿಯ ಸಾವಿನ ಆಶಯ ಅಥವಾ ಆತ್ಮಹತ್ಯೆ ಪ್ರವೃತ್ತಿಯನ್ನು ವರದಿ ಮಾಡಿಲ್ಲ. ಆಕೆಯ ಪ್ರತಿಕ್ರಿಯೆಗಳಲ್ಲಿ ಯಾವುದೇ ವಿಕೃತ ಮನಸ್ಥಿತಿಯ ಲಕ್ಷಣಗಳು ಕಂಡುಬಂದಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಸಾಲು ಸಾಲು ರಜೆ | ಕೆಎಸ್‌ಆರ್‌ಟಿಸಿಯಿಂದ 1,500 ವಿಶೇಷ ಬಸ್‌ ಸಂಚಾರ

ಏನಿದು ಘಟನೆ?

ಗೋವಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕ್ಯಾಂಡೋಲಿಮ್ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಸುಚನಾ ಸೇಠ್ ತಮ್ಮ ಮಗನನ್ನು ಕೊಂದ ಆರೋಪ ಹೊತ್ತಿದ್ದಾರೆ.

ಕೊಲ್ಕತ್ತಾ ಮೂಲದ ಸುಚನಾ ಸೇಠ್ 2008-09ರಲ್ಲಿ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಇಲ್ಲಿ ಸ್ಟಾರ್ಟ್​​ಅಪ್​ ಕಂಪನಿಯೊಂದು ಪ್ರಾರಂಭಿಸಿದ್ದರು. ಕಂಪನಿಯ ಸಿಇಒ ಆಗಿರುವ ಸುಚನಾ ಅವರು ಇಲ್ಲಿಯೇ ತಮಿಳುನಾಡು ಮೂಲದ ಟೆಕ್ಕಿ ವೆಂಕಟರಮಣ ಜೊತೆ ವಿವಾಹವಾಗಿದ್ದರು. ನಂತರ ದಂಪತಿ ನಡುವೆ ಮನಸ್ತಾಪವಾಗಿದೆ. ಬಳಿಕ, ಸುಚನಾ 2020ರಲ್ಲಿ ಪತಿಯಿಂದ ದೂರವಾಗಿ, ವಿಚ್ಛೇದನ ಪಡೆದಿದ್ದರು.

ಜನವರಿ 8 ರಂದು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಿಂದ ತನ್ನ ಮಗನ ದೇಹವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದಾಗ ಅವರನ್ನು ಬಂಧಿಸಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...