ಪರಿಷತ್ ಉಪಚುನಾವಣೆ | ಅರ್ಹ ಶಿಕ್ಷಕ ಮತದಾರರಿಗೆ ಫೆ.16 ರಂದು ವಿಶೇಷ ಸಾಂದರ್ಭಿಕ ರಜೆ

Date:

ಕರ್ನಾಟಕ ವಿಧಾನ ಪರಿಷತ್​ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಫೆಬ್ರವರಿ 16ರಂದು ನಡೆಯಲಿದೆ. ಚುನಾವಣೆಯಲ್ಲಿ ಮತ ಚಲಾಯಿಸುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

- Advertisement -

ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಲ್ಲ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಸಂಬಂಧ ಮಲ್ಲೇಶ್ವರಂನ ಐಪಿಪಿ ಸಭಾಂಗಣದಲ್ಲಿ ಅಂತಿಮ ಹಂತದ ಕ್ರಮಗಳ ಕುರಿತು ಸಭೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕರ್ನಾಟಕ ವಿಧಾನಪರಿಷತ್​ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ಮತದಾನದ ದಿನ (ಫೆ.16) ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಇರಲಿದೆ. ಕ್ಷೇತ್ರ ವ್ಯಾಪ್ತಿಯ ಅರ್ಹ ಶಿಕ್ಷಕ ಮತದಾರರಿಗೆ ಅಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ಹಾಗೂ ರಾಮನಗರ ಜಿಲ್ಲೆಯಲ್ಲಿ ಫೆ.16 ರ ಶುಕ್ರವಾರದಂದು ಉಪ ಚುನಾವಣೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯತ್ತಿರುವ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತದ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು, ಮತದಾನ ಮಾಡಲು ಅನುಕೂಲವಾಗುವಂತೆ ಫೆ.16 ರ ಶುಕ್ರವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಶಿಕ್ಷಕ‌ ಮತದಾರರು ಉಪ ಚುನಾವಣೆಯ ಮತದಾನದಲ್ಲಿ ಭಾಗವಹಿಸಲು ವಿಶೇಷ ಸಾಂದರ್ಭಿಕ ರಜೆಯನ್ನು ನಿಯಮಾನುಸಾರ ಮಂಜೂರು ಮಾಡುವಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಂಬಂಧಪಟ್ಟವರು ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು, ಮತದಾನ ಮಾಡಲು ಅನುಕೂಲವಾಗುವಂತೆ ರಜೆಗೆ ಅನುಮತಿ ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮನವಿ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಫ್ರಾಂಚೈಸಿ ನೀಡುವುದಾಗಿ ವಂಚಸಿದ ಇಡ್ಲಿ ಗುರು ಹೋಟೆಲ್ ಮಾಲೀಕ; ಬಂಧನ

ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 14,432 ಮತದಾರಾರು ಇದ್ದಾರೆ. ಫೆಬ್ರವರಿ 16ರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಒಟ್ಟು 45 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಮತಗಟ್ಟೆಗಳ ಬಳಿ 144 ಸೆಕ್ಷನ್ ಇರಲಿದೆ. ಇನ್ನು ಫೆಬ್ರವರಿ 20 ರಂದು ಬೆಂಗಳೂರಿನ ನೃಪತುಂಗ ರಸ್ತೆಯ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತದಾನದ ಮೇಲ್ವಿಚಾರಣೆಗೆ ಎಫ್‌ಎಸ್‌ಟಿ, ಎಸ್‌ಎಸ್‌ಟಿ ಟೀಂ ರಚನೆ ಮಾಡಲಾಗಿದೆ.

ಮತಗಟ್ಟೆಗಳ ಬಳಿ 144 ಸೆಕ್ಷನ್ ಜಾರಿಯಿರಲಿದ್ದು, ಮತಗಟ್ಟೆಯ 100 ಮೀಟರ್ ಅಂತರದಲ್ಲಿ 5 ಜನಕ್ಕಿಂತ ಹೆಚ್ಚುಮಂದಿ ಸೇರುವಂತಿಲ್ಲ. ಜೊತೆಗೆ ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಪ್ರಚಾರ ಮಾಡುವಂತಿಲ್ಲ.

43 ಮತಗಟ್ಟೆಗಳಲ್ಲಿ ಮತದಾನ

ಬೆಂಗಳೂರು ಶಿಕ್ಷಕರ ಕ್ಷೇತ್ರದ 43 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಹಾಗೂ ಮತ ಎಣಿಕೆ ಕೇಂದ್ರವು ಸರ್ಕಾರಿ ಕಲಾ ಕಾಲೇಜು, ನೃಪತುಂಗ ರಸ್ತೆ, ಅಂಬೇಡ್ಕರ್ ವೀಧಿ, ಕೆ.ಆರ್ ವೃತ್ತ, ಸಂಪಂಗಿರಾಮನಗರದಲ್ಲಿ ಸ್ಥಾಪಿಸಲಿದ್ದು, 20ನೇ ಫೆಬ್ರವರಿ 2024ರಂದು ಮತ ಎಣಿಕೆ ನಡೆಯಲಿದೆ.

ಮತದಾನದ ದಿನ ಫೆ.16 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಫೆ.20 ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಮಾತ್ರ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...