ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 22ರಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬೆಂಗಳೂರು ಸೇರಿದಂತೆ 11 ಪ್ರದೇಶಗಳಲ್ಲಿ ದಾಳಿ ನಡೆಸಿದ್ದರು. ಈ ವೇಳೆ, ಬೆಂಗಳೂರು ವೈದ್ಯ, ಹುಬ್ಬಳ್ಳಿಯ ಸಹೋದರರಿಬ್ಬರು ಸೇರಿದಂತೆ ಒಟ್ಟು 11 ಮಂದಿಯನ್ನು ವಶಕ್ಕೆ ಪಡೆದಿದೆ.
ಎನ್‌ಐಎ ತಂಡ ಬೆಂಗಳೂರು ಮತ್ತು ಹುಬ್ಬಳ್ಳಿಯ ನಾಲ್ಕು ಕಡೆಗಳಲ್ಲಿ ಶೋಧ ನಡೆಸಿವೆ. ಅಲ್ಲದೆ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳ 11 ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿದ್ದು, ರಾಜ್ಯದ ಮೂವರ ಸಹಿತ ಒಟ್ಟು 11 ಮಂದಿಯನ್ನು ವಶಕ್ಕೆ ಪಡೆದುಕೊಂಡಿದೆ.
ಬೆಂಗಳೂರಿನಲ್ಲಿ ವೈದ್ಯ ಅಹಮದ್, ಹುಬ್ಬಳ್ಳಿಯಲ್ಲಿ ಶೋಯಿಬ್ ಮಿರ್ಜಾ, ಆತನ ಸಹೋದರ ಅಜೀಬ್ ಅಹಮದ್, ಆಂಧ್ರಪ್ರದೇಶದ ಅನಂತಪುರ ರಾಮದುರ್ಗದಲ್ಲಿ ಬೆಂಗಳೂರು ಮೂಲದ ಟೆಕ್ಕಿ ಸೋಹೆಲ್ ಬಂಧಿತರು. ಪ್ರಕರಣ ಸಂಬಂಧ ಈಗಾಗಲೇ ಬಂಧನವಾಗಿದ್ದ ಆರೋಪಿ ಮುಸಾವೀರ್ ಹುಸೇನ್ ಶಾಜೀದ್, ಅಬ್ದುಲ್ ಮಥೀನ್ ತಾಹಾಗೆ ಈ ಐವರು ಹಣಕಾಸಿನ ನೆರವು, ಕೃತ್ಯಕ್ಕೆ ಸಹಾಯ ಮಾಡಿದ ಆರೋಪದಲ್ಲಿ ಬಂಧನ ಮಾಡಲಾಗಿದೆ.
ಮಂಗಳವಾರ ಮುಂಜಾನೆ 7 ಗಂಟೆ ಸುಮಾರಿಗೆ ಬೆಂಗಳೂರಿನ ಜೆ.ಪಿ. ನಗರ ಮತ್ತು ಹೆಗಡೆನಗರದ 2 ಕಡೆ ಹಾಗೂ ಹುಬ್ಬಳ್ಳಿಯ ಕಸಬಾಪೇಟೆ ಠಾಣೆ ವ್ಯಾಪ್ತಿಯ 2 ಕಡೆ ಇಬ್ಬರ ಮನೆಗಳ ಮೇಲೆ ಮಧ್ಯಾಹ್ನದವರೆಗೆ ದಾಳಿ ನಡೆಸಿ ತಪಾಸಣೆ ನಡೆಸಲಾಗಿದೆ.
ಡಾ| ಸಬೀಲ್ ಅಹ್ಮದ್ ಅಲಿಯಾಸ್ ಮೋಟು ಡಾಕ್ಟರ್ ಮತ್ತು ಹುಬ್ಬಳ್ಳಿಯ ಗೌಸಿಯಾ ಟೌನ್ ನಿವಾಸಿ, ಸಾಫ್ಟ್‌ವೇರ್ ಎಂಜಿನಿಯರ್ ಶೋಯೆಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ಸದ್ಯ ಎನ್ಐಎ ವಶದಲ್ಲಿದ್ದಾರೆ. ಇವರಿಬ್ಬರೂ ವಿದೇಶಿ ಹ್ಯಾಂಡ್ಲರ್‌ಗಳ ಸೂಚನೆಯಂತೆ ರಾಮೇಶ್ವರಂ ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ತೀರ್ಥಹಳ್ಳಿಯ ಅಬ್ದುಲ್ ಮತೀನ್ ತಾಹಾ, ಮುಸಾವೀರ್ ಹುಸೇನ್‌ಗೆ ಆರ್ಥಿಕ ಮತ್ತಿತರ ನೆರವು ನೀಡಿದ್ದರು ಎಂಬ ಮಾಹಿತಿ ಎನ್ಐಎ ಅಧಿಕಾರಿಗಳಿಗೆ ದೊರೆತಿದೆ. ಶೋಯೆಬ್ ಪತ್ನಿ ನಿವಾಸ ಬೆಳಗಾವಿಯಲ್ಲೂ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ.
ಅಲ್ಲದೆ ಈ ಹಿಂದೆ ಇದೇ ಆರೋಪಿಗಳನ್ನು ವಿದೇಶದಿಂದಲೇ ನಿಯಂತ್ರಿಸುತ್ತಿದ್ದರು ಎನ್ನಲಾಗಿದೆ. ದಾಳಿ ಸಂದರ್ಭದಲ್ಲಿ ಕೆಲವು ಡಿಜಿಟಲ್ ಸಾಮಾಗ್ರಿ ಹಾಗೂ ಕೆಲವು ದಾಖಲೆಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಹುಬ್ಬಳ್ಳಿಯ ಸಹೋದರಿಬ್ಬರನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದಾರೆ.
ಶೋಯೆಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ಹಣ ಸಹಾಯ ಮಾಡಿದ್ದ ಬಗ್ಗೆ ಕೆಲ ಡಿಜಿಟಲ್ ಸಾಕ್ಷ್ಯಗಳು ಎನ್ಐಎಗೆ ದೊರೆತಿವೆ. ಹಣ ಸಹಾಯದ ಬಗ್ಗೆ ಸಹೋದರರು ವಿದೇಶಿ ಹ್ಯಾಂಡ್ಲರ್ನ ಜೊತೆ ಕೋಡ್ ವರ್ಡ್ನಲ್ಲಿ ಚಾಟಿಂಗ್ ಮಾಡಿದ್ದಾರೆ. ಇನ್ನು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟದ ಬಳಿಕ ಆರೋಪಿ ಮುಸಾವೀರ್ ಹುಬ್ಬಳ್ಳಿಗೆ ಭೇಟಿ ನೀಡಿ, ಇಲ್ಲಿ ಹಣ ಪಡೆದು ಪಶ್ಚಿಮ ಬಂಗಾಳಕ್ಕೆ ತೆರಳಿರುವ ಅನುಮಾನ ಎನ್ಐಎ ಅಧಿಕಾರಿಗಳಲ್ಲಿ ಮೂಡಿದೆ. ಹೀಗಾಗಿ, ಸಹೋದರರಿಬ್ಬರನ್ನು ಹುಬ್ಬಳ್ಳಿ ಇಂದಿರಾನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಎನ್ಐಎ ಅಧಿಕಾರಗಳು ತೀವ್ರ ವಿಚಾರಣೆ ನಡೆಸಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ಶೇ.87 ಪೊಲೀಸರಿಗೆ ಸ್ಥೂಲಕಾಯ, ಬೊಜ್ಜು, ಕಡಿಮೆ ತೂಕದ ಸಮಸ್ಯೆ
2012ರ ಬೆಂಗಳೂರು, ಹುಬ್ಬಳ್ಳಿ ವಿಧ್ವಂಸಕ ಸಂಚು ಪ್ರಕರಣ ಆರೋಪಿ ಸಬೀಲ್ ಅಹಮದ್, 2012ಲಷ್ಕರ ಎ ತೋಯಾಬಾ ಸಂಘಟನೆಯೊಂದಿಗೆ ಸೇರಿ ಬೆಂಗಳೂರು, ಹುಬ್ಬಳ್ಳಿ ವಿಧ್ವಂಸಕ ಕೃತ್ಯ ಸಂಚು ನಡೆಸಿದ್ದ ಬಗ್ಗೆ ಮಾಹಿತಿ ದೊರೆತಿದೆ.
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ
ಮಾರ್ಚ್ 1ರಂದು ಮಧ್ಯಾಹ್ನ 12:55ರ ಸುಮಾರಿಗೆ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಲಾಗಿತ್ತು. ಕೃತ್ಯ ಎಸಗಿದ ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್ ಅನ್ನು ಎನ್ಐಎ ಅಧಿಕಾರಿಗಳು ಘಟನೆ ನಡೆದು 43 ದಿನಗಳ ಬಳಿಕ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದರು.