ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ಮೂರು ದಿನ ಎನ್‌ಐಎ ಟ್ರಾನ್ಸಿಟ್ ರಿಮ್ಯಾಂಡ್​ಗೆ ಪ್ರಮುಖ ಆರೋಪಿಗಳು

Date:

ಬೆಂಗಳೂರಿನ ವೈಟ್‌ಫೀಲ್ಡ್‌ ಬಳಿಯ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಎನ್‌ಐಎ ಅಧಿಕಾರಿಗಳು ಇಬ್ಬರು ಪ್ರಮುಖ ಆರೋಪಿಗಳನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾ ಬಳಿ ಬಂಧಿಸಿದ್ದಾರೆ. ಆರೋಪಿಗಳನ್ನು ಕೊಲ್ಕತ್ತಾದ ಎನ್‌ಐಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಿದ ತಂಡ ಇಬ್ಬರನ್ನು ಟ್ರಾನ್ಸಿಟ್ ರಿಮ್ಯಾಂಡ್​ಗೆ ನೀಡುವಂತೆ ಮನವಿ ಮಾಡಿತ್ತು. ಅದರಂತೆ, ನ್ಯಾಯಾಲಯ 3 ದಿನಗಳ ಟ್ರಾನ್ಸಿಟ್‌ ರಿಮ್ಯಾಂಡ್​ಗೆ ಅನುಮತಿ ನೀಡಿದೆ.

- Advertisement -

ಇನ್ನು ಎನ್‌ಐಎ ತಂಡ ಆರೋಪಿಗಳನ್ನು ಕೋರ್ಟ್‌ನಿಂದ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರಲಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೋಲ್ಕತ್ತಾದ ಸಮೀಪವಿರುವ ಲಾಡ್ಜ್‌ವೊಂದರಲ್ಲಿ ಪ್ರಮುಖ ಆರೋಪಿಗಳು ಅಡಗಿಕೊಂಡಿದ್ದರು. ಅವರ ಅಡಗುತಾಣವನ್ನು ಪತ್ತೆಹಚ್ಚಿ ಎನ್‌ಐಎ ತಂಡ ಅವರನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಮಾರ್ಚ್‌ 1ರಂದು ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿತ್ತು. ಘಟನೆ ನಡೆದು ಸುದೀರ್ಘ 42 ದಿನಗಳ ನಂತರ ಎನ್‌ಐಎ ಪ್ರಮುಖ ಆರೋಪಿಗಳನ್ನು ಪತ್ತೆ ಮಾಡಿದೆ. ಸ್ಪೋಟ ನಡೆಸಿದ ಬಳಿಕ ಅದ್ಬುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜೆಬ್ ಪರಾರಿಯಾಗಿದ್ದರು. ರಾಮೇಶ್ವರಂ ಕೆಫೆಯ ಪ್ಲೇಟ್ ವಾಷಿಂಗ್ ಏರಿಯಾ ಮತ್ತು ಗ್ರಾಹಕರು ಕುಳಿತುಕೊಳ್ಳುವ ಸ್ಥಳದ ಬಳಿ ಸ್ಫೋಟ ಸಂಭವಿಸಿತ್ತು. ಇದರಿಂದಾಗಿ ಕೆಫೆಯಲ್ಲಿದ್ದ ಹಲವಾರು ಗ್ರಾಹಕರು ಮತ್ತು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದರು.

ಮುಸ್ಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಐಇಡಿ ಹಾಕಿದ ವ್ಯಕ್ತಿ ಎಂದು ಎನ್‌ಐಎ ಗುರುತಿಸಿದೆ. ಅಬ್ದುಲ್ ಮಥೀನ್ ತಾಹಾ ಈ ಪಿತೂರಿಯ ಹಿಂದಿನ ಮಾಸ್ಟರ್‌ಮೈಂಡ್ ಮತ್ತು ಸ್ಫೋಟವನ್ನು ಯೋಜಿಸಿ ಕಾರ್ಯಗತಗೊಳಿಸಿದ್ದನು. ಇವರಿಬ್ಬರು ಸಹ ಆರೋಪಿ ಮಾಜ್ ಮುನೀರ್ ಅಹ್ಮದ್ ಜತೆಗೆ ಈ ಹಿಂದೆ ಭಯೋತ್ಪಾದನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ಎನ್‌ಐಎ ಹೇಳಿದೆ.

ಅಬ್ದುಲ್ ಮಥೀನ್ ಆರೋಪಿಗಳು ತಪ್ಪಿಸಿಕೊಳ್ಳುವಲ್ಲಿ ಸಹಾಯ ಮಾಡುತ್ತಿದ್ದನು. ಕಳೆದ ಒಂದು ತಿಂಗಳಿನಲ್ಲಿ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿದಂತೆ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದನು.

“ಇಬ್ಬರು ಆರೋಪಿಗಳ ಬಂಧನದ ನಂತರ ಕೋಲ್ಕತ್ತಾದ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಬಳಿಕ ನ್ಯಾಯಾಲಯವು ಮೂರು ದಿನಗಳ ಟ್ರಾನ್ಸಿಟ್ ರಿಮ್ಯಾಂಡ್​ಗೆ ನೀಡಿದೆ” ಎಂದು ಎನ್ಐಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2024ರ ಮಾರ್ಚ್ 3 ರಂದು ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಎನ್‌ಐಎ, ಈ ಇಬ್ಬರು ಆರೋಪಿಗಳಾದ ಮಾಜ್ ಮುನೀರ್ ಅಹ್ಮದ್ ಮತ್ತು ಮುಝಾಮಿಲ್ ಶೆರೀಫ್ ಅವರನ್ನು ಮಾರ್ಚ್ 1 ರಂದು ನಡೆದ ಸ್ಫೋಟದಲ್ಲಿ ಪ್ರಮುಖ ಪಾತ್ರ ವಹಿಸಿದ ಭಯೋತ್ಪಾದಕರು ಎಂದು ಗುರುತಿಸಿತ್ತು. ಐಇಡಿ ಸ್ಫೋಟವನ್ನು ನಡೆಸುವ ಇತರ ಆರೋಪಿಗಳಿಗೆ ಶೆರೀಫ್ ಬೆಂಬಲ ನೀಡುತ್ತಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಐಪಿಎಲ್ ಪಂದ್ಯ: ನಾಲ್ಕು ದಿನ ಮೆಟ್ರೋ ಅವಧಿ ವಿಸ್ತರಣೆ

ಪ್ರಕರಣದಲ್ಲಿ ವ್ಯಾಪಕ ತನಿಖೆ ಮತ್ತು ಶೋಧ ನಡೆಸುತ್ತಿದ್ದ ಎನ್‌ಐಎ ಬಹುಮಾನವನ್ನು ಕೂಡ ಘೋಷಣೆ ಮಾಡಿತ್ತು. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚಲು ಸಾಮಾಜಿಕ ಮಾಧ್ಯಮಗಳ ಮೂಲಕ ಕೂಡ ಎನ್‌ಐಎ ಪ್ರಕಟಣೆ ಹೊರಡಿಸಿತ್ತು.

“ನಾನಾ ಕೇಂದ್ರ ಸಹೋದರ ಸಂಸ್ಥೆಗಳು, ಕರ್ನಾಟಕ, ಪಶ್ಚಿಮ ಬಂಗಾಳ, ತಮಿಳುನಾಡು, ಯುಪಿ, ದೆಹಲಿ, ಎಪಿ ಹಾಗೂ ತೆಲಂಗಾಣ ರಾಜ್ಯ ಪೊಲೀಸ್ ಇಲಾಖೆಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡಿದೆ” ಎಂದು ಎನ್ಐಎ ಹೇಳಿದೆ.

ಶಂಕಿತರು ಕೋಲ್ಕತ್ತಾದ ಬಳಿಯ ಲಾಡ್ಜ್‌ನಲ್ಲಿ ತಂಗಿದ್ದಾರೆ ಎಂಬ ಬಗ್ಗೆ ಮಾಹಿತಿ ಕಲೆಹಾಕಿದ ಎನ್‌ಐಎ, ಆರೋಪಿಗಳನ್ನು ತಪ್ಪಿಸದಂತೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಪಶ್ಚಿಮ ಬಂಗಾಳ ಪೊಲೀಸರನ್ನು ವಿನಂತಿಸಿತ್ತು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಸ್ಥಳೀಯ ಪೊಲೀಸರು, ನಂತರ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಎನ್ಐಎ ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...