ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಬಾಂಬರ್​ ಓಡಾಟದ ಮತ್ತೆರಡು ವಿಡಿಯೋ ಬಿಡುಗಡೆ​ ಮಾಡಿದ ಎನ್‌ಐಎ

Date:

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಎನ್‌ಐಎ ಮತ್ತು ಸಿಸಿಬಿ ಅಧಿಕಾರಿಗಳು ಆರೋಪಿ ಪತ್ತೆಗೆ ತೀವ್ರ ಹುಡುಕಾಟ ನಡೆಸಿದ್ದಾರೆ. ಅಲ್ಲದೇ, ಆರೋಪಿಯನ್ನು ಹುಡುಕಿ ಕೊಟ್ಟವರಿಗೆ ₹10 ಲಕ್ಷ ಬಹುಮಾನ ಕೊಡುವುದಾಗಿ ಘೋಷಿಸಿದ್ದಾರೆ. ಈ ನಡುವೆ, ಶಂಕಿತ ಆರೋಪಿ ಬಿಎಂಟಿಸಿ ಬಸ್‌ ಹಾಗೂ ಬಳ್ಳಾರಿ ಬಸ್‌ ನಿಲ್ದಾಣದಲ್ಲಿ ಓಡಾಟ ನಡೆಸಿರುವ ವಿಡಿಯೊವನ್ನು ಎನ್‌ಐಎ ಬಿಡುಗಡೆ ಮಾಡಿದೆ.

- Advertisement -

ಬಿಎಂಟಿಇ ಬಸ್‌ನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ವಿಡಿಯೋ ಬಿಡುಗಡೆ ಮಾಡಲಾಗಿದೆ. ಕ್ಯಾಪ್, ಮಾಸ್ಕ್ ಹಾಗೂ ಕನ್ನಡಕ ಧರಿಸಿರುವ ಆರೋಪಿಯು ಬಸ್‌ನಲ್ಲಿ ಕುಳಿತು ಪ್ರಯಾಣಿಸುತ್ತಿರುವ ದೃಶ್ಯ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇನ್ನೊಂದು ವಿಡಿಯೋದಲ್ಲಿ ಶಂಕಿತ ತುಮಕೂರು ಮೂಲಕ ಬಳ್ಳಾರಿಗೆ ತೆರಳಿರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಅಲ್ಲಿಂದ ಬೀದರ್​​ನತ್ತ ಹೊರಟಿರುವುದಾಗಿ ಮಾಹಿತಿ ದೊರೆತಿತ್ತು. ಅದರಂತೆ, ಇದೀಗ ಬಾಂಬರ್ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.

ಮಾರ್ಚ 1ನೇ ತಾರೀಖು ರಾತ್ರಿ ಒಂಬತ್ತು ಗಂಟೆಗೆ ಬಸ್ ನಿಲ್ದಾಣದಲ್ಲಿ ಓಡಾಡಿರುವ ಬಾಂಬರ್, ಮುಖಕ್ಕೆ ಮಾಸ್ಕ್ ಹಾಕಿ, ಲೈಟ್ ಬ್ಲೂ ಕಲರ್ ಟಿ ಶರ್ಟ, ಬ್ಲಾಕ್ ಪ್ಯಾಂಟ್ ಹಾಕಿಕೊಂಡು ಓಡಾಡಿದ್ದಾನೆ.

ಈ ಕುರಿತು ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಎನ್‌ಐಎ, ಮಾಹಿತಿ ನೀಡಿದವರ ಹೆಸರನ್ನು ಗೋಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀರಿನ ಸಮಸ್ಯೆ ಬಗೆಹರಿಸಲು ವಾರ್ಡ್‌ವಾರು ನೋಡಲ್ ಅಧಿಕಾರಿ ನೇಮಕ

ಶಂಕಿತನ ಸುಳಿವು ಲಭಿಸಿದ ಕೂಡಲೇ 080 29510900, 8904241100 ಹಾಗೂ ಇ–ಮೇಲ್‌ ವಿಳಾಸ [email protected]ಗೆ ಮಾಹಿತಿ ನೀಡಬಹುದು ‌ಎಂದು ಅಧಿಕಾರಿಗಳು ಕೋರಿದ್ದಾರೆ.

ಕೆಫೆ ಬಾಂಬರ್‌ ನ ಪತ್ತೆಗಾಗಿ 500ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ಪರಿಶೀಲನೆ ನಡೆಸಲಾಗಿದೆ.  10 ಲಕ್ಷ ಬಹುಮಾನ ಘೋಷಿಸಲಾಗಿದೆ. ಶಂಕಿತನ ರೇಖಾಚಿತ್ರ ಸಿದ್ಧಪಡಿಸಲಾಗಿದೆ. ಸಿಸಿಬಿ, ಎನ್‌ಐಎ ಅಧಿಕಾರಿಗಳು ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...