ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಇಬ್ಬರು ಶಂಕಿತರನ್ನು ಪಶ್ಚಿಮ ಬಂಗಾಳದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎನ್​ಐಎ

Date:

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಇಬ್ಬರು ಪ್ರಮುಖ ಆರೋಪಿಗಳನ್ನು ಶುಕ್ರವಾರ (ಏ.12) ಪಶ್ಚಿಮ ಬಂಗಾಳದ ಮಿಡ್ನಾಪುರ್‌ದಲ್ಲಿ ಬಂಧಿಸಿದೆ. ಸದ್ಯ ವಶಕ್ಕೆ ಪಡೆದಿರುವ ಇಬ್ಬರು ಶಂಕಿತರನ್ನು ಎನ್​ಐಎ ಪಶ್ಚಿಮ ಬಂಗಾಳದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

- Advertisement -

ಶಂಕಿತರನ್ನು ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯ ಎನ್​ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಅಧಿಕಾರಿಗಳು ವಿಚಾರಣೆಗೆ ವಶಕ್ಕೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಪ್ರಮುಖ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜೀಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ನಿವಾಸಿಗಳಾದ ಶಾಜೀಬ್ ಮತ್ತು ತಾಹಾ ಅವರನ್ನು ಕಳೆದ ವಾರ ಪ್ರಮುಖ ಆರೋಪಿಗಳೆಂದು ಎನ್‌ಐಎ ಗುರುತು ಮಾಡಿತ್ತು. ಅವರನ್ನು ಬಂಧಿಸಲು ಕರ್ನಾಟಕ, ತಮಿಳುನಾಡು ಹಾಗೂ ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಶೋಧಕಾರ್ಯ ನಡೆಸಿತ್ತು. ಅಲ್ಲದೇ, 1000ಕ್ಕೂ ಹೆಚ್ಚು ಸಿಸಿಟಿವಿಗಳ ಪರಿಶೀಲನೆ ನಡೆಸಿದೆ.

ಈ ಸುದ್ದಿ ಓದಿದ್ದೀರಾ? ಸೈಬರ್‌ ವಂಚನೆ | ₹2.24 ಕೋಟಿ ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!

ಖಚಿತ ಮಾಹಿತಿ ಮತ್ತು ಗುಪ್ತಚರ ಇಲಾಖೆಗೆ ದೊರೆತ ಸುಳಿವಿನ ಆಧಾರದಲ್ಲಿ ಎನ್ಐಎ ತಂಡ ತಿಂಗಳಿಂದ ತಲೆಮರೆಸಿಕೊಂಡಿದ್ದ ಶಂಕಿತರನ್ನು ಪಶ್ಚಿಮ ಬಂಗಾಳದಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಟೋಟ ನಡೆದಿತ್ತು. ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಬಾಂಬ್ ಇಟ್ಟಿದ್ದ ವ್ಯಕ್ತಿಯ ಪತ್ತೆಗೆ ನಿರಂತರ ಶೋಧ ಕಾರ್ಯ ನಡೆಸಲಾಗಿತ್ತು. ಬಳಿಕ ತನಿಖೆಯ ಹೊಣೆಯನ್ನು ಎನ್​ಐಎಗೆ ವಹಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...