ರಾಮೇಶ್ವರಂ ಕೆಫೆ ಸ್ಪೋಟ | ಪರಿಶೀಲಿಸದ ಸುದ್ದಿಗಳು ಪ್ರಕರಣದ ತನಿಖೆಗೆ ಅಡ್ಡಿ: ಎನ್‌ಐಎ

Date:

ಬೆಂಗಳೂರಿನ ವೈಟ್‌ಫೀಲ್ಡ್‌ ಐಟಿಪಿಎಲ್ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕೃತ ಸ್ಪಷ್ಟನೆ ನೀಡಿದ್ದು, ಪರಿಶೀಲಿಸದ ಸುದ್ದಿಗಳು ಪ್ರಕರಣದ ಪರಿಣಾಮಕಾರಿ ತನಿಖೆಗೆ ಅಡ್ಡಿಯಾಗುತ್ತದೆ ಹಾಗೂ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ತೊಡಕುಂಟುಮಾಡುತ್ತದೆ. ಈ ನಿಟ್ಟಿನಲ್ಲಿ ಅಧಿಕೃತ ಮಾಹಿತಿ ಪ್ರಕಟಿಸಿ ಸಹಕರಿಸಬೇಕು ಎಂದು ತಿಳಿಸಿದೆ.

- Advertisement -

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಎನ್‌ಐಎ, “ಮಾರ್ಚ್‌ 1ರಂದು ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆಯ ಭಾಗವಾಗಿ, ಸ್ಫೋಟ ನಡೆಸಿದ ಆರೋಪಿಗಳನ್ನು ಎನ್‌ಐಎ ಗುರುತಿಸಿದೆ. ಈ ಆರೋಪಿಗಳ ಪೈಕಿ ಒಬ್ಬ ಮುಸ್ಸಾವಿರ್ ಹುಸೇನ್ ಶಾಜಿಬ್ ಹಾಗೂ ಮತ್ತೊಬ್ಬನನ್ನು ಅಬ್ದುಲ್ ಮಥೀನ್ ತಾಹಾ ಎಂದು ಗುರುತಿಸಿದೆ. ಈ ಇಬ್ಬರೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಮುಂದುವರೆದು, “ಈ ತನಿಖೆಯ ಭಾಗವಾಗಿ ಚಿಕ್ಕಮಗಳೂರಿನ ಖಾಲ್ಸಾದ ಮುಜಾಮ್ಮಿಲ್ ಶರೀಫ್ ಪ್ರಮುಖ ಆರೋಪಿಗಳಿಗೆ ಲಾಜಿಸ್ಟಿಕ್ಸ್ ಬೆಂಬಲ ನೀಡಿದ್ದನು. ಆತನನ್ನು ಎನ್‌ಐಎ ಮಾರ್ಚ್‌ 26ರಂದು ಬಂಧಿಸಿದೆ. ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ನಡೆಸಿದೆ. ಇನ್ನು ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚುವ ಮತ್ತು ಬಂಧಿಸುವ ಪ್ರಯತ್ನಗಳ ಭಾಗವಾಗಿ ಮಾ.29 ರಂದು ಆರೋಪಿಗಳನ್ನು ಹುಡುಕಿ ಕೊಟ್ಟವರಿಗೆ ಹತ್ತು ಲಕ್ಷ ರೂಪಾಯಿಗಳ ಬಹುಮಾನ ಘೋಷಿಸಲಾಗಿತ್ತು” ಎಂದು ಎನ್‌ಐಎ ತಿಳಿಸಿದೆ.

“ಎನ್‌ಐಎ ಅಧಿಕಾರಿಗಳ ತಂಡವು ಕರ್ನಾಟಕ, ತಮಿಳುನಾಡು ಹಾಗೂ ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಶೋಧ ನಡೆಸಿದೆ. ಪ್ರಕರಣದ ಸಾಕ್ಷ್ಯ ಮತ್ತು ಮಾಹಿತಿ ಸಂಗ್ರಹಿಸಲು ತಲೆಮರೆಸಿಕೊಂಡಿರುವ ಮತ್ತು ಬಂಧಿತ ಆರೋಪಿಗಳ ಕಾಲೇಜು ಮತ್ತು ಶಾಲಾ ಸಮಯದ ಸ್ನೇಹಿತರು ಸೇರಿದಂತೆ ಎಲ್ಲ ಪರಿಚಯಸ್ಥರನ್ನು ಕರೆಸಿ ವಿಚಾರಣೆ ನಡೆಸುತ್ತಿದೆ” ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ: 10ಕ್ಕೂ ಹೆಚ್ಚು ಉದ್ಯೋಗಿಗಳು ಸಿಲುಕಿರುವ ಶಂಕೆ

“ಪ್ರಕರಣವು ಭಯೋತ್ಪಾದಕ ಘಟನೆಯಾಗಿರುವುದರಿಂದ, ಸಾಕ್ಷಿಗಳ ಗುರುತಿನ ಯಾವುದೇ ಮಾಹಿತಿಯು ತನಿಖೆಗೆ ಅಡ್ಡಿಯಾಗುವುದರ ಜತೆಗೆ ವ್ಯಕ್ತಿಗಳನ್ನು ಕರೆಸುವ ಅಪಾಯವನ್ನು ಉಂಟುಮಾಡಬಹುದು. ಹಾಗಾಗಿ, ಪರಿಶೀಲಿಸದ ಸುದ್ದಿಗಳು ಪ್ರಕರಣದ ಪರಿಣಾಮಕಾರಿ ತನಿಖೆಗೆ ಅಡ್ಡಿಯಾಗುತ್ತವೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಎಲ್ಲರ ಸಹಕಾರ ನೀಡಬೇಕು” ಎಂದು ಎನ್‌ಐಎ ಕೋರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಾಂಜಾ ಮಾರಾಟ ಪ್ರಕರಣ: ಮೂವರು ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹25 ಸಾವಿರ ದಂಡ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ...

ರಾಯಚೂರು | ಮದರಕಲ್ ಅಂಬಾ ಮಠದ ವಿರುದ್ಧ ಸುಳ್ಳು ಆರೋಪ: ಅಮರೇಶ್ ಪಾಟೀಲ್

ದೇವದುರ್ಗ ತಾಲ್ಲೂಕು ಮದರಕಲ್‌ ಗ್ರಾಮದ ಅವದೂತ ರಾಜಯೋಗಿ ಸಂತ ನಾಮದೇವಗೌಡ ಶರಣರ...

ಉಡುಪಿ | ಕರಾವಳಿ ಇಲ್ಲದೆ ಕರ್ನಾಟಕದ ಅಸ್ಮಿತೆ ಇಲ್ಲ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ

"ಕರಾವಳಿ ಇಲ್ಲದೆ ಕರ್ನಾಟಕ ಪೂರ್ಣವಾಗುವುದಿಲ್ಲ. ಈ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ...

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ...