ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣ: ಸಿಸಿಬಿ ತನಿಖೆಗೆ ವರ್ಗಾಯಿಸಿ ಆದೇಶ

Date:

ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳ (ಸಿಸಿಬಿ)ಗೆ ವರ್ಗಾವಣ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಆದೇಶ ಹೊರಡಿಸಿದ್ದಾರೆ.

- Advertisement -

ಈ ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್‌ಎಎಲ್‌ ಪೊಲೀಸ್ ಠಾಣೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ಕಾಯ್ದೆ (ಯುಎಪಿಎ) ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ, ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಸಿಬಿಗೆ ವರ್ಗಾಯಿಸಿದೆ. ತನಿಖಾಧಿಕಾರಿಯಾಗಿ ಎಸಿಪಿ ನವೀನ್ ಕುಲಕರ್ಣಿ ನೇಮಕಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಬಗ್ಗೆ ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ, “ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಎಲ್ಲರೂ ಸಹಕರಿಸಬೇಕು” ಎಂದು ಕೋರಿದ್ದಾರೆ.

“ಹಾಗೆಯೇ, ಈ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ” ಎಂದು ತಿಳಿಸಿದ್ದಾರೆ.

ಸದ್ಯ ಘಟನಾ ಸ್ಥಳದಲ್ಲಿ ನಾನಾ ತನಿಖಾ ತಂಡಗಳು ಮೊಕ್ಕಾಂ ಹೂಡಿದ್ದು, ರಾತ್ರಿಯೆಲ್ಲ ತನಿಖೆ ನಡೆಸಿ ಮಾಹಿತಿ ಕಲೆಹಾಕಿದ್ದಾರೆ. ಸ್ಥಳದಲ್ಲಿ ಬಾಂಬ್ ಸ್ಯಾಂಪಲ್‌ಗಳನ್ನು ಸಂಗ್ರಹ ಮಾಡಲಾಗಿದೆ. ಸ್ಫೋಟದ ಬಗ್ಗೆ ತನಿಖೆ ಮುಂದುವರಿಸಿರುವ ಎನ್‌ಐಎ ಹಾಗೂ ಸಿಸಿಬಿ ಅಧಿಕಾರಿಗಳು ಆರೋಪಿಯ ಬೆನ್ನು ಬಿದ್ದಿದ್ದಾರೆ. ಜತೆಗೆ, ಘಟನಾ ಸ್ಥಳದಲ್ಲಿ ಸಿಕ್ಕಿರುವ ವಸ್ತುಗಳ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರು, ಕೆಫೆ ಒಳಗೆ ಹಾಗೂ ಹೊರಗಿನ ಭಾಗದಲ್ಲಿ ಶೋಧ ನಡೆಸಿದ್ದರು. ಮೊಬೈಲ್ ಸರ್ಕಿಟ್, ತಂತಿಗಳು, ಬೋಲ್ಟ್, ಬ್ಯಾಟರಿ ಹಾಗೂ ಮೊಳೆಗಳು ಪತ್ತೆಯಾಗಿರುವುದಾಗಿ ಮೂಲಗಳು ಹೇಳಿವೆ.

“ಮೊಬೈಲ್ ಸರ್ಕಿಟ್ ಬಳಸಿಕೊಂಡು ಕಚ್ಚಾ ಬಾಂಬ್ (ಐಇಡಿ) ತಯಾರಿಸಿದ್ದ ದುಷ್ಕರ್ಮಿ, ಅದನ್ನೇ ಕೆಫೆಯಲ್ಲಿ ಇರಿಸಿ ಹೋಗಿದ್ದಾನೆ” ಎಂದು ಮೂಲಗಳು ತಿಳಿಸಿವೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡ 9 ಜನರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳಿಗೆ ವೈದೇಹಿ ಆಸ್ಪತ್ರೆ, ಬ್ರೂಕ್​ ಫೀಲ್ಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈವರೆಗೆ ಇಬ್ಬರು ಡಿಸ್ಚಾರ್ಜ್ ಆಗಿದ್ದು, ಉಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ಸದ್ಯ ಆರೋಪಿಯ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ನಾಲ್ವರು ಶಂಕಿತರು ಪೊಲೀಸ್‌ ವಶಕ್ಕೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಬೆನ್ನಲ್ಲೇ ಅಲರ್ಟ್ ಆಗಿರುವ ಪೊಲೀಸರು ರಾಜ್ಯದ ನಾನಾ ಕಡೆಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರು ನಗರದ ಬಸ್‌ ಮತ್ತು ರೈಲು ನಿಲ್ದಾಣಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ರೈಲು ನಿಲ್ದಾಣಗಳಲ್ಲಿ ಭದ್ರತೆಗೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಕೆಎಸ್​​ಆರ್​​​ಟಿಸಿ ನಿಲ್ದಾಣದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಪ್ರಯಾಣಿಕರ ಬ್ಯಾಗ್‌ಗಳನ್ನು ಹೋಮ್ ಗಾರ್ಡ್ಸ್ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಭದ್ರತೆ ಹೆಚ್ಚಿಸಲಾಗಿದೆ. ಟರ್ಮಿನಲ್ ಆವರಣಗಳಲ್ಲಿ ಕ್ಯಾಬ್ ಮತ್ತು ಪ್ರಯಾಣಿಕರನ್ನು ಕರೆದೊಯ್ಯುವ ಇತರ ವಾಹನಗಳ ಕಾಯುವಿಕೆ ಅವಧಿಯನ್ನು ಕಡಿಮೆ ಮಾಡಲಾಗಿದೆ. ವಿಮಾನ ನಿಲ್ದಾಣ ಮಾತ್ರವಲ್ಲದೆ, ಪ್ರಮುಖ ಪ್ರದೇಶಗಳಲ್ಲಿಯೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...