ಎಸ್ಎಸ್ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

Date:

2024-25ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್​ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್​ 1 ರಿಂದ 22ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಮಾರ್ಚ್​​ 25 ರಿಂದ ಏಪ್ರಿಲ್​ 6 ರವರೆಗೆ ಎಸ್ಎಸ್ಎಲ್​ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

- Advertisement -

ವಿಕಾಸಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ಈ ವರ್ಷ 8,96,271 ಮಕ್ಕಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

”6,98,624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮೂರೂ ಪರೀಕ್ಷೆಯಲ್ಲಿನ ಗರಿಷ್ಠ ಅಂಕ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ. ಮೂರೂ ಪರೀಕ್ಷೆ ಬರೆಯವುದು ಕಡ್ಡಾಯವಲ್ಲ. ಯಾವ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆಯುತ್ತಾರೆ ಅದನ್ನು ಮಾತ್ರ ಪರಿಗಣನೆ ತೆಗೆದುಕೊಳ್ಳುತ್ತೇವೆ” ಎಂದು ಮಾಹಿತಿ ನೀಡಿದರು.

”2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ  20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್​ಸಿ ಪರೀಕ್ಷೆ-2 ಅನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ. ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡಲಾಗುತ್ತದೆ. ಅಡ್ವೋಕೇಟ್ ಜನರಲ್ ಅವರ ಸಲಹೆ ಪಡೆದು ಹಿಜಾಬ್ ವಿಚಾರ ನಿರ್ಧರಿಸಲಾಗುತ್ತದೆ” ಎಂದಿದ್ದಾರೆ.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ‌ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷರಾದ ಮಂಜುಳಾ, ಪದವಿ ಪೂರ್ವ ಶಿಕ್ಷಣ‌ ಇಲಾಖೆ ನಿರ್ದೇಶಕರಾದ ಸಿಂಧೂ ಬಿ ರೂಪೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ಮೊದಲ ಚಾಲಕ ರಹಿತ ರೈಲಿನ ಫೋಟೋ ಬಿಡುಗಡೆ

2024 ಎಸ್​ಎಸ್ಎಲ್​ಸಿ ವೇಳಾಪಟ್ಟಿ​

25-03-2024 ಸೋಮವಾರ ಪ್ರಥಮ ಭಾಷೆ ಪರೀಕ್ಷೆ ಕನ್ನಡ, ತೆಲುಗು, ಹಿಂದಿ, ಮರಾಥಿ, ತಮಿಳು, ಉರ್ದು, ಇಂಗ್ಲೀಷ್‌, ಇಂಗ್ಲೀಷ್‌ (NCERT)

27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ

30-03-3034 ರಂದು ವಿಜ್ಞಾನ, ರಾಜ್ಯಶಾಸ್ತ್ರ ಪರೀಕ್ಷೆ

02-04-2024 ರಂದು ಗಣಿತ, ಸಮಾಜ ಶಾಸ್ತ್ರ ಪರೀಕ್ಷೆ

03-04-2024 ರಂದು ಅರ್ಥಶಾಸ್ತ್ರ ಪರೀಕ್ಷೆ

ದ್ವಿತೀಯ ಪಿಯುಸಿ ಪರೀಕ್ಷೆಯು ಬೆಳಗ್ಗೆ 10.15ಕ್ಕೆ ಆರಂಭವಾಗಿ 1.30ಕ್ಕೆ ಮುಕ್ತಾಯಗೊಳ್ಳಲಿದೆ.

ಪರೀಕ್ಷಾ ವೇಳಾಪಟ್ಟಿ 

01-03-2024ರಂದು ಕನ್ನಡ ಹಾಗೂ ಅರೇಬಿಕ್‌ ಪರೀಕ್ಷೆ

04-03-2024ರಂದು ಗಣಿತ ಪರೀಕ್ಷೆ

05-03-2024ರಂದು ರಾಜ್ಯಶಾಸ್ತ್ರ ಸಂಖ್ಯಾಶಾಸ್ತ್ರ ಪರೀಕ್ಷೆ

06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋ ಮೊಬೈಲ್‌ ಪರೀಕ್ಷೆ

07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ

09-03-2024 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರಗೃಹ ವಿಜ್ಞಾನ ಪರೀಕ್ಷೆ

11-03-2024 ರಂದು ತರ್ಕಶಾಸ್ತ್ರವ್ಯವಹಾರ ಅಧ್ಯಯನ ಪರೀಕ್ಷೆ

13-03-2024 ರಂದು ಇಂಗ್ಲೀಷ್‌ ಪರೀಕ್ಷೆ

15-03-2024ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ ರಸಾಯನ ಶಾಸ್ತ್ರ ಮೂಲಗಣಿತ ಪರೀಕ್ಷೆ

16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ

18-03-2024ರಂದು ಭೂಗೋಳ ಶಾಸ್ತ್ರ ಜೀವಶಾಸ್ತ್ರ ಪರೀಕ್ಷೆ

20-03-2024ರಂದು ಸಮಾಜಶಾಸ್ತ್ರ ವಿದ್ಯುನ್ಮಾನ ಶಾಸ್ತ್ರ ಗಣಕ ವಿಜ್ಞಾನ ಪರೀಕ್ಷೆ

22-03-2024 ರಂದು ಹಿಂದಿ ಪರೀಕ್ಷೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...