ಬೆಂಗಳೂರು | ಮಹಾರಾಣಿ ಕಾಲೇಜು ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

Date:

ಬೆಂಗಳೂರಿನ ಮಹಾರಾಣಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಓರ್ವ ವಿದ್ಯಾರ್ಥಿನಿ ಡೆತ್‌ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪಾವನಾ(19) ಮೃತ ಯುವತಿ. ಮಹಾರಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ಓದುತ್ತಿದ್ದರು. ಜೂನ್ 16ರಂದು ಹಾಸ್ಟಲ್‌ನ ರೂಮ್‌ ನಂಬರ್ 17ರಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದೇ ದಿನ ರಾತ್ರಿ 11.30 ಸುಮಾರಿಗೆ ಗೆಳತಿಯರು ಪಾವನಾ ರೂಂನಲ್ಲಿ ಇಣುಕಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಬಗ್ಗೆ ಕೂಡಲೇ ವಿದ್ಯಾರ್ಥಿನಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೈಗ್ರೌಂಡ್ಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಕಲೆಹಾಕಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕಂದಕಕ್ಕೆ ಬಿದ್ದ ಕಾರು; ಯುವತಿ ಸಾವು

ಈ ವೇಳೆ, ಪೊಲೀಸರಿಗೆ ಪಾವನಾ ಬರೆದಿಡ್ಡ ಡೆತ್‌ನೋಟ್ ಪತ್ತೆಯಾಗಿದೆ. ಆ್ಯಪ್ವೊಂದರಲ್ಲಿ ಪಾವನಾ ₹15 ಸಾವಿರ ಹೂಡಿಕೆ ಮಾಡಿದ್ದು ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ.

ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡಿಗರಿಗೆ ಉದ್ಯೋಗ | ಕಾರ್ಪೊರೇಟ್ ಲಾಬಿಗೆ ಮಣಿದ ಸರ್ಕಾರ: ಕರವೇ ಅಧ್ಯಕ್ಷ ಟಿ ಎ ನಾರಾಯಣ ಗೌಡ ಆರೋಪ

"ಕಾರ್ಪೊರೇಟ್ ಲಾಬಿ, ಒತ್ತಡಕ್ಕೆ ಮಣಿದು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಕಲ್ಪಿಸುವ...

ಚಿತ್ರದುರ್ಗ‌ | ಭಾವೈಕ್ಯತೆಯ ಮೊಹರಂ; ಸಾರ್ವಜನಿಕರಿಗೆ ತಿನಿಸು, ಪಾನೀಯ ವಿತರಣೆ

ಹಿಂದೂ-ಮುಸಲ್ಮಾನರು ಕೂಡಿಕೊಂಡು ಭಾವೈಕ್ಯತೆಯ ಸಂಕೇತವಾಗಿ ಆಚರಿಸುವ ಮೊಹರಂ ಮೆರವಣಿಗೆ ಚಿತ್ರದುರ್ಗ ನಗರದಲ್ಲಿ...

‌ಬೆಳಗಾವಿ | ನಮ್ಮ ಧರ್ಮ ನಮ್ಮೊಂದಿಗೆ, ನಮ್ಮ ಪ್ರೀತಿ ಎಲ್ಲರೊಂದಿಗೆ: ಮುಹಮ್ಮದ್ ಕುಂಞಿ

ನಮ್ಮ ಧರ್ಮ ನಮ್ಮೊಂದಿಗೆ ನಮ್ಮ ಪ್ರೀತಿ ಎಲ್ಲರೊಂದಿಗೆ ಇರಲಿ. ನಾವು ನಮ್ಮ...

ಕಲಬುರಗಿ | ಪತ್ನಿ ಕೊಲೆಗೆ ಯತ್ನಿಸಿದ ಪತಿಗೆ 2 ವರ್ಷ ಜೈಲು, ದಂಡ

ಪತ್ನಿಗೆ ಕೌಟುಂಬಿಕ ಹಿಂಸೆ ನೀಡಿ, ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಪತಿಗೆ...