“ವಾರದ ಹಿಂದೆಯಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಎನ್‌ಡಿಎ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ನನ್ನ ಬೆಂಬಲ ಇದೆ. ಪಕ್ಷ ಸೂಚಿದರೆ, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ” ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಈ ಬಗ್ಗೆ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಗೆಲುವು ಕಂಡ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೇನೆ. ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದರೆ, ನಾನು ಎನ್‌ಡಿಎ ಅಭ್ಯರ್ಥಿ ಪರವಾಗಿದ್ದೇನೆ ಎಂದೇ ಅರ್ಥ. ಯಾರೂ ಗೆದ್ದ ಕ್ಷೇತ್ರವನ್ನ ಬಿಟ್ಟುಕೊಡುವುದಿಲ್ಲ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗನ್ ಇಟ್ಕೊಂಡು ಸಿಎಂಗೆ ಹಾರ : ಪಿಎಸ್ಐ ಸೇರಿ ನಾಲ್ವರು ಅಮಾನತು
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಯಾರನ್ನು ಬೆಂಬಲಿಸಬೇಕು ಎಂಬುದು ಅವರಿಗೆ ಬಿಟ್ಟ ವಿಚಾರ” ಎಂದಿದ್ದಾರೆ.
“ನನ್ನೊಂದಿಗೆ ಪ್ರಚಾರದಲ್ಲಿ ಪಾಲ್ಗೊಳ್ಳಿ ಎಂದು ನಾನು ದರ್ಶನ್ ಅವರಿಗೆ ಹೇಳುವುದಿಲ್ಲ. ನಾನೂ ಅಭ್ಯರ್ಥಿಯಾದ ಸಮಯದಲ್ಲಿಯೂ ನಾನು ಅವರನ್ನು ಪ್ರಚಾರಕ್ಕೆ ಕರೆದಿಲ್ಲ. ಅವರೇ ಬಂದು ಪ್ರಚಾರ ಮಾಡಿದ್ದರು. ಇದು ನನ್ನ ವಿಷಯದಲ್ಲಿ ಮಾತ್ರವೇ ಹೊರತು ಬೇರೆಯವರ ವಿಷಯದಲ್ಲಿ ಅಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.